ಡೆಲ್ಲಿ ಕ್ಯಾಪಿಟಲ್ಸ್ ಹೆಡ್ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ

Updated on: Oct 06, 2026 | 3:51 PM

ಐಪಿಎಲ್ 2027ರ ಮಿನಿ ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದೆ. ಮಾಜಿ ನಾಯಕ ಸೌರವ್ ಗಂಗೂಲಿ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್‌ನ ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ. ಹೇಮಾಂಗ್ ಬದಾನಿ ಸ್ಥಾನವನ್ನು ಗಂಗೂಲಿ ತುಂಬಲಿದ್ದಾರೆ. 2019ರಿಂದಲೇ ತಂಡದೊಂದಿಗೆ ವಿವಿಧ ಪಾತ್ರಗಳಲ್ಲಿ ಗುರುತಿಸಿಕೊಂಡಿದ್ದ ಗಂಗೂಲಿ, ಹೊಸ ಜವಾಬ್ದಾರಿಯ ಬಗ್ಗೆ ಉತ್ಸುಕರಾಗಿದ್ದು, ಬಲಿಷ್ಠ ತಂಡ ನಿರ್ಮಿಸುವ ಗುರಿ ಹೊಂದಿದ್ದಾರೆ. ಚಮಿಂಡಾ ವಾಸ್ ಮತ್ತು ಅಮಿತ್ ಮಿಶ್ರಾ ಕೂಡ ಸೇರುವ ಸಾಧ್ಯತೆಯಿದೆ.

1 / 5
ಐಪಿಎಲ್ 2027 ರ ಮಿನಿ ಹರಾಜಿಗೂ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದೆ. ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ನೇಮಿಸಲಾಗಿದೆ. ಕಳೆದೆರಡು ಆವೃತ್ತಿಗಳಲ್ಲಿ ತಂಡದ ಹೆಡ್ ಕೋಚ್ ಆಗಿ ಸೇವೆ ಸಲ್ಲಿಸಿದ್ದ ಹೇಮಾಂಗ್ ಬದಾನಿ ಸ್ಥಾನವನ್ನು ಗಂಗೂಲಿ ತುಂಬಲಿದ್ದಾರೆ(PC-PTI).

ಐಪಿಎಲ್ 2027 ರ ಮಿನಿ ಹರಾಜಿಗೂ ಮೊದಲು ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಮಹತ್ವದ ಬದಲಾವಣೆಯಾಗಿದೆ. ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ನೇಮಿಸಲಾಗಿದೆ. ಕಳೆದೆರಡು ಆವೃತ್ತಿಗಳಲ್ಲಿ ತಂಡದ ಹೆಡ್ ಕೋಚ್ ಆಗಿ ಸೇವೆ ಸಲ್ಲಿಸಿದ್ದ ಹೇಮಾಂಗ್ ಬದಾನಿ ಸ್ಥಾನವನ್ನು ಗಂಗೂಲಿ ತುಂಬಲಿದ್ದಾರೆ(PC-PTI).

2 / 5

2019 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಸೇರಿದ ಗಂಗೂಲಿ ಆರಂಭದಲ್ಲಿ ಸಲಹೆಗಾರರಾಗಿ ಸೇವೆ ಸಲ್ಲಿಸಿದರು. ಆ ನಂತರ ದೆಹಲಿ ಕ್ಯಾಪಿಟಲ್ಸ್‌ ಫ್ರಾಂಚೈಸಿಯ ಪುರುಷ ಮತ್ತು ಮಹಿಳಾ ತಂಡಗಳೆರಡಕ್ಕೂ ಕ್ರಿಕೆಟ್ ನಿರ್ದೇಶಕರಾಗಿ ನೇಮಕಗೊಂಡರು. ಈ ವರ್ಷ SA20 ಲೀಗ್‌ನಲ್ಲಿ ಗಂಗೂಲಿ ದೆಹಲಿ ಫ್ರಾಂಚೈಸಿಯಾದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡದ ಹೆಡ್ ಕೋಚ್ ಆಗಿ ನೇಮಿಕಗೊಂಡರು. ಅವರ ತರಬೇತಿಯಲ್ಲಿ ತಂಡವು ಫೈನಲ್ ಕೂಡ ತಲುಪಿತು(PC-PTI).

3 / 5

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಗಂಗೂಲಿ, ‘ಐಪಿಎಲ್‌ನಲ್ಲಿ ಮುಖ್ಯ ಕೋಚ್ ಪಾತ್ರವನ್ನು ವಹಿಸಿಕೊಳ್ಳಲು ನಾನು ಉತ್ಸುಕನಾಗಿದ್ದೇನೆ. ಡೆಲ್ಲಿ ಕ್ಯಾಪಿಟಲ್ಸ್ ನನ್ನ ಹೃದಯಕ್ಕೆ ತುಂಬಾ ಹತ್ತಿರವಾಗಿದ್ದು, ನಾನು ಈ ತಂಡದೊಂದಿಗೆ ದೀರ್ಘಕಾಲದ ಸಂಬಂಧವನ್ನು ಹೊಂದಿದ್ದೇನೆ. ನಾನು ಮಾಲೀಕರು, ನಿರ್ವಹಣೆ, ಬೆಂಬಲ ಸಿಬ್ಬಂದಿ ಮತ್ತು ಆಟಗಾರರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದೇನೆ, ಆದ್ದರಿಂದ ಇದು ನನಗೆ ಒಂದು ರೋಮಾಂಚಕಾರಿ ಜವಾಬ್ದಾರಿಯಾಗಿದೆ(PC-PTI).

4 / 5

ಡೆಲ್ಲಿ ಕ್ಯಾಪಿಟಲ್ಸ್ ಕೆಲವು ಸಮಯದಿಂದ ಅತ್ಯುತ್ತಮ ಕ್ರಿಕೆಟ್ ಆಡುತ್ತಿರುವ ಪ್ರತಿಭಾನ್ವಿತ ತಂಡವನ್ನು ಹೊಂದಿದೆ. ಅವರೊಂದಿಗೆ ಕೆಲಸ ಮಾಡಲು ನಾನು ಉತ್ಸುಕನಾಗಿದ್ದೇನೆ. ಹೊಸ ಆವೃತ್ತಿಯಲ್ಲಿ ದೆಹಲಿ ತಂಡವನ್ನು ಬಲಿಷ್ಠ ಮತ್ತು ನಿರ್ಭೀತ ತಂಡವಾಗಿ ನಿರ್ಮಿಸುವತ್ತ ನನ್ನ ಗಮನವಿರುತ್ತದೆ ಎಂದು ಗಂಗೂಲಿ ಹೇಳಿಕೊಂಡಿದ್ದಾರೆ(PC-PTI).

5 / 5

ಗಂಗೂಲಿ ಜೊತೆಗೆ ಶ್ರೀಲಂಕಾದ ಮಾಜಿ ವೇಗದ ಬೌಲರ್ ಚಮಿಂಡಾ ವಾಸ್ ಮತ್ತು ಮಾಜಿ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಕೂಡ ತಂಡದ ಭಾಗವಾಗಬಹುದು, ಆದರೆ ಫ್ರಾಂಚೈಸಿ ಮಾತ್ರ ಇದುವರೆಗೆ ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಆದಾಗ್ಯೂ, ಡೆಲ್ಲಿ ಕ್ಯಾಪಿಟಲ್ಸ್ ಅಕಾಡೆಮಿಯಲ್ಲಿ ಚಮಿಂಡಾ ವಾಸ್ ಮತ್ತು ಅಮಿತ್ ಮಿಶ್ರಾ ಕೆಲಸ ಮಾಡಲು ಪ್ರಾರಂಭಿಸಿದ್ದಾರೆ ಎಂಬ ಸುದ್ದಿ ಈಗಾಗಲೇ ಹೊರಬಿದ್ದಿದೆ(PC-PTI).

Published On - 3:50 pm, Tue, 6 October 26

ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us