AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs KKR ಪಂದ್ಯಕ್ಕೆ 5 ಆಟಗಾರರು ಅಲಭ್ಯ!

IPL 2026 RCB vs KKR: ಇಂಡಿಯನ್ ಪ್ರೀಮಿಯರ್ ಲೀಗ್​ನ ಎಲ್​ ಪ್ರಿಮೆರೊ ಮ್ಯಾಚ್​ಗೆ ವೇದಿಕೆ ಸಿದ್ಧವಾಗಿದೆ. ರಾಯ್​ಪುರ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯದಲ್ಲಿ ಉಭಯ ತಂಡಗಳ ಐವರು ಆಟಗಾರರು ಕಾಣಿಸಿಕೊಳ್ಳುವುದಿಲ್ಲ.

ಝಾಹಿರ್ ಯೂಸುಫ್
|

Updated on: May 13, 2026 | 7:04 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮುಖಾಮುಖಿಯಾಗಲಿದೆ. ರಾಯ್​ಪುರದ ಶಾಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಐವರು ಆಟಗಾರರು ಅಲಭ್ಯರಾಗಲಿದ್ದಾರೆ. ಅವರೆಂದರೆ... (PC: IPL)

1 / 6
ಹರ್ಷಿತ್ ರಾಣಾ: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರಮುಖ ವೇಗಿ ಹರ್ಷಿತ್ ರಾಣಾ ಮೊಣಕಾಲು ಗಾಯದ ಕಾರಣ ಇಡೀ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಹರ್ಷಿತ್ ರಾಣಾ ಕಾಣಿಸಿಕೊಳ್ಳುವುದಿಲ್ಲ. (PC: IPL)

2 / 6
ಯಶ್ ದಯಾಳ್: ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್​ ವಿರುದ್ಧದ ಪಂದ್ಯದಲ್ಲಿ ಯಶ್ ದಯಾಳ್ ಕಾಣಿಸಿಕೊಳ್ಳುವುದಿಲ್ಲ. (PC: IPL)

3 / 6
ಆಕಾಶ್ ದೀಪ್: ಬೆನ್ನು ನೋವಿನ ಕಾರಣ ವೇಗದ ಬೌಲರ್ ಆಕಾಶ್ ದೀಪ್ ಕೂಡ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇವರ ಬದಲಿಗೆ ಸೌರಭ್ ದುಬೆ ಅವರನ್ನು ಆಯ್ಕೆ ಮಾಡಲಾಗಿದೆ. ಹೀಗಾಗಿ ಆರ್​ಸಿಬಿ ವಿರುದ್ಧದ ಮ್ಯಾಚ್​ನಲ್ಲಿ ಆಕಾಶ್ ದೀಪ್ ಕಣಕ್ಕಿಳಿಯುವುದಿಲ್ಲ. (PC: IPL)

4 / 6
ನುವಾನ್ ತುಷಾರ: ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕನ್ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್​ ಇನ್ನೂ ಸಹ ಎನ್​ಒಸಿ ನೀಡಿಲ್ಲ. ಇದೇ ಕಾರಣದಿಂದಾಗಿ ಅವರು ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಕೆಕೆಆರ್ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ. (PC: IPL)

5 / 6
ಮತೀಶ ಪತಿರಾಣ: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿರುವ ಶ್ರೀಲಂಕಾ ವೇಗಿ ಮತೀಶ ಪತಿರಾಣ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. (PC: IPL)

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us