IPL 2026: RCB ತಂಡದಿಂದ ಪ್ರಮುಖ ಆಟಗಾರನಿಗೆ ಗೇಟ್ ಪಾಸ್ ಸಾಧ್ಯತೆ
IPL 2026 Royal Challengers Bengaluru: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಆರಂಭಕ್ಕೂ ಮುನ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೆಲ ಆಟಗಾರರನ್ನು ಕೈ ಬಿಡುವುದು ಖಚಿತ. ಅದರಲ್ಲೂ ಭಾರತೀಯ ವೇಗಿಗೆ ಆರ್ಸಿಬಿ ತಂಡದಿಂದ ಗೇಟ್ ಪಾಸ್ ಸಿಗುವ ಸಾಧ್ಯತೆ ಹೆಚ್ಚಿದೆ.
Updated on: Jul 08, 2025 | 8:00 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಿಂದ ಪ್ರಮುಖ ವೇಗಿಯೊಬ್ಬರು ಹೊರಬೀಳುವುದು ಬಹುತೇಕ ಖಚಿತ. ಇದಕ್ಕೆ ಮುಖ್ಯ ಕಾರಣ ಈ ಆಟಗಾರನ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರದ ಆರೋಪಗಳು.

ಹೌದು, ಆರ್ಸಿಬಿ ತಂಡದ ಎಡಗೈ ವೇಗಿ ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಉತ್ತರ ಪ್ರದೇಶದ ಗಾಝಿಯಾಬಾದ್ ಠಾಣೆಯಲ್ಲಿ ದಯಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತ ಎಫ್ಐಆರ್ ದಾಖಲಾಗಿರುವ ಕಾರಣ ಯಶ್ ದಯಾಳ್ ಅವರನ್ನು ಬಂಧಿಸುವ ಸಾಧ್ಯತೆಯಿದೆ.

ಇದರ ಬೆನ್ನಲ್ಲೇ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೂಡ ಯಶ್ ದಯಾಳ್ ವಿರುದ್ಧ ಕೇಳಿ ಬಂದಿದೆ. ಈ ಪ್ರಕರಣ ಸಂಬಂಧ ಕೂಡ ಅವರು ಬಂಧನದ ಭೀತಿಯನ್ನು ಸಹ ಎದುರಿಸುತ್ತಿದ್ದಾರೆ. ಹೀಗಾಗಿಯೇ ಯಶ್ ದಯಾಳ್ ಅವರನ್ನು ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (ಯುಪಿಸಿಎ) ಮುಂಬರುವ ಯುಪಿ ಟಿ20 ಲೀಗ್ನಿಂದ ಬ್ಯಾನ್ ಮಾಡಿದೆ.

ಅತ್ತ ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಯಶ್ ದಯಾಳ್ ಮೇಲೆ ನಿಷೇಧ ಹೇರಿರುವ ಕಾರಣ ಅವರು ಮುಂಬರುವ ಐಪಿಎಲ್ನಲ್ಲಿ ಕಣಕ್ಕಿಳಿಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಐಪಿಎಲ್ ಮಿಜಿ ಹರಾಜಿಗೂ ಮುನ್ನವೇ ಎಡಗೈ ವೇಗಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೈ ಬಿಡುವುದು ಖಚಿತ ಎಂದೇ ಹೇಳಬಹುದು.

ಯಶ್ ದಯಾಳ್ ಅವರು ಮದುವೆಯ ಆಮಿಷವೊಡ್ಡಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಇತ್ತೀಚೆಗಷ್ಟೇ ಯುವತಿಯೊಬ್ಬಳು ಸೋಷಿಯಲ್ ಮೀಡಿಯಾದಲ್ಲಿ ಆರೋಪಿಸಿದ್ದರು. ಅಷ್ಟೇ ಅಲ್ಲದೆ ಈ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೂ ಪತ್ರ ಬರೆದಿರುವುದಾಗಿ ತಿಳಿಸಿದ್ದರು.
