IPL 2026: RCB ತಂಡಕ್ಕೆ ಇಂಗ್ಲೆಂಡ್ ವೇಗಿ ಎಂಟ್ರಿ
Richard Gleeson: 38 ವರ್ಷದ ರಿಚರ್ಡ್ ಗ್ಲೀಸನ್ ಇಂಗ್ಲೆಂಡ್ ಪರ 6 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 9 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಹಾಗೆಯೇ ಈವರೆಗೆ 141 ಟಿ20 ಪಂದ್ಯಗಳನ್ನಾಡಿರುವ ಗ್ಲೀಸನ್ ಪಡೆದಿರುವುದು ಬರೋಬ್ಬರಿ 170 ವಿಕೆಟ್ಗಳು. ಅಲ್ಲದೆ ಟಿ20 ಕ್ರಿಕೆಟ್ನಲ್ಲಿ ಈವರೆಗೆ 2867 ಎಸೆತಗಳನ್ನು ಎಸೆದಿರುವ ಅವರು ಕೇವಲ 3909 ರನ್ ಮಾತ್ರ ನೀಡಿದ್ದಾರೆ.
Updated on: May 21, 2026 | 2:07 PM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 13 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಳೂರು ತಂಡಕ್ಕೆ ಇನ್ನುಳಿದಿರುವುದು ಒಂದು ಲೀಗ್ ಮ್ಯಾಚ್ ಮಾತ್ರ. ಈ ಪಂದ್ಯಕ್ಕೂ ಮುನ್ನ ಆರ್ಸಿಬಿ ಪಡೆಗೆ ಇಂಗ್ಲೆಂಡ್ ವೇಗಿ ಎಂಟ್ರಿ ಕೊಟ್ಟಿದ್ದಾರೆ. (PC: IPL)

ಇಂಗ್ಲೆಂಡ್ ತಂಡದ 38 ವರ್ಷದ ಅನುಭವಿ ವೇಗಿ ರಿಚರ್ಡ್ ಗ್ಲೀಸನ್ ಅವರನ್ನು ಇತ್ತೀಚೆಗೆ ಆರ್ಸಿಬಿ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆರ್ಸಿಬಿ ತಂಡದಲ್ಲಿದ್ದ ಶ್ರೀಲಂಕಾ ವೇಗಿ ನುವಾನ್ ತುಷಾರ ಗಾಯದ ಕಾರಣ ಹೊರಗುಳಿದಿದ್ದು, ಅವರ ಬದಲಿಗೆ ಗ್ಲೀಸನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. (PC: IPL)

ಅದರಂತೆ ಇದೀಗ ರಿಚರ್ಡ್ ಗ್ಲೀಸನ್ ಆರ್ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಅಲ್ಲದೆ ಜೇಕಬ್ ಡಫಿ ಜೊತೆಗೂಡಿ ಬೌಲಿಂಗ್ ಅಭ್ಯಾಸದಲ್ಲೂ ನಿರತರಾಗಿದ್ದಾರೆ. ಇದಾಗ್ಯೂ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಗ್ಲೀಸನ್ಗೆ ಚಾನ್ಸ್ ಸಿಗುವ ಸಾಧ್ಯತೆಯಿಲ್ಲ. (PC: IPL)

ಏಕೆಂದರೆ ಜೇಕಬ್ ಬೆಥೆಲ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್ ಹಾಗೂ ಜೋಶ್ ಹೇಝಲ್ವುಡ್ ಕಣಕ್ಕಿಳಿಯುತ್ತಿರುವ ಕಾರಣ ಕಿವೀಸ್ ವೇಗಿ ಜೇಕಬ್ ಡಫಿ ಬೆಂಚ್ ಕಾಯುತ್ತಿದ್ದಾರೆ. ಒಂದು ವೇಳೆ ಆಡುವ ಬಳಗದಲ್ಲಿ ಬದಲಾವಣೆ ಮಾಡಿದರೆ, ಡಫಿಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚು. (PC: IPL)

ಇದಾಗ್ಯೂ ಕೆಲವೇ ಪಂದ್ಯಗಳು ಮಾತ್ರ ಬಾಕಿ ಇರುವಾಗ ಗ್ಲೀಸನ್ ಅವರನ್ನು ಆಯ್ಕೆ ಮಾಡಿಕೊಂಡಿರುವುದು ಯಾಕೆ ಎಂಬ ಪ್ರಶ್ನೆ ಮೂಡುವುದು ಸಹಜ. ಇದಕ್ಕೆ ಉತ್ತರ ಬ್ಯಾಕಪ್ ಪ್ಲೇಯರ್. ಅಂದರೆ ಜೋಶ್ ಹೇಝಲ್ವುಡ್ ಫಿಟ್ನೆಸ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅತ್ತ ಡಫಿ ಕೂಡ ಸಂಪೂರ್ಣ ಫಿಟ್ ಆಗಿಲ್ಲ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. (PC: IPL)

ಒಂದು ವೇಳೆ ಈ ಇಬ್ಬರು ಪ್ರಮುಖ ವೇಗಿಗಳು ಗಾಯಗೊಂಡರೆ ಕಣಕ್ಕಿಳಿಸಲು ಬ್ಯಾಕಪ್ ಆಗಿ ರಿಚರ್ಡ್ ಗ್ಲೀಸನ್ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿ ಗ್ಲೀಸನ್ ಅವರನ್ನೇ ಯಾಕೆ ಆಯ್ಕೆ ಮಾಡಿಕೊಂಡರು? ಎಂಬ ಪ್ರಶ್ನೆಗೆ ಅವರು ಇತ್ತೀಚಿನ ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ ನೀಡಿದ ಅದ್ಭುತ ಪ್ರದರ್ಶನ ಎಂಬ ಉತ್ತರ ಸಿಗುತ್ತಿದೆ. (PC: IPL)

ಇತ್ತೀಚೆಗೆ ಮುಕ್ತಾಯಗೊಂಡ ಪಿಎಸ್ಎಲ್ (PSL 2026) ಟೂರ್ನಿಯಲ್ಲಿ ಇಸ್ಲಾಮಾಬಾದ್ ಯುನೈಟೆಡ್ ಪರ ಆಡಿದ್ದ ಗ್ಲೀಸನ್ ಕೇವಲ 7.14 ಎಕಾನಮಿ ರೇಟ್ನಲ್ಲಿ ಮಾತ್ರ ರನ್ ಬಿಟ್ಟು ಕೊಟ್ಟಿದ್ದರು. ಅಲ್ಲದೆ ಆರ್ಸಿಬಿ ತಂಡದ ಹೆಡ್ ಕೋಚ್ ಆ್ಯಂಡಿ ಫ್ಲವರ್ ಅವರಿಗೆ ರಿಚರ್ಡ್ ಗ್ಲೀಸನ್ ಅವರ ಬೌಲಿಂಗ್ ಶೈಲಿಯ ಬಗ್ಗೆ ಚೆನ್ನಾಗಿ ತಿಳಿದಿದೆ. 38ರ ಹರೆಯದಲ್ಲೂ ಗ್ಲೀಸನ್ 140+ ಕಿಮೀ ವೇಗದಲ್ಲಿ ಬೌಲಿಂಗ್ ಮಾಡಬಲ್ಲರು. (PC: PSL)

ಹಠಾತ್ ಬೌನ್ಸ್ ಎಸೆಯಬಲ್ಲ ಸಾಮರ್ಥ್ಯ ಹೊಂದಿರುವ ಗ್ಲೀಸನ್, ಡೆತ್ ಓವರ್‌ಗಳಲ್ಲಿ ನಿಖರವಾದ ಯಾರ್ಕರ್ ಮತ್ತು ಶಾರ್ಪ್ ಬೌನ್ಸರ್‌ಗಳನ್ನು ಎಸೆಯುವ ಕೌಶಲ್ಯ ಹೊಂದಿದ್ದಾರೆ. ಹಾಗೆಯೇ ರಿಚರ್ಡ್ ಗ್ಲೀಸನ್ಗೆ ಐಪಿಎಲ್ ವಾತಾವರಣ ಹೊಸದಲ್ಲ. ಅವರು ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ (2024) ಮತ್ತು ಮುಂಬೈ ಇಂಡಿಯನ್ಸ್ (2025) ತಂಡಗಳ ಭಾಗವಾಗಿದ್ದರು. ಹೀಗಾಗಿ ಐಪಿಎಲ್ ವಾತಾವರಣಕ್ಕೆ ಅವರು ಬೇಗನೆ ಹೊಂದಿಕೊಳ್ಳಲಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮ್ಯಾನೇಜ್ಮೆಂಟ್ ರಿಚರ್ಡ್ ಗ್ಲೀಸನ್ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. (PC: BBL)

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




