AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಫಿಲ್ ಸಾಲ್ಟ್ ಹೊರಗುಳಿಯಲು ಇದುವೇ ಕಾರಣ..!

Phil Salt Injury Update: ಈ ಸೀಸನ್‌ನಲ್ಲಿ ಫಿಲ್ ಸಾಲ್ಟ್ ಆರ್‌ಸಿಬಿ ಪರ ಅದ್ಭುತ ಲಯದಲ್ಲಿದ್ದರು. ಆಡಿದ 6 ಪಂದ್ಯಗಳಲ್ಲಿ 168ಕ್ಕೂ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ 202 ರನ್ ಗಳಿಸುವ ಮೂಲಕ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿದ್ದರು. ಆದರೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದ ಕಾರಣ ಅವರ ಬದಲಿಗೆ ಜೇಕಬ್ ಬೆಥೆಲ್ ಆರಂಭಿಕನಾಗಿ ಕಣಕ್ಕಿಳಿದಿದ್ದರು.

ಝಾಹಿರ್ ಯೂಸುಫ್
|

Updated on: Apr 25, 2026 | 11:30 AM

Share
IPL 2026: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್​ಸಿಬಿ ಪರ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ (Phil Salt) ಕಾಣಿಸಿಕೊಂಡಿರಲಿಲ್ಲ.

1 / 5
ಇದಕ್ಕೆ ಮುಖ್ಯ ಕಾರಣ ಫಿಟ್​ನೆಸ್​ ಸಮಸ್ಯೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ಸಾಲ್ಟ್ ಗಾಯಗೊಂಡಿದ್ದಾರೆ. ಈ ಗಾಯದ ಕಾರಣ ಅವರು ಗುಜರಾತ್ ಟೈಟಾನ್ಸ್ ವಿರುದ್ಧದ ಮ್ಯಾಚ್​ನಲ್ಲಿ ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಅವರ ಗಾಯ ಗಂಭೀರವಲ್ಲ ಎಂದು ತಿಳಿದು ಬಂದಿದೆ.

2 / 5
ಅಭ್ಯಾಸದ ವೇಳೆ ಫಿಲ್ ಸಾಲ್ಟ್ ಸಣ್ಣ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ. ಈ ಗಾಯ ಗಂಭೀರವಲ್ಲದ ಕಾರಣ, ಅವರು ಮುಂದಿನ ಮ್ಯಾಚ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಆರ್​ಸಿಬಿ ಮೂಲಗಳು ತಿಳಿಸಿವೆ.

3 / 5
ಏಪ್ರಿಲ್ 27 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಸೋಮವಾರ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಸಾಲ್ಟ್ ಸಂಪೂರ್ಣವಾಗಿ ಗುಣಮುಖರಾಗುವ ನಿರೀಕ್ಷೆಯಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಫಿಲ್ ಸಾಲ್ಟ್ ಆರಂಭಿಕನಾಗಿ ಮತ್ತೆ ಕಾಣಿಸಿಕೊಳ್ಳಲಿದ್ದಾರೆ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್.

5 / 5
Follow Us