
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೆಲವು ಆಟಗಾರರನ್ನು ರಿಲೀಸ್ ಮಾಡಲು ನಿರ್ಧರಿಸಿದೆ. ಈ ರಿಲೀಸ್ ಪಟ್ಟಿಯಲ್ಲಿ ಇಂಗ್ಲೆಂಡ್ನ ಸ್ಟಾರ್ ಆಲ್ರೌಂಡರ್ನ ಹೆಸರು ಮುಂಚೂಣಿಯಲ್ಲಿದೆ.

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಲಿಯಾಮ್ ಲಿವಿಂಗ್ಸ್ಟೋನ್ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಕಳೆದ ಸೀಸನ್ನಲ್ಲಿ ಕಳಪೆ ಪ್ರದರ್ಶನ ನೀಡಿರುವ ಕಾರಣ ಲಿವಿಂಗ್ಸ್ಟೋನ್ ಅವರನ್ನು ತಂಡದಿಂದ ರಿಲೀಸ್ ಮಾಡಲು ನಿರ್ಧರಿಸಲಾಗಿದೆ ಎಂದು ಆರ್ಸಿಬಿ ಮೂಲಗಳು ತಿಳಿಸಿವೆ.

ಲಿಯಾಮ್ ಲಿವಿಂಗ್ಸ್ಟೋನ್ ಕಳೆದ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 10 ಪಂದ್ಯಗಳನ್ನಾಡಿದ್ದರು. ಈ ವೇಳೆ ಒಂದು ಅರ್ಧಶತಕದೊಂದಿಗೆ ಕಲೆಹಾಕಿರುವುದು ಕೇವಲ 111 ರನ್ಗಳು ಮಾತ್ರ. ಅಂದರೆ ಕೇವಲ 16ರ ಸರಾಸರಿಯಲ್ಲಿ ರನ್ ಗಳಿಸಿದ್ದರು. ಇನ್ನು ಬೌಲಿಂಗ್ ಮೂಲಕ ಪಡೆದಿರುವುದು ಕೇವಲ 2 ವಿಕೆಟ್ ಮಾತ್ರ.

ಹೀಗಾಗಿ ಲಿಯಾಮ್ ಲಿವಿಂಗ್ಸ್ಟೋನ್ ಅವರನ್ನು ರಿಲೀಸ್ ಮಾಡಲು ಆರ್ಸಿಬಿ ನಿರ್ಧರಿಸಿದೆ. ಅತ್ತ ಲಿವಿಂಗ್ಸ್ಟೋನ್ ಅವರ ಬಿಡುಗಡೆಯಿಂದಾಗಿ ಆರ್ಸಿಬಿ ತಂಡದ ಪರ್ಸ್ ಮೊತ್ತಕ್ಕೆ 8.75 ಕೋಟಿ ರೂ. ಸೇರ್ಪಡೆಯಾಗಲಿದೆ. ಏಕೆಂದರೆ ಕಳೆದ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 8.75 ಕೋಟಿ ರೂ. ಲಿಯಾಮ್ ಲಿವಿಂಗ್ಸ್ಟೋನ್ ಅವರನ್ನು ಖರೀದಿಸಿದ್ದರು. ಇದೀಗ ಅವರ ಬಿಡುಗಡೆಯಿಂದಾಗಿ ಆರ್ಸಿಬಿ ತಂಡದ ಹರಾಜು ಮೊತ್ತಕ್ಕೆ 8.75 ಕೋಟಿ ರೂ. ಸೇರ್ಪಡೆಯಾಗಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹೇಝಲ್ವುಡ್, ರಾಸಿಖ್ ಸಲಾಂ, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್ಗಿಡಿ, ಲಿಯಾಮ್ ಲಿವಿಂಗ್ಸ್ಟೋನ್ (ಔಟ್).
Published On - 9:23 am, Sat, 15 November 25