AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್​​ಗೆ 12 ಲಕ್ಷ ರೂ. ದಂಡ..!

Punjab Kings vs Gujarat Titans: ಇಂಡಿಯನ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​​ಗಳಲ್ಲಿ 162 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 19.1 ಓವರ್​​ಗಳಲ್ಲಿ 165 ರನ್ ಬಾರಿಸಿ 3 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Apr 01, 2026 | 11:19 AM

Share
IPL 2026: ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ (Slow Over-rate) ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಹಾಗೂ ಪ್ಲೇಯಿಂಗ್ ಇಲೆವೆನ್​ನ ಆಟಗಾರರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ.

1 / 6
ಏಪ್ರಿಲ್ 4 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಪಂಜಾಬ್ ಕಿಂಗ್ಸ್ ನಿಗದಿತ ಸಮಯದೊಳಗೆ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಕನಿಷ್ಠ ಓವರ್ ರೇಟ್ ಅಪರಾಧವಾಗಿದ್ದು, ಹೀಗಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ.

2 / 6
ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ ಎಲ್ಲಾ ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

3 / 6
ಇದಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಇದೀಗ ಮತ್ತದೇ ತಪ್ಪು ಪುನರಾವರ್ತಿಸಿದ ಕಾರಣ 24 ಲಕ್ಷ ರೂ. ದಂಡ ವಿಧಿಸಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನಲ್ಲಿದ್ದ (ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ) ಪ್ರತಿಯೊಬ್ಬ ಆಟಗಾರನಿಗೂ 6 ಲಕ್ಷ ರೂಪಾಯಿ ಅಥವಾ ಅವರ ಪಂದ್ಯದ ಸಂಭಾವನೆಯ 25% ರಷ್ಟು ದಂಡ ಹಾಕಲಾಗಿದೆ.

4 / 6
ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಅಲ್ಲದೆ ನಾಯಕನಿಗೆ ಡಿಮೆರಿಟ್ ಪಾಯಿಂಟ್ ನೀಡಲಾಗುತ್ತದೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡವನ್ನು ವಿಧಿಸಲಾಗುತ್ತದೆ.

5 / 6
ಇನ್ನು ನಾಯಕ ನಾಯಕನ ಖಾತೆಯಲ್ಲಿ ಡಿಮೆರಿಟ್ ಪಾಯಿಂಟ್‌ಗಳು ಒಂದು ನಿರ್ದಿಷ್ಟ ಮಿತಿಯನ್ನು (ಉದಾಹರಣೆಗೆ 3 ವರ್ಷಗಳಲ್ಲಿ 4 ಪಾಯಿಂಟ್ಸ್) ಮೀರಿದಾಗ ಮಾತ್ರ ಪಂದ್ಯದ ನಿಷೇಧ ಹೇರಬಹುದು. ಅಂದರೆ ಅತ್ಯಂತ ಗಂಭೀರ ಅಥವಾ ಅತಿ ಹೆಚ್ಚು ಬಾರಿ ತಪ್ಪು ಮಾಡಿದಾಗ ಮಾತ್ರ ನಾಯಕನನ್ನು ಒಂದು ಪಂದ್ಯದಿಂದ ನಿಷೇಧಿಸಲಾಗುತ್ತದೆ.

6 / 6
Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?

ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ

ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ

HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?

ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?

KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!

ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ

ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ

‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ