AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಭಾರತದ ಮುಂದೆ ತಲೆಬಾಗಿದ ಬಾಂಗ್ಲಾದೇಶ; ಐಪಿಎಲ್ ಪ್ರಸಾರಕ್ಕೆ ಅಸ್ತು

Bangladesh Lifts IPL Broadcast Ban: ಹಿಂದಿನ ಬಾಂಗ್ಲಾದೇಶ ಸರ್ಕಾರವು ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ ಹೊರಹಾಕಿದ್ದಕ್ಕೆ ಪ್ರತಿಕ್ರಿಯೆಯಾಗಿ ಐಪಿಎಲ್ ಪ್ರಸಾರವನ್ನು ನಿಷೇಧಿಸಿತ್ತು. ಇದೀಗ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಭಾರತ-ಬಾಂಗ್ಲಾದೇಶ ಸಂಬಂಧ ಸುಧಾರಿಸುವ ನಿಟ್ಟಿನಲ್ಲಿ ಐಪಿಎಲ್ ಪ್ರಸಾರಕ್ಕೆ ಅನುಮತಿ ನೀಡಿದೆ. ಮಾರ್ಚ್ 28 ರಿಂದ ಆರಂಭವಾಗುವ 2026ರ ಐಪಿಎಲ್ ಪಂದ್ಯಾವಳಿಯನ್ನು ಬಾಂಗ್ಲಾದೇಶದಲ್ಲಿ ಸ್ಟಾರ್ ಸ್ಪೋರ್ಟ್ಸ್ ಸೇರಿದಂತೆ ಯಾವುದೇ ಪ್ರಸಾರಕರು ಅರ್ಜಿ ಸಲ್ಲಿಸಿ ಪ್ರಸಾರ ಮಾಡಬಹುದು.

ಪೃಥ್ವಿಶಂಕರ
|

Updated on: Mar 28, 2026 | 3:32 PM

Share
ಬಾಂಗ್ಲಾದೇಶ ಕ್ರಿಕೆಟ್ ತಂಡದ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಿದ್ದಕ್ಕೆ ಆಕ್ರೋಶಗೊಂಡಿದ್ದ ಅಂದಿನ ಬಾಂಗ್ಲಾದೇಶ ಮಧ್ಯಂತರ ಸರ್ಕಾರ, ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರವನ್ನು ನಿಷೇಧಿಸಿತ್ತು. ಆದರೀಗ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರಕ್ಕೆ ಅಸ್ತಿತ್ವಕ್ಕೆ ಬಂದಿದ್ದು, ದೇಶದಲ್ಲಿ ಐಪಿಎಲ್ ಪ್ರಸಾರಕ್ಕೆ ಅನುವು ಮಾಡಿಕೊಟ್ಟಿದೆ.

1 / 5
2026 ರ ಐಪಿಎಲ್ ಮಾರ್ಚ್​ 28 ರಿಂದ ಆರಂಭವಾಗುತ್ತಿದ್ದು, ಲೀಗ್ ಆರಂಭಕ್ಕೂ ಮುನ್ನ ಬಾಂಗ್ಲಾದೇಶ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಬಾಂಗ್ಲಾದೇಶ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವ ಜಹೀರ್ ಉದ್ದೀನ್ ಸ್ವಪನ್ ಈ ಬಗ್ಗೆ ಹೇಳಿಕೆ ನೀಡಿದ್ದು, ‘ಐಪಿಎಲ್ ಪ್ರಸಾರದ ಮೇಲೆ ಯಾವುದೇ ನಿಷೇಧವಿಲ್ಲ. ಯಾವುದೇ ಪ್ರಸಾರ ಕಂಪನಿ ಅಥವಾ ಚಾನೆಲ್ ಐಪಿಎಲ್ ಪ್ರಸಾರಕ್ಕಾಗಿ ತಮಗೆ ಅರ್ಜಿ ಸಲ್ಲಿಸಿದರೆ ನಾವು ಐಪಿಎಲ್ ಪ್ರಸಾರಕ್ಕೆ ಅನುಮತಿ ನೀಡುವುದಾಗಿ ತಿಳಿಸಿದ್ದಾರೆ.

2 / 5
ಐಪಿಎಲ್‌ನ ಅಧಿಕೃತ ಪ್ರಸಾರಕರಾದ ಸ್ಟಾರ್ ಸ್ಪೋರ್ಟ್ಸ್ ಬಾಂಗ್ಲಾದೇಶದಲ್ಲಿ ಈ ಪಂದ್ಯಾವಳಿಯನ್ನು ಪ್ರಸಾರ ಮಾಡಲು ಬಯಸಿದರೆ, ಬಾಂಗ್ಲಾದೇಶದ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ಅರ್ಜಿ ಸಲ್ಲಿಸಿ, ಅಧಿಕೃತ ಒಪ್ಪಿಗೆ ಪಡೆದುಕೊಳ್ಳಬಹುದಾಗಿದೆ.

3 / 5
ಮೇಲೆ ಹೇಳಿದಂತೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಕಂಡಿಸಿ, ಬಾಂಗ್ಲಾದೇಶ ಆಟಗಾರರನ್ನು ಐಪಿಎಲ್​ನಿಂದ ನಿಷೇಧಿಸುವ ಕೆಲಸವನ್ನು ಬಿಸಿಸಿಐ ಮಾಡಿತ್ತು. ಅದರಂತೆ ಕೆಕೆಆರ್ ತಂಡದಲ್ಲಿದ್ದ ಏಕೈಕ ಬಾಂಗ್ಲಾದೇಶ ಆಟಗಾರ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಹಾಕಲಾಗಿತ್ತು. ಇದರಿಂದ ಕೆರಳಿದ್ದ ಬಾಂಗ್ಲಾದೇಶ ಸರ್ಕಾರ, ಐಪಿಎಲ್ ಪ್ರಸಾರವನ್ನು ನಿಷೇಧಿಸಿತ್ತು. ಇದರ ಜೊತೆಗೆ ಬಾಂಗ್ಲಾದೇಶ ತಂಡದ ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದ ಹೊರಗೆ ಆಯೋಜಿಸುವಂತೆ ಐಸಿಸಿ ಬಳಿ ಮನವಿ ಮಾಡಿತ್ತು.

4 / 5
ಆದರೆ ಬಾಂಗ್ಲಾದೇಶ ಸರ್ಕಾರದ ಈ ಮನವಿಯನ್ನು ಐಸಿಸಿ ತಿರಸ್ಕರಿಸಿತ್ತು. ಹೀಗಾಗಿ ಬಾಂಗ್ಲಾದೇಶ ಸರ್ಕಾರ ತನ್ನ ತಂಡದ ಹೆಸರನ್ನು ಟಿ20 ವಿಶ್ವಕಪ್​ನಿಂದ ಹಿಂಪಡೆದಿತ್ತು. ಇದೀಗ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ರಚನೆಯಾಗಿದ್ದು, ಹದಗೆಡುತ್ತಿರುವ ಭಾರತ-ಬಾಂಗ್ಲಾದೇಶ ಸಂಬಂಧವನ್ನು ಪುನಃಸ್ಥಾಪಿಸಲು ಮುಂದಾಗಿದೆ. ಅದಕ್ಕೆ ಪೂರಕವಾಗಿ ಐಪಿಎಲ್ ಪ್ರಸಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

5 / 5
Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ

ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ

ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​