IPL ನಲ್ಲಿ ಮಹತ್ವದ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

Updated on: Apr 29, 2025 | 10:35 AM

IPL 2025: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2025) ಲೀಗ್ ಹಂತದಲ್ಲಿ 70 ಪಂದ್ಯಗಳನ್ನಾಡಲಾಗುತ್ತದೆ. ಆದರೆ 21ನೇ ಸೀಸನ್​ ಐಪಿಎಲ್​ನಲ್ಲಿ ಈ ಸಂಖ್ಯೆಯು 90 ಕ್ಕೇರಲಿದೆ. ಅಲ್ಲದೆ ಒಟ್ಟು 94 ಪಂದ್ಯಗಳನ್ನು ಆಯೋಜಿಸಲಾಗುತ್ತದೆ. ಈ ಮೂಲಕ ಐಪಿಎಲ್ ಪಂದ್ಯಗಳ ವಿಸ್ತರಣೆಗೆ ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

1 / 8
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL) ಮಹತ್ವದ ಬದಲಾವಣೆಯಾಗಲಿರುವುದು ಖಚಿತವಾಗಿದೆ. ಅದು ಕೂಡ ಪಂದ್ಯಗಳ ಸಂಖ್ಯೆಗಳ ಹೆಚ್ಚಳದೊಂದಿಗೆ ಎಂಬುದು ವಿಶೇಷ. ಅಂದರೆ ಐಪಿಎಲ್ 2028 ರಿಂದ ಹೆಚ್ಚುವರಿ 20 ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಚಿಂತಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL) ಮಹತ್ವದ ಬದಲಾವಣೆಯಾಗಲಿರುವುದು ಖಚಿತವಾಗಿದೆ. ಅದು ಕೂಡ ಪಂದ್ಯಗಳ ಸಂಖ್ಯೆಗಳ ಹೆಚ್ಚಳದೊಂದಿಗೆ ಎಂಬುದು ವಿಶೇಷ. ಅಂದರೆ ಐಪಿಎಲ್ 2028 ರಿಂದ ಹೆಚ್ಚುವರಿ 20 ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಚಿಂತಿಸಿದೆ.

2 / 8

ಈ ಹಿಂದೆಯೇ ಐಪಿಎಲ್ ಪಂದ್ಯಗಳ ಹೆಚ್ಚಳದ ಬಗ್ಗೆ ಬಿಸಿಸಿಐ ಚರ್ಚಿಸಿತ್ತು. ಅದರಂತೆ ಐಪಿಎಲ್ 2025 ಮತ್ತು 2026 ರಲ್ಲಿ 84 ಪಂದ್ಯಗಳನ್ನು ಆಯೋಜಿಸಲು ಪ್ಲ್ಯಾನ್ ರೂಪಿಸಲಾಗಿತ್ತು. ಅಲ್ಲದೆ 2027 ರಲ್ಲಿ ಐಪಿಎಲ್ ಪಂದ್ಯಗಳ ಸಂಖ್ಯೆಯನ್ನು 94 ಕ್ಕೇರಿಸಲು ಚಿಂತಿಸಲಾಗಿತ್ತು.

3 / 8

ಆದರೆ ಈ ಯೋಜನೆಯು ಈ ಬಾರಿಯ ಐಪಿಎಲ್​ನಲ್ಲಿ ಕಾರ್ಯಗತವಾಗಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಆಟಗಾರರ ವಿಂಡೋ. ಅಂದರೆ ಪಂದ್ಯಗಳ ಹೆಚ್ಚಳದಿಂದಾಗಿ ವಿದೇಶಿ ಆಟಗಾರರು ಅಲಭ್ಯರಾಗುವ ಸಾಧ್ಯತೆಗಳಿದ್ದವು. ಆದರೀಗ 2028 ರಿಂದ 74 ಪಂದ್ಯಗಳ ಬದಲಿಗೆ 94 ಪಂದ್ಯಗಳನ್ನು ಆಯೋಜಿಸಲು ಚರ್ಚಿಸಿರುವುದಾಗಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಅಧ್ಯಕ್ಷ ಅಧ್ಯಕ್ಷ ಅರುಣ್ ಧುಮಾಲ್ ತಿಳಿಸಿದ್ದಾರೆ.

4 / 8

ಅದರಂತೆ 2028 ರಿಂದ ಐಪಿಎಲ್ ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯಲಿದೆ. ಅಂದರೆ ಇಲ್ಲಿ ಪ್ರತಿ ತಂಡಗಳು 18 ಪಂದ್ಯಗಳನ್ನಾಡಲಿದೆ. 9 ಪಂದ್ಯಗಳು ಹೋಮ್ ಗ್ರೌಂಡ್​ನಲ್ಲಿ ನಡೆದರೆ, ಉಳಿದ 9 ಪಂದ್ಯಗಳು ಅವೇ ಮೈದಾನದಲ್ಲಿ ಜರುಗಲಿದೆ. ಈ ಮೂಲಕ ಲೀಗ್​ ಹಂತದಲ್ಲಿ ಪ್ರತಿ ತಂಡಗಳು 18 ಪಂದ್ಯಗಳನ್ನಾಡಲಿದೆ.

5 / 8

ಪ್ರಸ್ತುತ ಐಪಿಎಲ್​ ಕೂಡ ರೌಂಡ್ ರಾಬಿನ್ ಮಾದರಿಯಲ್ಲೇ ನಡೆಯುತ್ತಿದೆ. ಆದರೆ ಪ್ರತಿ ತಂಡಗಳು 4 ಮ್ಯಾಚ್​ಗಳನ್ನು ಕಡಿಮೆ ಆಡುತ್ತಿದೆ. ಅಂದರೆ 5 ತಂಡಗಳ ವಿರುದ್ಧ ತಲಾ 2 ಪಂದ್ಯಗಳನ್ನು ಹಾಗೂ 4 ತಂಡಗಳ ವಿರುದ್ಧ ತಲಾ ಒಂದು ಪಂದ್ಯಗಳನ್ನಾಡಲಾಗುತ್ತಿದೆ. ಈ ಮೂಲಕ ಲೀಗ್​ ಹಂತದಲ್ಲಿ ಪ್ರತಿ ತಂಡಗಳು ಒಟ್ಟು 14 ಪಂದ್ಯಗಳನ್ನು ಮಾತ್ರ ಆಡುತ್ತಿದೆ.

6 / 8

ಉದಾಹರಣೆಗೆ... ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಸಿಎಸ್​ಕೆ, ಕೆಕೆಆರ್, ಪಂಜಾಬ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತಲಾ 2 ಪಂದ್ಯಗಳನ್ನಾಡುತ್ತಿದೆ. ಇದೇ ವೇಳೆ ಮುಂಬೈ ಇಂಡಿಯನ್ಸ್, ಸನ್​ರೈಸರ್ಸ್ ಹೈದರಾಬಾದ್, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಆಡುತ್ತಿರುವುದು ಕೇವಲ 1 ಪಂದ್ಯ ಮಾತ್ರ.

7 / 8

ಆದರೆ 2028 ರಿಂದ ಪ್ರತಿ ತಂಡಗಳ ವಿರುದ್ಧ ಎರಡೆರಡು ಪಂದ್ಯಗಳನ್ನಾಡಲಾಗುತ್ತದೆ. ಈ ಮೂಲಕ ಲೀಗ್ ಹಂತದಲ್ಲಿ 90​ ಪಂದ್ಯಗಳನ್ನು ಆಡಲಾಗುತ್ತದೆ. ಅಲ್ಲದೆ 4 ಪ್ಲೇಆಫ್ ಪಂದ್ಯಗಳನ್ನು ಒಳಗೊಂಡಂತೆ ಒಟ್ಟು 94 ಮ್ಯಾಚ್​ಗಳ ಟೂರ್ನಿ ಆಯೋಜಿಸಲು ಐಪಿಎಲ್ ಗರ್ವನರ್ ಸಮಿತಿ ಪ್ಲ್ಯಾನ್ ರೂಪಿಸಿದೆ. 

8 / 8

ಪಂದ್ಯಗಳ ಹೆಚ್ಚಳವೇಕೆ?  ಐಪಿಎಲ್ ಮಾಧ್ಯಮ ಹಕ್ಕುಗಳ ಒಪ್ಪಂದದ ಪ್ರಕಾರ ಬಿಸಿಸಿಐ ಐಪಿಎಲ್ ಸೀಸನ್-18 ರಲ್ಲಿ 84 ಪಂದ್ಯಗಳನ್ನು ಆಯೋಜಿಸುವುದಾಗಿ ತಿಳಿಸಿತ್ತು. ಆದರೀಗ ಈ ನಿರ್ಧಾರದಿಂದ ಹಿಂದೆ ಸರಿದಿದರೂ, ಅತ್ತ ಪಂದ್ಯಗಳ ಸಂಖ್ಯೆ ಹೆಚ್ಚಳ ಮಾಡಬೇಕೆಂಬ ಬೇಡಿಕೆಯನ್ನು ಐಪಿಎಲ್ ಪ್ರಸಾರಕ ಸಂಸ್ಥೆಗಳು ಮುಂದಿಟ್ಟಿವೆ. ಹೀಗಾಗಿ ಇದೀಗ ಐಪಿಎಲ್ 2028 ರಿಂದ 94 ಪಂದ್ಯಗಳನ್ನು ಆಯೋಜಿಸುವ ಬಗ್ಗೆ ಚರ್ಚಿಸಲಾಗಿದೆ.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us