IPL 2026: ಹರಾಜಿಗೂ ಮುನ್ನ 7 ಆಟಗಾರರು ಬೇರೆ ತಂಡಗಳಿಗೆ ಎಂಟ್ರಿ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ರಿಟೆನ್ಷನ್ಗೂ ಮುನ್ನ 10 ಫ್ರಾಂಚೈಸಿಗಳಿಗೆ ಆಟಗಾರರ ಟ್ರೇಡಿಂಗ್ಗೆ ಅವಕಾಶ ನೀಡಲಾಗಿದೆ. ಈ ಆಯ್ಕೆಯ ಮೂಲಕ ಇದೀಗ ಕೆಲ ಫ್ರಾಂಚೈಸಿಗಳು ಬೇರೆ ತಂಡಗಳಲ್ಲಿದ್ದ ಆಟಗಾರರನ್ನು ಖರೀದಿಸಿದೆ. ಹೀಗೆ ಟ್ರೇಡಿಂಗ್ ಪ್ರಕ್ರಿಯೆಯ ಮೂಲಕ ಹೊಸ ತಂಡಗಳಿಗೆ ಆಯ್ಕೆಯಾಗಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...
Updated on:Nov 15, 2025 | 4:02 PM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜು ಮುನ್ನ 10 ಆಟಗಾರರು ಬೇರೆ ಬೇರೆ ತಂಡಗಳಿಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ಟ್ರೇಡಿಂಗ್ ಆಯ್ಕೆ ಮೂಲಕ. ಇಲ್ಲಿ ಕೆಲವರು ಸ್ವಾಪ್ ಡೀಲ್ ಮೂಲಕ ಟ್ರೇಡ್ ಆದರೆ, ಇನ್ನು ಕೆಲ ಆಟಗಾರು ಕ್ಯಾಶ್ ಡೀಲ್ ಮೂಲಕ ಬೇರೆ ತಂಡಗಳಿಗೆ ಸೇರ್ಪಡೆಯಾಗಿದ್ದಾರೆ. ಅದರಂತೆ ಹರಾಜಿಗೂ ಮುನ್ನ ಟ್ರೇಡ್ ಆಗಿರುವ ಆಟಗಾರರ ಸಂಪೂರ್ಣ ಪಟ್ಟಿ ಈ ಕೆಳಗಿನಂತಿದೆ...

ಸಂಜು ಸ್ಯಾಮ್ಸನ್: ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮುಂದಿನ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಸಿಎಸ್ಕೆ ಫ್ರಾಂಚೈಸಿಯು ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ನೀಡಿ ಸಂಜು ಸ್ಯಾಮ್ಸನ್ ಅವರನ್ನು ಸ್ವಾಪ್ ಡೀಲ್ ಮಾಡಿಕೊಂಡಿದೆ.

ಶಾದೂರ್ಲ್ ಠಾಕೂರ್: ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಅವರನ್ನು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಖರೀದಿಸಿದೆ. ಎಲ್ಎಸ್ಜಿ ಫ್ರಾಂಚೈಸಿಗೆ 2 ಕೋಟಿ ರೂ. ನೀಡುವ ಮೂಲಕ ಮುಂಬೈ ಇಂಡಿಯನ್ಸ್ ಶಾರ್ದೂಲ್ ಠಾಕೂರ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದಾರೆ.

ರವೀಂದ್ರ ಜಡೇಜಾ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಮುಂದಿನ ಸೀಸನ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿಯಲಿದ್ದಾರೆ. ರವೀಂದ್ರ ಜಡೇಜಾ ಅವರನ್ನು ಸ್ವಾಪ್ ಡೀಲ್ ಮಾಡಿಕೊಳ್ಳುವ ಮೂಲಕ ಸಿಎಸ್ಕೆ ಸಂಜು ಸ್ಯಾಮ್ಸನ್ ಅವರನ್ನು ಖರೀದಿಸಿದೆ.

ಅರ್ಜುನ್ ತೆಂಡೂಲ್ಕರ್: ಮುಂಬೈ ಇಂಡಿಯನ್ಸ್ ತಂಡದ ಆಲ್ರೌಂಡರ್ ಅರ್ಜುನ್ ತೆಂಡೂಲ್ಕರ್ ಮುಂಬರುವ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 30 ಲಕ್ಷ ರೂ.ಗೆ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಅರ್ಜುನ್ ತೆಂಡೂಲ್ಕರ್ ಅವರನ್ನು ಟ್ರೇಡ್ ಮಾಡಿಕೊಂಡಿದೆ.

ಶೆರ್ಫೆನ್ ರದರ್ಫೋರ್ಡ್: ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದ ವೆಸ್ಟ್ ಇಂಡೀಸ್ ದಾಂಡಿಗ ಶೆರ್ಫೆನ್ ರದರ್ಫೋರ್ಡ್ ಅವರನ್ನು 2.6 ಕೋಟಿ ರೂ.ಗೆ ಟ್ರೇಡ್ ಮಾಡಿಕೊಳ್ಳುವಲ್ಲಿಯೂ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಯಶಸ್ವಿಯಾಗಿದೆ. ಅದರಂತೆ ಐಪಿಎಲ್ 2026 ರಲ್ಲಿ ಶೆರ್ಫೆನ್ ರದರ್ಫೋರ್ಡ್ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲಿದ್ದಾರೆ.

ಮೊಹಮ್ಮದ್ ಶಮಿ: ಸನ್ರೈಸರ್ಸ್ ಹೈದರಾಬಾದ್ ತಂಡದಲ್ಲಿದ್ದ ವೇಗದ ಬೌಲರ್ ಮೊಹಮ್ಮದ್ ಶಮಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಟ್ರೇಡ್ ಆಗಿದ್ದಾರೆ. ಎಸ್ಆರ್ಹೆಚ್ ಫ್ರಾಂಚೈಸಿಗೆ 10 ಕೋಟಿ ರೂ. ನೀಡಿ ಶಮಿಯನ್ನು ಲಕ್ನೋ ಸೂಪರ್ ಜೈಂಟ್ಸ್ ಖರೀದಿಸಿದೆ.

ಸ್ಯಾಮ್ ಕರನ್: ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಸ್ವಾಪ್ ಡೀಲ್ನೊಂದಿಗೆ ಸ್ಯಾಮ್ ಕರನ್ ಆರ್ಆರ್ ತಂಡದ ಪಾಲಾಗಿದ್ದಾರೆ. ಸಂಜು ಸ್ಯಾಮ್ಸನ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಸಿಎಸ್ಕೆ ರವೀಂದ್ರ ಜಡೇಜಾ ಹಾಗೂ ಸ್ಯಾಮ್ ಕರನ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ನೀಡಿದ್ದಾರೆ.
Published On - 9:54 am, Sat, 15 November 25
