- TV9 Kannada Kannada News Photos Cricket Photos IPL 2027: Gujarat Titans are likely to release Shahrukh Khan and Glenn Phillips
IPL 2027: ಗುಜರಾತ್ ಟೈಟಾನ್ಸ್ ತಂಡದಿಂದ ಇಬ್ಬರು ಸ್ಟಾರ್ ಆಟಗಾರರು ಔಟ್?
ಇಂಡಿಯನ್ ಪ್ರೀಮಿಯರ್ ಲೀಗ್‌ನ 20ನೇ ಆವೃತ್ತಿಯ ಮಿನಿ ಹರಾಜು ಡಿಸೆಂಬರ್ 16 ರಂದು ನಡೆಯುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಹರಾಜಿಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಬಿಸಿಸಿಐ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಆಟಗಾರರ ರಿಲೀಸ್ ಹಾಗೂ ರಿಟೇನ್ ಪಟ್ಟಿಯನ್ನು ಸಿದ್ಧಪಡಿಸುವ ಕಾರ್ಯದಲ್ಲಿ ನಿರತವಾಗಿದೆ.
Updated on: Oct 21, 2026 | 2:11 PM

ಐಪಿಎಲ್ 2027ರ ಮಿನಿ ಹರಾಜಿಗೂ ಮುನ್ನ ಗುಜರಾತ್ ಟೈಟಾನ್ಸ್ ತಂಡದಲ್ಲಿ ಭಾರಿ ಬದಲಾವಣೆಗಳಾಗುವ ಮುನ್ಸೂಚನೆ ಸಿಕ್ಕಿದೆ. ಕಳೆದ ಸೀಸನ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ ಇಬ್ಬರು ಪ್ರಮುಖ ಆಟಗಾರರನ್ನು ಬಿಡುಗಡೆ ಮಾಡಲು ಗುಜರಾತ್ ಟೈಟಾನ್ಸ್ ಫ್ರಾಂಚೈಸಿ ನಿರ್ಧರಿಸಿದೆ ಎಂದು ವರದಿಯಾಗಿದೆ. ಆ ಆಟಗಾರರು ಯಾರೆಂದರೆ... (PC: IPL)

ಶಾರುಖ್ ಖಾನ್: ಗುಜರಾತ್ ಟೈಟಾನ್ಸ್ ತಂಡದಲ್ಲಿರುವ ಹೊಡಿಬಡಿ ದಾಂಡಿಗ ಶಾರುಖ್ ಖಾನ್ ಅವರನ್ನು ರಿಲೀಸ್ ಮಾಡಲು ಫ್ರಾಂಚೈಸಿ ನಿರ್ಧರಿಸಿದೆ. ಇದಕ್ಕೆ ಮುಖ್ಯ ಕಾರಣ ಕಳಪೆ ಪ್ರದರ್ಶನ. 2024ರ ಸೀಸನ್‌ನಿಂದ ಟೈಟಾನ್ಸ್ ತಂಡದ ಭಾಗವಾಗಿರುವ ಶಾರುಖ್, ಮೊದಲ ವರ್ಷ ಕೇವಲ 20ರ ಸರಾಸರಿಯಲ್ಲಿ ಕಲೆಹಾಕಿದ್ದರು. ಆ ಬಳಿಕ 2025 ರ ಆವೃತ್ತಿಯಲ್ಲಿ 15 ಪಂದ್ಯಗಳನ್ನಾಡಿ ಗಳಿಸಿದ್ದು ಕೇವಲ 179 ರನ್ ಮಾತ್ರ. ಇನ್ನು ಕಳೆದ ಸೀಸನ್‌ನಲ್ಲಿ ಆಡಿದ 9 ಪಂದ್ಯಗಳಿಂದ ಕೇವಲ 43 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಇದೀಗ 4 ಕೋಟಿ ರೂ. ಬೆಲೆಯ ಆಟಗಾರನನ್ನು ರಿಲೀಸ್ ಮಾಡಲು ಗುಜರಾತ್ ಟೈಟಾನ್ಸ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. (PC: IPL)

ಗ್ಲೆನ್ ಫಿಲಿಪ್ಸ್: ನ್ಯೂಝಿಲೆಂಡ್ ಆಲ್ರೌಂಡರ್ ಗ್ಲೆನ್ ಫಿಲಿಪ್ಸ್ ಕಳೆದ ಎರಡು ಸೀಸನ್ಗಳಿಂದ ಗುಜರಾತ್ ಟೈಟಾನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರೂ ಆಡಿರುವುದು ಕೇವಲ 6 ಮ್ಯಾಚ್ಗಳು ಮಾತ್ರ. ಇದರಲ್ಲಿ 5 ಪಂದ್ಯಗಳಲ್ಲಿ 124ರ ಸ್ಟ್ರೈಕ್ ರೇಟ್‌ನಲ್ಲಿ ಕೇವಲ 67 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಇದೀಗ 2 ಕೋಟಿ ರೂ. ಬೆಲೆಯ ಗ್ಲೆನ್ ಫಿಲಿಪ್ಸ್ ಅವರನ್ನು ಬಿಡುಗಡೆ ಮಾಡಿ ಪರ್ಸ್ ಮೊತ್ತ ಹೆಚ್ಚಿಸಲು ಗುಜರಾತ್ ಟೈಟಾನ್ಸ್ ಮುಂದಾಗಿದೆ. (PC: IPL)

ಕಾನರ್ ಎಸ್ಟರ್‌ಹ್ಯೂಝೆನ್: ಶಾರುಖ್ ಖಾನ್ ಹಾಗೂ ಗ್ಲೆನ್ ಫಿಲಿಪ್ಸ್ ಅವರನ್ನು ರಿಲೀಸ್ ಮಾಡಲು ಮುಂದಾಗಿರುವ ಗುಜರಾತ್ ಟೈಟಾನ್ಸ್ ಫ್ರಾಂಚೈಸಿಯು ಸೌತ್ ಆಫ್ರಿಕಾದ ಯುವ ಪ್ರತಿಭಾವಂತ ವಿಕೆಟ್ ಕೀಪರ್-ಬ್ಯಾಟರ್ ಕಾನರ್ ಎಸ್ಟರ್‌ಹ್ಯೂಝೆನ್ ಅವರನ್ನು ಮಾತ್ರ ತಂಡದಲ್ಲೇ ಉಳಿಸಿಕೊಳ್ಳಲು ಫ್ರಾಂಚೈಸಿ ಒಲವು ತೋರಿದೆ ಎಂದು ಪಿಟಿಐ ವರದಿ ಮಾಡಿದೆ. ಹೀಗಾಗಿ ಕಾನರ್ ಮುಂದಿನ ವರ್ಷ ಕೂಡ ಗುಜರಾತ್ ಟೈಟಾನ್ಸ್ ತಂಡದಲ್ಲಿ ಮುಂದುವರೆಯುವುದನ್ನು ಎದುರು ನೋಡಬಹುದು. (PC: IPL)

ಗುಜರಾತ್ ಟೈಟಾನ್ಸ್ ತಂಡ (2026): ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಕುಮಾರ್ ಕುಶಾಗ್ರಾ, ಅನೂಜ್ ರಾವತ್, ಜೋಸ್ ಬಟ್ಲರ್, ನಿಶಾಂತ್ ಸಿಂಧು, ವಾಷಿಂಗ್ಟನ್ ಸುಂದರ್, ಅರ್ಷದ್ ಖಾನ್, ರಾಹುಲ್ ತೆವಾಟಿಯಾ, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ, ಗುರ್ನೂರ್ ಸಿಂಗ್ ಬ್ರಾರ್, ರಶೀದ್ ಖಾನ್, ಮಾನವ್ ಸುತಾರ್, ಸಾಯಿ ಕಿಶೋರ್, ಜಯಂತ್ ಯಾದವ್, ಅಶೋಕ್ ಶರ್ಮಾ, ಜೇಸನ್ ಹೋಲ್ಡರ್, ಕಾನರ್ ಎಸ್ಟರ್‌ಹ್ಯೂಝೆನ್, ಪೃಥ್ವಿ ರಾಜ್ ಯಾರ್ರಾ, ಲ್ಯೂಕ್ ವುಡ್, ಗ್ಲೆನ್ ಫಿಲಿಪ್ಸ್, ಶಾರುಖ್ ಖಾನ್. (PC: IPL)

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More