AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs DC ಪಂದ್ಯಕ್ಕೆ 6 ಆಟಗಾರರು ಅಲಭ್ಯ..!

IPL 2026 RCB vs DC: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಐಪಿಎಲ್​ನ ದ್ವಿತೀಯಾರ್ಧ ಆರಂಭಿಸಲಿದೆ. ಮೊದಲ 7 ಪಂದ್ಯಗಳಲ್ಲಿ 5 ಜಯ ಸಾಧಿಸಿರುವ ಆರ್​ಸಿಬಿ ತಂಡವು ಇಂದಿನ ಪಂದ್ಯವನ್ನು ದೆಹಲಿಯ ಅರುಣ್ ಜ್ಲೇಟ್ಲಿ ಮೈದಾನದಲ್ಲಿ ಆಡಲಿದೆ. ಈ ಪಂದ್ಯಕ್ಕೆ ಒಟ್ಟು 6 ಆಟಗಾರರು ಅಲಭ್ಯರಾಗಲಿದ್ದಾರೆ.

Pavitra Bhat Jigalemane
| Edited By: |

Updated on: Apr 27, 2026 | 7:38 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗಲಿವೆ. ದೆಹಲಿಯ ಅರುಣ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ 6 ಆಟಗಾರರು ಅಲಭ್ಯರಾಗಲಿದ್ದಾರೆ. ಅವರೆಂದರೆ...

1 / 7
ಫಿಲ್ ಸಾಲ್ಟ್​: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಯ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ಆರ್​​ಸಿಬಿ ತಂಡದ ಮೆಂಟರ್ ದಿನೇಶ್ ಕಾರ್ತಿಕ್ ತಿಳಿಸಿದ್ದಾರೆ.

2 / 7
ನುವಾನ್ ತುಷಾರ: ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಲಂಕನ್ ವೇಗಿ ನುವಾನ್ ತುಷಾರಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್​ ಇನ್ನೂ ಸಹ ಎನ್​ಒಸಿ ನೀಡಿಲ್ಲ. ಇದೇ ಕಾರಣದಿಂದಾಗಿ ಅವರು ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯಕ್ಕೂ ನುವಾನ್ ತುಷಾರ ಅಲಭ್ಯರಾಗಲಿದ್ದಾರೆ.

3 / 7
ರಾಸಿಖ್ ದಾರ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ವೇಗಿ ರಾಸಿಖ್ ದಾರ್ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಅರ್ಧದಲ್ಲೇ ಮೈದಾನ ತೊರೆದಿದ್ದ ರಾಸಿಖ್ ಇನ್ನೂ ಕೂಡ ಸಂಪೂರ್ಣವಾಗಿ ಫಿಟ್ ಆಗಿಲ್ಲ. ಹೀಗಾಗಿ ಅವರು ಸಹ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

4 / 7
ಯಶ್ ದಯಾಳ್: ವೈಯಕ್ತಿಕ ಕಾರಣಗಳಿಂದಾಗಿ ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಯಶ್ ದಯಾಳ್ ಕಾಣಿಸಿಕೊಳ್ಳುವುದಿಲ್ಲ.

5 / 7
ಮಿಚೆಲ್ ಸ್ಟಾರ್ಕ್​​: ಡೆಲ್ಲಿ ಕ್ಯಾಪಿಟಲ್ಸ್ ವೇಗಿ ಮಿಚೆಲ್ ಸ್ಟಾರ್ಕ್ ಫಿಟ್​ನೆಸ್ ಸಮಸ್ಯೆಯ ಕಾರಣ ಐಪಿಎಲ್​ನ ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಕೂಡಿಕೊಂಡರೂ ಅವರು ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಆಯ್ಕೆಗೆ ಅಲಭ್ಯರಾಗಿದ್ದಾರೆ. ಬದಲಿಗೆ ಮೇ 1 ರಿಂದ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ.

6 / 7
ಲುಂಗಿ ಎನ್​ಗಿಡಿ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಲುಂಗಿ ಎನ್​ಗಿಡಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡಿದ್ದರು. ಈ ಗಾಯದ ಕಾರಣ ಎನ್​ಗಿಡಿ ಅವರಿಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧದ ಮ್ಯಾಚ್​ಗೆ ಲುಂಗಿ ಎನ್​ಗಿಡಿ ಅಲಭ್ಯರಾಗಲಿದ್ದಾರೆ.

7 / 7
Follow Us