AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ ಗೇಲ್ ವಿಶ್ವ ದಾಖಲೆಯನ್ನೇ ಧೂಳೀಪಟ ಮಾಡಿದ ಕಿಂಗ್ ಕೊಹ್ಲಿ

Virat Kohli World Record: ದಾಖಲೆಗಳ ಸರದಾರನ ಹೆಸರಿಗೆ ಮತ್ತೊಂದು ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಈ ಬಾರಿ ವಿಶ್ವ ದಾಖಲೆ ನಿರ್ಮಿಸಿರುವುದು ಕ್ರಿಸ್ ಗೇಲ್ ಹೆಸರಿನಲ್ಲಿದ್ದ ವರ್ಲ್ಡ್​ ರೆಕಾರ್ಡ್ ಮುರಿಯುವ ಮೂಲಕ. ಅದು ಕೂಡ ಕೇವಲ 409 ಇನಿಂಗ್ಸ್​ಗಳ ಮೂಲಕ. ಈ ಇನಿಂಗ್ಸ್​ಗಳೊಂದಿಗೆ ವಿರಾಟ್ ಕೊಹ್ಲಿ ಬರೆದ ಹೊಸ ವಿಶ್ವ ದಾಖಲೆಯ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: May 14, 2026 | 7:33 AM

Share
ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ಮತ್ತೊಂದು ಶತಕ ಮೂಡಿಬಂದಿದೆ. ಈ ಶತಕದೊಂದಿಗೆ ಕೊಹ್ಲಿ (Virat Kohli) ಮತ್ತೊಂದು ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಕ್ರಿಸ್ ಗೇಲ್ ಟಿ20 ಕ್ರಿಕೆಟ್​ನಲ್ಲಿ ಬರೆದಿದ್ದ ಸಾರ್ವಕಾಲಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: IPL)

1 / 6
ರಾಯ್​ಪುರ್​ನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಭರ್ಜರಿ ಬ್ಯಾಟಿಂಗ್​​ನೊಂದಿಗೆ 60 ಎಸೆತಗಳನ್ನು ಎದುರಿಸಿದ ಕೊಹ್ಲಿ 3 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 105 ರನ್​ ಬಾರಿಸಿದರು. (PC: IPL)

2 / 6
ಈ ಅಮೋಘ ಶತಕದೊಂದಿಗೆ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ 14 ಸಾವಿರ ರನ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಾಗೆಯೇ ಈ ದಾಖಲೆ ಬರೆದ ವಿಶ್ವದ 6ನೇ ಬ್ಯಾಟರ್ ವಿರಾಟ್ ಕೊಹ್ಲಿ. (PC: IPL)

3 / 6
ವಿಶೇಷ ಎಂದರೆ ಈ ಹಿಂದೆ 14 ಸಾವಿರ ರನ್​ಗಳನ್ನು ಪೂರೈಸಿದ್ದ ಐವರು ಬ್ಯಾಟರ್​ಗಳಿಗಿಂತ ಅತೀ ಕಡಿಮೆ ಇನಿಂಗ್ಸ್​ಗಳ ಮೂಲಕ ಈ ಮೈಲುಗಲ್ಲು ದಾಟಿ ವಿರಾಟ್ ಹೊಸ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಹಿಂದೆ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. (PC: IPL)

4 / 6
ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್ 14 ಸಾವಿರ ರನ್​ಗಳನ್ನು ಪೂರೈಸಲು ಬರೋಬ್ಬರಿ 423 ಇನಿಂಗ್ಸ್ ಆಡಿದ್ದರು. ಈ ಮೂಲಕ ಟಿ20 ಕ್ರಿಕೆಟ್​​ನಲ್ಲಿ ಅತೀ ಕಡಿಮೆ ಇನಿಂಗ್ಸ್​​ಗಳ ಮೂಲಕ 14000 ರನ್​ ಕಲೆಹಾಕಿದ ವಿಶ್ವ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ. (PC: Google)

5 / 6
ವಿರಾಟ್ ಕೊಹ್ಲಿ ಕೇವಲ 409 ಇನಿಂಗ್ಸ್​​ಗಳ ಮೂಲಕ 14000 ರನ್​ಗಳನ್ನು ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಇನಿಂಗ್ಸ್​​ಗಳಲ್ಲಿ 14 ಸಾವಿರ ರನ್ ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. (PC: IPL)

6 / 6
Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ

ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ

ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ

ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್

ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್

ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್

ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ