
ವಿರಾಟ್ ಕೊಹ್ಲಿಯ ಬ್ಯಾಟ್ನಿಂದ ಮತ್ತೊಂದು ಶತಕ ಮೂಡಿಬಂದಿದೆ. ಈ ಶತಕದೊಂದಿಗೆ ಕೊಹ್ಲಿ (Virat Kohli) ಮತ್ತೊಂದು ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಕ್ರಿಸ್ ಗೇಲ್ ಟಿ20 ಕ್ರಿಕೆಟ್ನಲ್ಲಿ ಬರೆದಿದ್ದ ಸಾರ್ವಕಾಲಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: IPL)

ರಾಯ್ಪುರ್ನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಭರ್ಜರಿ ಬ್ಯಾಟಿಂಗ್ನೊಂದಿಗೆ 60 ಎಸೆತಗಳನ್ನು ಎದುರಿಸಿದ ಕೊಹ್ಲಿ 3 ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ ಅಜೇಯ 105 ರನ್ ಬಾರಿಸಿದರು. (PC: IPL)

ಈ ಅಮೋಘ ಶತಕದೊಂದಿಗೆ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ 14 ಸಾವಿರ ರನ್ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಾಗೆಯೇ ಈ ದಾಖಲೆ ಬರೆದ ವಿಶ್ವದ 6ನೇ ಬ್ಯಾಟರ್ ವಿರಾಟ್ ಕೊಹ್ಲಿ. (PC: IPL)

ವಿಶೇಷ ಎಂದರೆ ಈ ಹಿಂದೆ 14 ಸಾವಿರ ರನ್ಗಳನ್ನು ಪೂರೈಸಿದ್ದ ಐವರು ಬ್ಯಾಟರ್ಗಳಿಗಿಂತ ಅತೀ ಕಡಿಮೆ ಇನಿಂಗ್ಸ್ಗಳ ಮೂಲಕ ಈ ಮೈಲುಗಲ್ಲು ದಾಟಿ ವಿರಾಟ್ ಹೊಸ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಹಿಂದೆ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. (PC: IPL)

ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್ 14 ಸಾವಿರ ರನ್ಗಳನ್ನು ಪೂರೈಸಲು ಬರೋಬ್ಬರಿ 423 ಇನಿಂಗ್ಸ್ ಆಡಿದ್ದರು. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತೀ ಕಡಿಮೆ ಇನಿಂಗ್ಸ್ಗಳ ಮೂಲಕ 14000 ರನ್ ಕಲೆಹಾಕಿದ ವಿಶ್ವ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ. (PC: Google)

ವಿರಾಟ್ ಕೊಹ್ಲಿ ಕೇವಲ 409 ಇನಿಂಗ್ಸ್ಗಳ ಮೂಲಕ 14000 ರನ್ಗಳನ್ನು ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಇನಿಂಗ್ಸ್ಗಳಲ್ಲಿ 14 ಸಾವಿರ ರನ್ ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. (PC: IPL)