IPL 2026: RCB ತಂಡದಿಂದ ಪ್ರಮುಖ ಆಟಗಾರನಿಗೆ ಗೇಟ್ ಪಾಸ್ ಸಾಧ್ಯತೆ

Updated on: Jul 08, 2025 | 8:00 AM

IPL 2026 Royal Challengers Bengaluru: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಆರಂಭಕ್ಕೂ ಮುನ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೆಲ ಆಟಗಾರರನ್ನು ಕೈ ಬಿಡುವುದು ಖಚಿತ. ಅದರಲ್ಲೂ ಭಾರತೀಯ ವೇಗಿಗೆ ಆರ್​ಸಿಬಿ ತಂಡದಿಂದ ಗೇಟ್ ಪಾಸ್ ಸಿಗುವ ಸಾಧ್ಯತೆ ಹೆಚ್ಚಿದೆ.

1 / 5
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಿಂದ ಪ್ರಮುಖ ವೇಗಿಯೊಬ್ಬರು ಹೊರಬೀಳುವುದು ಬಹುತೇಕ ಖಚಿತ. ಇದಕ್ಕೆ ಮುಖ್ಯ ಕಾರಣ ಈ ಆಟಗಾರನ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರದ ಆರೋಪಗಳು.

2 / 5
ಹೌದು, ಆರ್​ಸಿಬಿ ತಂಡದ ಎಡಗೈ ವೇಗಿ ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಉತ್ತರ ಪ್ರದೇಶದ ಗಾಝಿಯಾಬಾದ್​ ಠಾಣೆಯಲ್ಲಿ ದಯಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತ ಎಫ್​ಐಆರ್​ ದಾಖಲಾಗಿರುವ ಕಾರಣ ಯಶ್ ದಯಾಳ್ ಅವರನ್ನು ಬಂಧಿಸುವ ಸಾಧ್ಯತೆಯಿದೆ.

3 / 5
ಇದರ ಬೆನ್ನಲ್ಲೇ  17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೂಡ ಯಶ್ ದಯಾಳ್ ವಿರುದ್ಧ ಕೇಳಿ ಬಂದಿದೆ. ಈ ಪ್ರಕರಣ ಸಂಬಂಧ ಕೂಡ ಅವರು ಬಂಧನದ ಭೀತಿಯನ್ನು ಸಹ ಎದುರಿಸುತ್ತಿದ್ದಾರೆ. ಹೀಗಾಗಿಯೇ ಯಶ್ ದಯಾಳ್ ಅವರನ್ನು ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (ಯುಪಿಸಿಎ) ಮುಂಬರುವ ಯುಪಿ ಟಿ20 ಲೀಗ್​ನಿಂದ ಬ್ಯಾನ್ ಮಾಡಿದೆ.

4 / 5
ಅತ್ತ ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಯಶ್ ದಯಾಳ್ ಮೇಲೆ ನಿಷೇಧ ಹೇರಿರುವ ಕಾರಣ ಅವರು ಮುಂಬರುವ ಐಪಿಎಲ್​ನಲ್ಲಿ ಕಣಕ್ಕಿಳಿಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಐಪಿಎಲ್ ಮಿಜಿ ಹರಾಜಿಗೂ ಮುನ್ನವೇ ಎಡಗೈ ವೇಗಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೈ ಬಿಡುವುದು ಖಚಿತ ಎಂದೇ ಹೇಳಬಹುದು.

5 / 5
ಯಶ್ ದಯಾಳ್ ಅವರು ಮದುವೆಯ ಆಮಿಷವೊಡ್ಡಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಇತ್ತೀಚೆಗಷ್ಟೇ ಯುವತಿಯೊಬ್ಬಳು ಸೋಷಿಯಲ್ ಮೀಡಿಯಾದಲ್ಲಿ ಆರೋಪಿಸಿದ್ದರು. ಅಷ್ಟೇ ಅಲ್ಲದೆ ಈ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೂ ಪತ್ರ ಬರೆದಿರುವುದಾಗಿ ತಿಳಿಸಿದ್ದರು.

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us