IPL: ಲಕ್ನೋ ತಂಡಕ್ಕೆ ಹೊಸ ಮುಖ್ಯ ಕೋಚ್ ನೇಮಕ; ತೂಗುಯ್ಯಾಲೆಯಲ್ಲಿ ಗಂಭೀರ್ ಸ್ಥಾನ..!
Lucknow Super Giants: ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿ ಲಕ್ನೋ ಸೂಪರ್ ಜೈಂಟ್ಸ್ ಶುಕ್ರವಾರ ತನ್ನ ತಂಡಕ್ಕೆ ಹೊಸ ಮುಖ್ಯ ಕೋಚ್ ಆಗಿ ಜಸ್ಟಿನ್ ಲ್ಯಾಂಗರ್ ಹೆಸರನ್ನು ಅಂತಿಮಗೊಳಿಸಿದೆ.
1 / 6
ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿ ಲಕ್ನೋ ಸೂಪರ್ ಜೈಂಟ್ಸ್ ಶುಕ್ರವಾರ ತನ್ನ ತಂಡಕ್ಕೆ ಹೊಸ ಮುಖ್ಯ ಕೋಚ್ ಆಗಿ ಜಸ್ಟಿನ್ ಲ್ಯಾಂಗರ್ ಹೆಸರನ್ನು ಅಂತಿಮಗೊಳಿಸಿದೆ. ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ಮಾಹಿತಿಯನ್ನು ಫ್ರಾಂಚೈಸ್ ಹಂಚಿಕೊಂಡಿದೆ.
2 / 6
ಜಸ್ಟಿನ್ ಲ್ಯಾಂಗರ್ ಎಂಟ್ರಿಯೊಂದಿಗೆ ಈ ಹಿಂದೆ ಮೊದಲ ಎರಡು ಸೀಸನ್‌ಗಳಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಮುಖ್ಯ ತರಬೇತುದಾರರಾಗಿದ್ದ ಆಂಡಿ ಫ್ಲವರ್, ತಮ್ಮ ಸ್ಥಾನವನ್ನು ತೊರೆಯಬೇಕಾಗಿದೆ.
3 / 6
ಈ ಬಗ್ಗೆ ಮಾಹಿತಿ ನೀಡಿರುವ ಫ್ರಾಂಚೈಸ್, ಲಕ್ನೋ ಸೂಪರ್ ಜೈಂಟ್ಸ್ ಮಾಜಿ ಶ್ರೇಷ್ಠ ಆಸ್ಟ್ರೇಲಿಯನ್ ಕ್ರಿಕೆಟ್ ತಂಡದ ಕೋಚ್ ಮತ್ತು ಬ್ಯಾಟ್ಸ್‌ಮನ್ ಜಸ್ಟಿನ್ ಲ್ಯಾಂಗರ್ ಅವರನ್ನು ತಮ್ಮ ಮುಖ್ಯ ಕೋಚ್ ಆಗಿ ನೇಮಿಸಿದೆ. ಇದರೊಂದಿಗೆ ಆಂಡಿ ಫ್ಲವರ್ ಅವರ ಎರಡು ವರ್ಷಗಳ ಒಪ್ಪಂದವೂ ಕೊನೆಗೊಂಡಿದ್ದು, ಆಂಡಿ ಫ್ಲವರ್ ಅವರ ಕೊಡುಗೆಗಾಗಿ ಧನ್ಯವಾದಗಳನ್ನು ಸಲ್ಲಿಸಲು ಬಯಸುತ್ತದೆ ಎಂದು ಬರೆದುಕೊಂಡಿದೆ.
4 / 6
2024 ರ ಐಪಿಎಲ್ ಸೀಸನ್ಗೂ ಮುನ್ನ ಫ್ರಾಂಚೈಸಿ ತೆಗೆದುಕೊಳ್ಳುತ್ತಿರುವ ನಿರ್ಧಾರಗಳನ್ನು ನೋಡುತ್ತಿದ್ದರೆ, ತಂಡದ ಮೆಂಟರ್ ಆಗಿರುವ ಗೌತಮ್ ಗಂಭೀರ್ ಅವರ ಭವಿಷ್ಯದ ಬಗ್ಗೆ ಅನುಮಾನ ಮೂಡಿಸಿದೆ. ಇವರೊಂದಿಗೆ, ಇತರ ಸಹಾಯಕ ಸಿಬ್ಬಂದಿ ಕೂಡ ಬದಲಾಗುವ ಸಾಧ್ಯತೆಗಳಿವೆ.
5 / 6
ಮೇ 2018 ರಲ್ಲಿ ಆಸ್ಟ್ರೇಲಿಯಾ ತಂಡದ ಕೋಚ್ ಆಗಿ ನೇಮಕಗೊಂಡಿದ್ದ ಜಸ್ಟಿನ್ ಲ್ಯಾಂಗರ್ ಅವರ ಅಧಿಕಾರಾವಧಿಯಲ್ಲಿ ಆಸ್ಟ್ರೇಲಿಯಾ ಆಶಸ್ ಸರಣಿಯಲ್ಲಿ ಇಂಗ್ಲೆಂಡ್ ಅನ್ನು ಸೋಲಿಸಿತ. ಬಳಿಕ 2021ರಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಗೆದ್ದಿತ್ತು. ಇದಲ್ಲದೆ, ಲ್ಯಾಂಗರ್ ಅವರ ಮಾರ್ಗದರ್ಶನದಲ್ಲಿ ಪರ್ತ್ ಸ್ಕಾರ್ಚರ್ಸ್ ಮೂರು ಬಾರಿ ಬಿಗ್ ಬ್ಯಾಷ್ ಲೀಗ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.
6 / 6
ಆದರೆ ಆ ಬಳಿಕ ಕ್ರಿಕೆಟ್ ಆಸ್ಟ್ರೇಲಿಯಾದ ಅಲ್ಪಾವಧಿಯ ಒಪ್ಪಂದದ ಪ್ರಸ್ತಾಪವನ್ನು ತಿರಸ್ಕರಿಸಿದ ಜಸ್ಟಿನ್ ಲ್ಯಾಂಗರ್ , ಐಪಿಎಲ್ ಫ್ರಾಂಚೈಸಿ ಲಕ್ನೋ ಸೂಪರ್ ಜೈಂಟ್ಸ್‌ನ ಪ್ರಸ್ತಾಪವನ್ನು ಸ್ವೀಕರಿಸಿದ್ದಾರೆ. ಈಗ ಮುಂದಿನ ಐಪಿಎಲ್ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಜಸ್ಟಿನ್ ಲ್ಯಾಂಗರ್ ಅವರ ಮಾರ್ಗದರ್ಶನದಲ್ಲಿ ಕಣಕ್ಕಿಳಿಯಲಿದೆ.