IPL 2026: ಐಪಿಎಲ್‌ನಲ್ಲಿ ವಿಶೇಷ ತ್ರಿಶತಕದ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ

Updated on: Mar 15, 2026 | 7:30 PM

Virat Kohli IPL: ಐಪಿಎಲ್ 2026 ಮಾರ್ಚ್ 28 ರಿಂದ ಆರಂಭವಾಗಲಿದ್ದು, ಹಾಲಿ ಚಾಂಪಿಯನ್ ಆರ್‌ಸಿಬಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಮೊದಲ ಪಂದ್ಯ ಆಡಲಿದೆ. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ ನಂತರ ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಈ ಐಪಿಎಲ್‌ನಲ್ಲಿ ಕೊಹ್ಲಿ 300 ಸಿಕ್ಸರ್‌ಗಳ ಗಡಿಯನ್ನು ತಲುಪಲು ಕೇವಲ 9 ಸಿಕ್ಸರ್‌ಗಳು ಬೇಕಿದೆ. ಅಭಿಮಾನಿಗಳು ಕಿಂಗ್ ಕೊಹ್ಲಿಯ ಹೊಡಿಬಡಿ ಆಟವನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ.

1 / 5
2026 ರ ಐಪಿಎಲ್ ಇದೇ ಮಾರ್ಚ್ 28 ರಿಂದ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಈ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಪಂದ್ಯದ ಇನ್ನೊಂದು ಹೈಲೈಟ್ಸ್ ಅಂದರೆ ಕ್ರಿಕೆಟ್ ಅಭಿಮಾನಿಗಳ ಆರಾಧ್ಯ ದೈವ ಮತ್ತೊಮ್ಮೆ ಅಭಿಮಾನಿಗಳನ್ನು ರಂಜಿಸಲು ಕ್ರಿಕೆಟ್ ಅಂಗಳಕ್ಕೆ ಇಳಿಯಲಿದ್ದಾರೆ.

2 / 5
ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್ ಕೊಹ್ಲಿ ಈ ಸ್ವರೂಪದಲ್ಲಿ ಐಪಿಎಲ್ ಮಾತ್ರ ಆಡುತ್ತಿದ್ದಾರೆ. ಹೀಗಾಗಿ ಚುಟುಕು ಮಾದರಿಯಲ್ಲಿ ಕಿಂಗ್ ಕೊಹ್ಲಿಯ ಹೊಡಿಬಡಿ ಆಟವನ್ನು ನೋಡಲು ಅಭಿಮಾನಿಗಳು ವರ್ಷಗಳ ಕಾಲ ಕಾಯಬೇಕಿದೆ. ಆದರೀಗ ಆ ಕಾಯುವಿಕೆ ಮುಗಿದಿದ್ದು, ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಬ್ಯಾಟ್ ಬೀಸಲಿದ್ದಾರೆ.

3 / 5
ಇನ್ನು ಬಾರಿಯ ಐಪಿಎಲ್ ವಿರಾಟ್​ ಕೊಹ್ಲಿಗೆ ಮತ್ತಷ್ಟು ವಿಶೇಷವಾಗಿದೆ. ಏಕೆಂದರೆ ಐಪಿಎಲ್​ನಲ್ಲಿ ಸಿಕ್ಸರ್​ಗಳ ತ್ರಿಶತಕ ಪೂರೈಸಲು ವಿರಾಟ್ ಕೊಹ್ಲಿಗೆ ಇನ್ನು ಕೇವಲ 9 ಸಿಕ್ಸರ್‌ಗಳ ಅಗತ್ಯವಿದೆ. ಐಪಿಎಲ್‌ನಲ್ಲಿ 259 ಇನ್ನಿಂಗ್ಸ್‌ಗಳನ್ನಾಡಿರುವ ವಿರಾಟ್ ಇದುವರೆಗೆ 291 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

4 / 5
ಇದಕ್ಕೂ ಮೊದಲು ಐಪಿಎಲ್‌ನಲ್ಲಿ ಸಿಕ್ಸರ್​ಗಳ ತ್ರಿಶತಕ ಬಾರಿಸಿದ ಸಾಧನೆಯನ್ನು ರೋಹಿತ್ ಶರ್ಮಾ ಮಾಡಿದ್ದರು. ರೋಹಿತ್ ಐಪಿಎಲ್‌ನಲ್ಲಿ ಇದುವರೆಗೆ 302 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇನ್ನು ಐಪಿಎಲ್​ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಅವರು 357 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

5 / 5
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ನಿವೃತ್ತಿ ಹೊಂದಿದ ನಂತರ ವಿರಾಟ್ ಕೊಹ್ಲಿ ಪ್ರದರ್ಶನ ಅಮೋಘವಾಗಿದೆ. ವಿರಾಟ್ ಕೊಹ್ಲಿ ಕಳೆದ ಐದು ಇನ್ನಿಂಗ್ಸ್​ಗಳಲ್ಲಿ 2 ಶತಕಗಳನ್ನು ಗಳಿಸಿದ್ದಾರೆ. ಅವರ ಹೆಸರಲ್ಲಿ ಅರ್ಧಶತಕವೂ ಸೇರಿದೆ. ಕಳೆದ ಆವೃತ್ತಿಯಲ್ಲಿ ರನ್​ಗಳ ಮಳೆ ಹರಿಸಿದ್ದ ವಿರಾಟ್, 54 ಸರಾಸರಿಯಲ್ಲಿ 657 ರನ್ ಬಾರಿಸಿದ್ದರು. ಇದರಲ್ಲಿ 8 ಅರ್ಧಶತಕಗಳು ಸೇರಿವೆ. ಈ ಇನ್ನಿಂಗ್ಸ್‌ನಲ್ಲಿ ಅವರು 19 ಸಿಕ್ಸರ್‌ಗಳು ಮತ್ತು 66 ಬೌಂಡರಿಗಳನ್ನು ಬಾರಿಸಿದ್ದಾರೆ.

Follow Us