AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಸ್ಟಾರ್ ಆಲ್​ರೌಂಡರ್​ನನ್ನು ಕೈಬಿಟ್ಟ RCB

IPL 2026 Retention: ಐಪಿಎಲ್ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಿಂದ ಸ್ಟಾರ್ ಆಲ್​ರೌಂಡರ್ ಹೊರಬೀಳುವುದು ಖಚಿತವಾಗಿದೆ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಇಂಗ್ಲೆಂಡ್​​ನ ಆಲ್​ರೌಂಡರ್​ನನ್ನು ರಿಟೈನ್ ಮಾಡದಿರಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ನಿರ್ಧರಿಸಿದೆ.

ಝಾಹಿರ್ ಯೂಸುಫ್
|

Updated on:Nov 15, 2025 | 9:24 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19ರ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೆಲವು ಆಟಗಾರರನ್ನು ರಿಲೀಸ್ ಮಾಡಲು ನಿರ್ಧರಿಸಿದೆ. ಈ ರಿಲೀಸ್ ಪಟ್ಟಿಯಲ್ಲಿ ಇಂಗ್ಲೆಂಡ್​ನ ಸ್ಟಾರ್ ಆಲ್​ರೌಂಡರ್​ನ ಹೆಸರು ಮುಂಚೂಣಿಯಲ್ಲಿದೆ.

1 / 5
ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಕಳೆದ ಸೀಸನ್​ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಕಾರಣ ಲಿವಿಂಗ್​ಸ್ಟೋನ್ ಅವರನ್ನು ತಂಡದಿಂದ ರಿಲೀಸ್ ಮಾಡಲು ನಿರ್ಧರಿಸಲಾಗಿದೆ ಎಂದು ಆರ್​ಸಿಬಿ ಮೂಲಗಳು ತಿಳಿಸಿವೆ.

2 / 5
ಲಿಯಾಮ್ ಲಿವಿಂಗ್​ಸ್ಟೋನ್ ಕಳೆದ ಸೀಸನ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 10 ಪಂದ್ಯಗಳನ್ನಾಡಿದ್ದರು. ಈ ವೇಳೆ ಒಂದು ಅರ್ಧಶತಕದೊಂದಿಗೆ ಕಲೆಹಾಕಿರುವುದು ಕೇವಲ 111 ರನ್​​ಗಳು ಮಾತ್ರ. ಅಂದರೆ ಕೇವಲ 16ರ ಸರಾಸರಿಯಲ್ಲಿ ರನ್​ ಗಳಿಸಿದ್ದರು. ಇನ್ನು ಬೌಲಿಂಗ್ ಮೂಲಕ ಪಡೆದಿರುವುದು ಕೇವಲ 2 ವಿಕೆಟ್ ಮಾತ್ರ.

3 / 5
ಹೀಗಾಗಿ ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ರಿಲೀಸ್ ಮಾಡಲು ಆರ್​ಸಿಬಿ ನಿರ್ಧರಿಸಿದೆ. ಅತ್ತ ಲಿವಿಂಗ್​ಸ್ಟೋನ್ ಅವರ ಬಿಡುಗಡೆಯಿಂದಾಗಿ ಆರ್​ಸಿಬಿ ತಂಡದ ಪರ್ಸ್​ ಮೊತ್ತಕ್ಕೆ 8.75 ಕೋಟಿ ರೂ. ಸೇರ್ಪಡೆಯಾಗಲಿದೆ. ಏಕೆಂದರೆ ಕಳೆದ ಸೀಸನ್​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 8.75 ಕೋಟಿ ರೂ. ಲಿಯಾಮ್ ಲಿವಿಂಗ್​ಸ್ಟೋನ್ ಅವರನ್ನು ಖರೀದಿಸಿದ್ದರು. ಇದೀಗ ಅವರ ಬಿಡುಗಡೆಯಿಂದಾಗಿ ಆರ್​ಸಿಬಿ ತಂಡದ ಹರಾಜು ಮೊತ್ತಕ್ಕೆ 8.75 ಕೋಟಿ ರೂ. ಸೇರ್ಪಡೆಯಾಗಲಿದೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹೇಝಲ್​ವುಡ್, ರಾಸಿಖ್ ಸಲಾಂ, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ, ಲಿಯಾಮ್ ಲಿವಿಂಗ್​ಸ್ಟೋನ್ (ಔಟ್).

5 / 5

Published On - 9:23 am, Sat, 15 November 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!