RCB vs LSG: ವಿರಾಟ್ ಕೊಹ್ಲಿ ಆಡ್ತಾರಾ, ಇಲ್ವಾ? ಕೊನೆಗೂ ಸಿಕ್ತು ಉತ್ತರ
Virat Kohli Injury Update: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಫಿಟ್ನೆಸ್ ಸಮಸ್ಯೆಯಿಂದ ಬಳಲಿದ್ದರು. ಹೀಗಾಗಿ ಅವರು ಆ ಪಂದ್ಯದಲ್ಲಿ ಫೀಲ್ಡಿಂಗ್ ಮಾಡಿರಲಿಲ್ಲ. ಇದೇ ಕಾರಣದಿಂದಾಗಿ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿತ್ತು.
Updated on:Apr 15, 2026 | 12:52 PM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಕಣಕ್ಕಿಳಿಯಲಿದ್ದಾರಾ? ಎಂಬುದೇ ಪ್ರಶ್ನೆ. ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಕಾಲಿನ ಹಿಮ್ಮಡಿ ನೋವಿಗೆ ಒಳಗಾಗಿದ್ದ ವಿರಾಟ್ ಕೊಹ್ಲಿ ಸೋಮವಾರ ಆರ್ಸಿಬಿ ತಂಡದೊಂದಿಗೆ ಬೆಂಗಳೂರಿಗೆ ಪ್ರಯಾಣಿಸಿಲ್ಲ ಎಂದು ವರದಿಯಾಗಿತ್ತು. ಅಲ್ಲದೆ ಮುಂಬೈನಲ್ಲೇ ಫಿಸಿಯೋ ಜೊತೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಮಂಗಳವಾರ ವಿರಾಟ್ ಕೊಹ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಅಷ್ಟೇ ಅಲ್ಲದೆ ಸಾಯಂಕಾಲ ನಡೆದ ಆರ್ಸಿಬಿ ತಂಡದ ಟ್ರೈನಿಂಗ್ನಲ್ಲೂ ಕಾಣಿಸಿಕೊಂಡಿದ್ದಾರೆ. ಈ ವೇಳೆ ಸಂಪೂರ್ಣ ಫಿಟ್ನೆಸ್ನೊಂದಿಗೆ ಕಾಣಿಸಿಕೊಂಡಿರುವ ಕಿಂಗ್ ಕೊಹ್ಲಿ ಬ್ಯಾಟಿಂಗ್ ಅಭ್ಯಾಸವನ್ನೂ ಸಹ ನಡೆಸಿದ್ದಾರೆ.

ಇದರೊಂದಿಗೆ ಬುಧವಾರ (ಏ.15) ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಅದರಂತೆ ಎಲ್ಎಸ್ಜಿ ವಿರುದ್ಧದ ಪಂದ್ಯದಲ್ಲೂ ಆರ್ಸಿಬಿ ಪರ ಕಿಂಗ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ಯಶ್ ದಯಾಳ್ (ಅಲಭ್ಯ).
Published On - 9:19 pm, Tue, 14 April 26




