
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಡೆತ್ ಓವರ್ಗಳಲ್ಲಿ ಅತ್ಯಧಿಕ ರನ್ ಚಚ್ಚಿದ ಭರ್ಜರಿ ದಾಖಲೆ ಟಿಮ್ ಡೇವಿಡ್ (Tim David) ಹೆಸರಿಗೆ ಸೇರ್ಪಡೆಯಾಗಿದೆ. ಐದು ವರ್ಷಗಳ ಹಿಂದೆ ಕನ್ನಡಿಗ ಕೆಎಲ್ ರಾಹುಲ್ ಬರೆದಿಟ್ಟಿದ್ದ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಟಿಮ್ ಡೇವಿಡ್ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 11ನೇ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 25 ಎಸೆತಗಳನ್ನು ಎದುರಿಸಿದ 3 ಫೋರ್ ಹಾಗೂ 8 ಭರ್ಜರಿ ಸಿಕ್ಸರ್ಗಳೊಂದಿಗೆ ಅಜೇಯ 70 ರನ್ ಬಾರಿಸಿದ್ದರು.

ಈ 70 ರನ್ಗಳಲ್ಲಿ ಡೆತ್ ಓವರ್ಗಳಲ್ಲಿ (17 ರಿಂದ 20) ಟಿಮ್ ಡೇವಿಡ್ ಚಚ್ಚಿದ್ದು ಬರೋಬ್ಬರಿ 68 ರನ್ಗಳು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಡೆತ್ ಓವರ್ಗಳಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಭರ್ಜರಿ ದಾಖಲೆ ಟಿಮ್ ಡೇವಿಡ್ ಹೆಸರಿಗೆ ಸೇರ್ಪಡೆಯಾಯಿತು.

ಇದಕ್ಕೂ ಮುನ್ನ ಈ ದಾಖಲೆ ಕೆಎಲ್ ರಾಹುಲ್ ಹೆಸರಿನಲ್ಲಿತ್ತು. 2020 ರಲ್ಲಿ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಕೆಎಲ್ ರಾಹುಲ್ ಆರ್ಸಿಬಿ ವಿರುದ್ಧ ಡೆತ್ ಓವರ್ಗಳಲ್ಲಿ (17 ರಿಂದ 20) ಬರೋಬ್ಬರಿ 60 ರನ್ ಚಚ್ಚಿ ದಾಖಲೆ ನಿರ್ಮಿಸಿದ್ದರು.

ಇದೀಗ ಕೊನೆಯ 4 ಓವರ್ಗಳಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಟಿಮ್ ಡೇವಿಡ್ ಬರೋಬ್ಬರಿ 68 ರನ್ ಚಚ್ಚಿದ್ದಾರೆ. ಈ ಮೂಲಕ ಐಪಿಎಲ್ ಹಿಸ್ಟರಿಯಲ್ಲೇ ಡೆತ್ ಓವರ್ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯನ್ನು ಟಿಮ್ ಡೇವಿಡ್ ತಮ್ಮದಾಗಿಸಿಕೊಂಡಿದ್ದಾರೆ.