AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ವೆಂಕಿ ಎಂಟ್ರಿಯಿಂದ ಕನ್ನಡಿಗನ ಸ್ಥಾನಕ್ಕೆ ಕುತ್ತು..!

IPL 2026 RCB Squad: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಐಪಿಎಲ್ 2026ರ ಹರಾಜಿಗೂ ಮುನ್ನ 17 ಆಟಗಾರರನ್ನು ರಿಟೈನ್ ಮಾಡಿ ಕೊಂಡಿದ್ದರು. ಇದೀಗ ಮಿನಿ ಹರಾಜಿನ ಮೂಲಕ ಒಟ್ಟು 8 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಐಪಿಎಲ್ ಸೀಸನ್-19 ಗಾಗಿ 25 ಸದಸ್ಯರ ಬಳಗವನ್ನು ರೂಪಿಸಿದೆ.

ಝಾಹಿರ್ ಯೂಸುಫ್
|

Updated on:Dec 17, 2025 | 11:59 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಮಧ್ಯಪ್ರದೇಶದ ಆಲ್​ರೌಂಡರ್ ವೆಂಕಟೇಶ್ ಅಯ್ಯರ್ (Venkatesh Iyer) ಎಂಟ್ರಿ ಕೊಟ್ಟಿದ್ದಾರೆ. ಅಬುಧಾಬಿಯಲ್ಲಿ ಮಂಗಳವಾರ (ಡಿ.16) ನಡೆದ ಐಪಿಎಲ್ ಮಿನಿ ಹರಾಜಿನ ಮೂಲಕ ಆರ್​ಸಿಬಿ ವೆಂಕಟೇಶ್ ಅವರನ್ನು 7 ಕೋಟಿ ರೂ.ಗೆ ಖರೀದಿಸಿದೆ.

1 / 7
ಆಲ್​ರೌಂಡರ್ ಆಗಿರುವ ವೆಂಕಟೇಶ್ ಅಯ್ಯರ್ ಖರೀದಿಗೆ ಕಳೆದ ಸೀಸನ್​ನಲ್ಲೇ ಆರ್​ಸಿಬಿ ಪ್ರಯತ್ನಿಸಿತ್ತು. ಆದರೆ ಐಪಿಎಲ್​ 2026 ರಲ್ಲಿ ಅಯ್ಯರ್ 23.75 ಕೋಟಿ ರೂ.ಗೆ ಕೆಕೆಆರ್ ಪಾಲಾಗಿದ್ದರು. ಈ ಬಾರಿ ಕೇವಲ 7 ಕೋಟಿ ರೂ. ನೀಡುವ ಮೂಲಕ ಎಡಗೈ ದಾಂಡಿಗನನ್ನು ತಂಡಕ್ಕೆ ಕರೆತರುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ.

2 / 7
ಇತ್ತ ವೆಂಕಟೇಶ್ ಅಯ್ಯರ್ ಎಂಟ್ರಿಯೊಂದಿಗೆ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಏಕೆಂದರೆ ಆರ್​ಸಿಬಿ ತಂಡದ ಅಗ್ರ ಕ್ರಮಾಂಕದಲ್ಲಿ ಯಾವುದೇ ಆಲ್​ರೌಂಡರ್​ಗಳಿಲ್ಲ. ಆರಂಭಿಕರಾಗಿ ಕಣಕ್ಕಿಳಿಯುವ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಪರಿಪೂರ್ಣ ಬ್ಯಾಟರ್​ಗಳು.

3 / 7
ಇನ್ನು ಮೂರನೇ ಮತ್ತು ನಾಲ್ಕನೇ ಕ್ರಮಾಂಕಗಳಲ್ಲಿ ಕಣಕ್ಕಿಳಿಯುವ ದೇವದತ್ ಪಡಿಕ್ಕಲ್ ಹಾಗೂ ರಜತ್ ಪಾಟಿದಾರ್ ಕೂಡ ಬ್ಯಾಟರ್​ಗಳು. ಇತ್ತ ವೆಂಟಕೇಶ್ ಅಯ್ಯರ್ ಕೂಡ ಅಗ್ರ ಕ್ರಮಾಂಕದ ಬ್ಯಾಟ್ಸ್​ಮನ್. ಹೀಗಾಗಿ ಟಾಪ್-4 ನಲ್ಲೇ ಅವರಿಗೆ ಸ್ಥಾನ ನೀಡಬೇಕಾಗುತ್ತದೆ.

4 / 7
ಅತ್ತ ಆರ್​ಸಿಬಿ ತಂಡದ ಆರಂಭಿಕರು ಬದಲಾಗುವ ಸಾಧ್ಯತೆಯಿಲ್ಲ. ಮುಂದಿನ ಸೀಸನ್​ನಲ್ಲೂ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಮುಂದುವರೆಯಲಿದ್ದಾರೆ. ಇನ್ನು ನಾಯಕ ರಜತ್ ಪಾಟಿದಾರ್ ಕಣಕ್ಕಿಳಿಯುವುದು ಖಚಿತ. ಇದರ ನಡುವೆ ದೇವದತ್ ಪಡಿಕ್ಕಲ್ ಅವರನ್ನು ಹೊರಗಿಟ್ಟರೆ ಮಾತ್ರ ವೆಂಟಕೇಶ್ ಅಯ್ಯರ್ ಅವರನ್ನು ಕಣಕ್ಕಿಳಿಸಬಹುದು.

5 / 7
ಅಂದರೆ ಆರ್​ಸಿಬಿ ಪರ ವೆಂಕಟೇಶ್ ಅಯ್ಯರ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಇದರಿಂದ ದೇವದತ್ ಪಡಿಕ್ಕಲ್ ಅವಕಾಶ ವಂಚಿತರಾಗುವ ಸಾಧ್ಯತೆಗಳಿವೆ. ಏಕೆಂದರೆ ವೆಂಕಿ ಆಲ್​ರೌಂಡರ್ ಆಟಗಾರ. ಅವರ ಆಯ್ಕೆಯಿಂದ ಹೆಚ್ಚುವರಿ ಬೌಲರ್​ನ ಆಯ್ಕೆ ಕೂಡ ಆರ್​ಸಿಬಿ ತಂಡಕ್ಕೆ ಲಭ್ಯವಾಗಲಿದೆ. ಹೀಗಾಗಿ ವೆಂಕಟೇಶ್ ಅಯ್ಯರ್ ಎಂಟ್ರಿಯಿಂದಾಗಿ ದೇವದತ್ ಪಡಿಕ್ಕಲ್ ಸ್ಥಾನಕ್ಕೆ ಕುತ್ತು ಬರುವುದು ಖಚಿತ ಎಂದೇ ಹೇಳಬಹುದು.

6 / 7
RCB ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ದಾರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ವೆಂಕಟೇಶ್ ಅಯ್ಯರ್, ಜೋರ್ಡನ್ ಕಾಕ್ಸ್, ಜೇಕಬ್ ಡಫಿ, ವಿಕ್ಸಿ ಒಸ್ತ್ವಾಲ್,  ಕಾನಿಷ್ಕ್ ಚೌಹಾನ್, ಸತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ವಿಹಾನ್ ಮಲ್ಹೋತ್ರ.

7 / 7

Published On - 11:55 am, Wed, 17 December 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ

ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ

IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ

ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!