ಟಿಮ್ ಡೇವಿಡ್ ತೂಫಾನ್ಗೆ ಕನ್ನಡಿಗನ ದಾಖಲೆ ಧೂಳೀಪಟ!
Tim David Record: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಪರ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ 8 ಭರ್ಜರಿ ಸಿಕ್ಸರ್ ಹಾಗೂ 3 ಫೋರ್ಗಳೊಂದಿಗೆ 25 ಎಸೆತಗಳಲ್ಲಿ ಅಜೇಯ 70 ರನ್ ಬಾರಿಸಿದ್ದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಡೆತ್ ಓವರ್ಗಳಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ ದಾಖಲೆ ನಿರ್ಮಿಸಿದ್ದಾರೆ.
Updated on: Apr 06, 2026 | 2:35 PM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಡೆತ್ ಓವರ್ಗಳಲ್ಲಿ ಅತ್ಯಧಿಕ ರನ್ ಚಚ್ಚಿದ ಭರ್ಜರಿ ದಾಖಲೆ ಟಿಮ್ ಡೇವಿಡ್ (Tim David) ಹೆಸರಿಗೆ ಸೇರ್ಪಡೆಯಾಗಿದೆ. ಐದು ವರ್ಷಗಳ ಹಿಂದೆ ಕನ್ನಡಿಗ ಕೆಎಲ್ ರಾಹುಲ್ ಬರೆದಿಟ್ಟಿದ್ದ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಟಿಮ್ ಡೇವಿಡ್ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 11ನೇ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 25 ಎಸೆತಗಳನ್ನು ಎದುರಿಸಿದ 3 ಫೋರ್ ಹಾಗೂ 8 ಭರ್ಜರಿ ಸಿಕ್ಸರ್ಗಳೊಂದಿಗೆ ಅಜೇಯ 70 ರನ್ ಬಾರಿಸಿದ್ದರು.

ಈ 70 ರನ್ಗಳಲ್ಲಿ ಡೆತ್ ಓವರ್ಗಳಲ್ಲಿ (17 ರಿಂದ 20) ಟಿಮ್ ಡೇವಿಡ್ ಚಚ್ಚಿದ್ದು ಬರೋಬ್ಬರಿ 68 ರನ್ಗಳು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಡೆತ್ ಓವರ್ಗಳಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಭರ್ಜರಿ ದಾಖಲೆ ಟಿಮ್ ಡೇವಿಡ್ ಹೆಸರಿಗೆ ಸೇರ್ಪಡೆಯಾಯಿತು.

ಇದಕ್ಕೂ ಮುನ್ನ ಈ ದಾಖಲೆ ಕೆಎಲ್ ರಾಹುಲ್ ಹೆಸರಿನಲ್ಲಿತ್ತು. 2020 ರಲ್ಲಿ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ ಆರ್ಸಿಬಿ ವಿರುದ್ಧ ಡೆತ್ ಓವರ್ಗಳಲ್ಲಿ (17 ರಿಂದ 20) ಬರೋಬ್ಬರಿ 60 ರನ್ ಚಚ್ಚಿ ದಾಖಲೆ ನಿರ್ಮಿಸಿದ್ದರು.

ಇದೀಗ ಕೊನೆಯ 4 ಓವರ್ಗಳಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಟಿಮ್ ಡೇವಿಡ್ ಬರೋಬ್ಬರಿ 68 ರನ್ ಚಚ್ಚಿದ್ದಾರೆ. ಈ ಮೂಲಕ ಐಪಿಎಲ್ ಹಿಸ್ಟರಿಯಲ್ಲೇ ಡೆತ್ ಓವರ್ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯನ್ನು ಟಿಮ್ ಡೇವಿಡ್ ತಮ್ಮದಾಗಿಸಿಕೊಂಡಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




