IPL 2026: ಸಂಜು ಸ್ಯಾಮ್ಸನ್ ರಿಲೀಸ್ ಖಚಿತ… ಆದರೆ
IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2026) ಹರಾಜು ಡಿಸೆಂಬರ್ ತಿಂಗಳ ಮೂರನೇ ವಾರದಲ್ಲಿ ನಡೆಯಲಿದೆ. ಈ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ರಿಟೈನ್ ಹಾಗೂ ರಿಲೀಸ್ ಪಟ್ಟಿಗಳನ್ನು ಸಿದ್ಧಪಡಿಸಿಕೊಳ್ಳಬೇಕಿದೆ. ಹೀಗೆ ರಾಜಸ್ಥಾನ್ ರಾಯಲ್ಸ್ ಸಿದ್ಧಪಡಿಸಿರುವ ರಿಲೀಸ್ ಪಟ್ಟಿಯಲ್ಲಿ ಸಂಜು ಸ್ಯಾಮ್ಸನ್ ಹೆಸರು ಕೂಡ ಇದೆ ಎಂದು ವರದಿಯಾಗಿದೆ.
Updated on: Oct 12, 2025 | 7:53 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮಿನಿ ಹರಾಜಿಗೂ ಮುನ್ನ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಸಂಜು ಸ್ಯಾಮ್ಸನ್ (Sanju Samson) ಅವರನ್ನು ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದೆ. ಈ ರಿಲೀಸ್ ಹೊರತಾಗಿಯೂ ಸ್ಯಾಮ್ಸನ್ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದು ಇನ್ನೂ ಸಹ ಕನ್ಫರ್ಮ್ ಆಗಿಲ್ಲ.

ಏಕೆಂದರೆ ಸಂಜು ಸ್ಯಾಮ್ಸನ್ ಅವರ ಹೆಸರನ್ನು ರಿಲೀಸ್ ಪಟ್ಟಿಯಲ್ಲಿಟ್ಟಿರುವ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಟ್ರೇಡಿಂಗ್ ಪ್ರಕ್ರಿಯೆಯನ್ನು ಎದುರು ನೋಡುತ್ತಿದೆ ಎಂದು ವರದಿಯಾಗಿದೆ. ಅಂದರೆ ಹರಾಜಿಗೂ ಮುನ್ನವೇ ಬೇರೊಂದು ಫ್ರಾಂಚೈಸಿಗೆ ಸ್ಯಾಮ್ಸನ್ ಅವರನ್ನು ಮಾರಾಟ ಮಾಡಲು ಆರ್ಆರ್ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿದೆ.

ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಸಂಜು ಸ್ಯಾಮ್ಸನ್ ಅವರನ್ನು ಟ್ರೇಡ್ ಮಾಡಿಕೊಳ್ಳಲು ಆಸಕ್ತಿ ತೋರಿದೆ ಎಂದು ವರದಿಯಾಗಿತ್ತು. ಅಲ್ಲದೆ ಸಿಎಸ್ಕೆ ಹಾಗೂ ಆರ್ಆರ್ ನಡುವೆ ಟ್ರೇಡ್ ಮಾತುಕತೆಗಳು ನಡೆದಿದ್ದವು. ಇದಾಗ್ಯೂ ಈ ಮಾತುಕತೆ ಫಲಪ್ರದವಾಗಿಲ್ಲ ಎನ್ನಲಾಗಿತ್ತು.

ಇದರ ಬೆನ್ನಲ್ಲೇ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಕೂಡ ಸಂಜು ಸ್ಯಾಮ್ಸನ್ ಅವರನ್ನು ಟ್ರೇಡ್ ಮಾಡಿಕೊಳ್ಳಲು ತೆರೆಮರೆಯ ಪ್ರಯತ್ನಕ್ಕೆ ಕೈ ಹಾಕಿರುವ ವಿಚಾರ ಬಹಿರಂಗವಾಗಿತ್ತು. ಹೀಗಾಗಿ ಸ್ಯಾಮ್ಸನ್ ಹರಾಜಿಗೂ ಮುನ್ನ ಕೆಕೆಆರ್ ತಂಡದ ಪಾಲಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಇದೀಗ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ರಿಲೀಸ್ ಮಾಡಲು ನಿರ್ಧರಿಸಿದೆ. ಇದಾಗ್ಯೂ ಕೊನೆಯ ಹಂತದವರೆಗೆ ಟ್ರೇಡ್ ಪ್ರಕ್ರಿಯೆಯನ್ನು ಎದುರು ನೋಡುತ್ತಿದೆ. ಇದರಿಂದ ಮಿನಿ ಹರಾಜಿಗೂ ಮುನ್ನವೇ ಸಂಜು ಸ್ಯಾಮ್ಸನ್ ಬೇರೊಂದು ತಂಡಕ್ಕೆ ಆಯ್ಕೆಯಾದರೂ ಅಚ್ಚರಿಪಡಬೇಕಿಲ್ಲ.
