
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ರಾಯ್ಪುರ್ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಉಭಯ ತಂಡಗಳ ಐವರು ಆಟಗಾರರು ಅಲಭ್ಯರಾಗಿದ್ದಾರೆ. ಅವರೆಂದರೆ... (PC: IPL)

ಫಿಲ್ ಸಾಲ್ಟ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ದಾಂದಿಗ ಫಿಲ್ ಸಾಲ್ಟ್ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಹೆಬ್ಬೆರಳಿನ ಗಾಯಕ್ಕೆ ತುತ್ತಾಗಿರುವ ಸಾಲ್ಟ್ ಚಿಕಿತ್ಸೆಗಾಗಿ ಇಂಗ್ಲೆಂಡ್ಗೆ ಮರಳಿದ್ದು, ಹೀಗಾಗಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ. (PC: IPL)

ಮಿಚೆಲ್ ಸ್ಯಾಂಟ್ನರ್: ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ನ್ಯೂಝಿಲೆಂಡ್ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ ಗಾಯಗೊಂಡು ಐಪಿಎಲ್ನಿಂದ ಹೊರಗುಳಿದಿದ್ದಾರೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಸ್ಯಾಂಟ್ನರ್ ಕಣಕ್ಕಿಳಿಯುವುದಿಲ್ಲ. (PC: IPL)

ನುವಾನ್ ತುಷಾರ: ಆರ್ಸಿಬಿ ವೇಗಿ ನುವಾನ್ ತುಷಾರ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಇನ್ನೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ತುಷಾರ ಕೂಡ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. (PC: IPL)

ಅಥರ್ವ ಅಂಕೋಲೇಕರ್: ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರ ಅಥರ್ವ ಅಂಕೋಲೇಕರ್ ಕೂಡ ಗಾಯದ ಕಾರಣ ಐಪಿಎಲ್ನಿಂದ ಹೊರಬಿದ್ದಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಕೂಡ ಆರ್ಸಿಬಿ ವಿರುದ್ಧದ ಮ್ಯಾಚ್ನಲ್ಲಿ ಕಾಣಿಸಿಕೊಳ್ಳುವುದಿಲ್ಲ. (PC: IPL)

ಯಶ್ ದಯಾಳ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಎಡಗೈ ವೇಗಿ ಯಶ್ ದಯಾಳ್ ಈ ಬಾರಿಯ ಐಪಿಎಲ್ನಿಂದ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಟೂರ್ನಿಯಿಂದ ಹಿಂದೆ ಸರಿದಿರುವ ದಯಾಳ್ ಕೂಡ ಮುಂಬೈ ಇಂಡಿಯನ್ಸ್ ವಿರುದ್ಧದ ಮ್ಯಾಚ್ನಲ್ಲಿ ಕಾಣಿಸಿಕೊಳ್ಳುವುದಿಲ್ಲ. (PC: IPL)

ಹಾರ್ದಿಕ್ ಪಾಂಡ್ಯ: ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ ಅವರು ಈಗಾಗಲೇ ರಾಯ್ಪುರ ತಲುಪಿದ್ದಾರೆ. ಇದಾಗ್ಯೂ ಅವರು ಇಂದು ಕಣಕ್ಕಿಳಿಯುವುದು ಖಚಿತವಾಗಿಲ್ಲ. ಅಂದರೆ ಇಂದು ನಡೆಯಲಿರುವ ಫಿಟ್ನೆಸ್ ಟೆಸ್ಟ್ಬಳಿಕ ಆಡುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. (PC: IPL)

ಸೂರ್ಯಕುಮಾರ್ ಯಾದವ್: ಈ ಹಿಂದೆ ಆರ್ಸಿಬಿ ವಿರುದ್ಧದ ಪಂದ್ಯಕ್ಕೆ ವೈಯುಕ್ತಿಕ ಕಾರಣಗಳಿಂದಾಗಿ ಸೂರ್ಯಕುಮಾರ್ ಯಾದವ್ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಶನಿವಾರ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ಇಂದಿನ ಮ್ಯಾಚ್ನಲ್ಲಿ ಸೂರ್ಯ ಕಣಕ್ಕಿಳಿಯುವುದನ್ನು ಎದುರು ನೋಡಬಹುದು. (PC: IPL)