AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಿಂದ ಹೊರಬಿದ್ದ ಮುಸ್ತಾಫಿಜುರ್​ಗೆ ಪಿಎಸ್​ಎಲ್​ಲ್ಲಿ ಬಂಪರ್ ಬೆಲೆ

Mustafizur Rahman: ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಐಪಿಎಲ್ ಮಿನಿ ಹರಾಜಿನಲ್ಲಿ 9.20 ಕೋಟಿಗೆ ಕೆಕೆಆರ್ ಸೇರಿದ್ದರು. ಹಿಂದೂಗಳ ಮೇಲಿನ ಹಿಂಸಾಚಾರದಿಂದ ಬಿಸಿಸಿಐ ಅವರನ್ನು ಐಪಿಎಲ್‌ನಿಂದ ಹೊರಹಾಕಿತ್ತು. ಈ ನಿರ್ಧಾರದಿಂದ ಕ್ರಿಕೆಟ್ ಜಗತ್ತಿನಲ್ಲಿ ದೊಡ್ಡ ವಿವಾದ ಸೃಷ್ಟಿಯಾಗಿತ್ತು. ಇದೀಗ ಮುಸ್ತಾಫಿಜುರ್ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ 2 ಕೋಟಿ ರೂ. (ಭಾರತೀಯ ಮೌಲ್ಯ) ಗೆ ಲಾಹೋರ್ ಖಲಂದರ್ಸ್‌ ತಂಡಕ್ಕೆ ಮಾರಾಟವಾಗಿದ್ದಾರೆ.

ಪೃಥ್ವಿಶಂಕರ
|

Updated on: Feb 05, 2026 | 9:33 PM

Share
ಐಪಿಎಲ್ ಮಿನಿ ಹರಾಜಿನಲ್ಲಿ ಬರೋಬ್ಬರಿ 9.20 ಕೋಟಿ ರೂಗಳಿಗೆ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡಕ್ಕೆ ಮಾರಾಟವಾಗಿದ್ದ ಬಾಂಗ್ಲಾದೇಶ ವೇಗಿ ಮುಸ್ತಾಫಿಜುರ್ ರೆಹಮಾನ್ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಬೆಲೆ ಪಡೆದ ಬಾಂಗ್ಲಾದೇಶದ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದರು. ಆದರೆ ಐಪಿಎಲ್ ಆರಂಭಕ್ಕೂ ಮುನ್ನವೇ ಅವರನ್ನು ಈ ಟೂರ್ನಿಯಿಂದ ಹೊರಹಾಕಲಾಯಿತು.

1 / 5
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರವನ್ನು ಖಂಡಿಸಿ, ಬಿಸಿಸಿಐ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಿತ್ತು. ಆ ಬಳಿಕ ಕ್ರಿಕೆಟ್ ಲೋಕದಲ್ಲಿ ದೊಡ್ಡ ವಿವಾದವೊಂದು ಹುಟ್ಟಿಕೊಂಡಿತು. ಬಾಂಗ್ಲಾದೇಶ ತಂಡ ಟಿ20 ವಿಶ್ವಕಪ್​ನಿಂದ ತನ್ನ ತಂಡದ ಹೆಸರನ್ನು ಹಿಂತೆಗೆದುಕೊಂಡಿತು. ಇತ್ತ ಪಾಕಿಸ್ತಾನ, ಟೀಂ ಇಂಡಿಯಾ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿತ್ತು.

2 / 5
ವಿಶ್ವ ಕ್ರಿಕೆಟ್​ನಲ್ಲಿ ಇಷ್ಟೆಲ್ಲ ಸಂಚಲನಕ್ಕೆ ಕಾರಣರಾಗಿದ್ದ ಮುಸ್ತಾಫಿಜುರ್ ರೆಹಮಾನ್ ಇದೀಗ ಪಾಕಿಸ್ತಾನ ಸೂಪರ್ ಲೀಗ್​ನಲ್ಲಿ ಭರ್ಜರಿ ಮೊತ್ತಕ್ಕೆ ಖರೀದಿಯಾಗಿದ್ದಾರೆ. ಲಾಹೋರ್ ಖಲಂದರ್ಸ್ ತಂಡವು ಮುಸ್ತಾಫಿಜುರ್ ರೆಹಮಾನ್ ಅವರನ್ನು 6.4 ಕೋಟಿ ಪಾಕಿಸ್ತಾನಿ ರೂಪಾಯಿಗೆ ಖರೀದಿಸಿದೆ. ಅಂದರೆ ಭಾರತೀಯ ರೂಪಾಯಿ ಲೆಕ್ಕದ ಸುಮಾರು 2 ಕೋಟಿ ರೂ. ಗಳಿಗೆ ಮುಸ್ತಾಫಿಜುರ್ ಮಾರಾಟವಾಗಿದ್ದಾರೆ.

3 / 5
ಮುಸ್ತಾಫಿಜುರ್ ರೆಹಮಾನ್ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಇದುವರೆಗೆ ಕೇವಲ ಐದು ಪಂದ್ಯಗಳನ್ನು ಆಡಿದ್ದಾರೆ. ಆಡಿರುವ ಈ ಐದು ಪಂದ್ಯಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆದಿದ್ದು, ಪ್ರತಿ ಓವರ್‌ಗೆ 6.4 ರನ್‌ಗಳ ಎಕಾನಮಿ ರೇಟ್ ಹೊಂದಿದ್ದಾರೆ. ಆದಾಗ್ಯೂ, ಮುಸ್ತಾಫಿಜುರ್ ಇತರ ಟಿ20 ಲೀಗ್‌ಗಳಲ್ಲಿ ವ್ಯಾಪಕ ಅನುಭವವನ್ನು ಹೊಂದಿರುವುದರಿಂದ ಅವರನ್ನು ದೊಡ್ಡ ಮೊತ್ತಕ್ಕೆ ಖರೀದಿಸಲಾಗಿದೆ.

4 / 5
ಐಪಿಎಲ್‌ನಲ್ಲಿ ಇದುವರೆಗೆ ಐದು ತಂಡಗಳ ಪರ ಆಡಿದ್ದ ಮುಸ್ತಾಫಿಜುರ್ ರೆಹಮಾನ್ 60 ಪಂದ್ಯಗಳಲ್ಲಿ 65 ವಿಕೆಟ್‌ಗಳನ್ನು ಪಡೆದಿದ್ದಾರೆ. ಬಿಪಿಎಲ್‌ನಲ್ಲಿ ಆಡಿರುವ 92 ಪಂದ್ಯಗಳಲ್ಲಿ 121 ವಿಕೆಟ್‌ಗಳನ್ನು ಪಡೆದಿದ್ದಾರೆ. ಮುಸ್ತಾಫಿಜುರ್ ಇದುವರೆಗೆ 322 ಟಿ20 ಪಂದ್ಯಗಳಲ್ಲಿ 412 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

5 / 5
ಫೈನಲ್​ನಲ್ಲಿ 23 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ಸ್ಮೃತಿ

ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ಯಾರು? ತೇಜಸ್ವಿ ಸೂರ್ಯ ಹೇಳಿದ್ದಿಷ್ಟು

ಒಂದು ನಾಯಿಯಿಂದ ತಪ್ಪಿಸಿಕೊಳ್ಳಲು ಗೇಟ್ ಹಾರಿದವನಿಗೆ ಕಾದಿತ್ತು ಶಾಕ್!

ಈ ಕಟ್ಟಡದ ಮುಂಭಾಗ ರೀಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ರಜತ್

ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ

ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ

ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ

ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ

ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ