IPL Winners List 2024: ಐಪಿಎಲ್‌ನಲ್ಲಿ ಈವರೆಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ತಂಡಗಳಾವುವು? ಇಲ್ಲಿದೆ ಸಂಪೂರ್ಣ ಪಟ್ಟಿ
IPL Winners and Runner Up List 2008 to 2024: ಇಂಡಿಯನ್ ಪ್ರೀಮಿಯರ್ ಲೀಗ್ನ 17ನೇ ಸೀಸನ್ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದಕ್ಕೂ ಮುನ್ನ ನಡೆದ ಐಪಿಎಲ್ನ 16 ಆವೃತ್ತಿಗಳಲ್ಲಿ ಯಾವೆಲ್ಲಾ ತಂಡ ಚಾಂಪಿಯನ್ ಪಟ್ಟಕ್ಕೇರಿದೆ ಎಂಬುದರ ಸಂಪೂರ್ಣ ಪಟ್ಟಿ ಈ ಕೆಳಗಿನಂತಿದೆ...
1 / 17
IPL Winners List 2008 To 2024: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್ಗೆ (IPL 2024) ತೆರೆ ಬಿದ್ದಿದೆ. ಈ ಬಾರಿಯ ಫೈನಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದಕ್ಕೂ ಮುನ್ನ, ಅಂದರೆ ಕಳೆದ 16 ಸೀಸನ್ಗಳಲ್ಲಿ ಟ್ರೋಫಿ ಎತ್ತಿ ಹಿಡಿದ ತಂಡಗಳಾವುವು? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...
2 / 17
IPL 2023- ಚೆನ್ನೈ ಸೂಪರ್ ಕಿಂಗ್ಸ್: ಕಳೆದ ಸೀಸನ್ ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 5ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್ಗಳಲ್ಲಿ 214 ರನ್ ಕಲೆಹಾಕಿತು. ಆದರೆ ದ್ವಿತೀಯ ಇನಿಂಗ್ಸ್ ವೇಳೆ ಮಳೆ ಬಂದಿದ್ದರಿಂದ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 15 ಓವರ್ಗಳಲ್ಲಿ 171 ರನ್ಗಳ ಟಾರ್ಗೆಟ್ ನೀಡಲಾಯಿತು. ಈ ಗುರಿಯನ್ನು ಚೇಸ್ ಮಾಡುವ ಮೂಲಕ ಸಿಎಸ್ಕೆ ತಂಡ 5 ವಿಕೆಟ್ಗಳ ಜಯ ಸಾಧಿಸಿತು.
3 / 17
IPL 2022- ಗುಜರಾತ್ ಟೈಟಾನ್ಸ್: ಐಪಿಎಲ್ 2022 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿ ಗುಜರಾತ್ ಟೈಟಾನ್ಸ್ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ಕೇವಲ 130 ರನ್ ಕಲೆಹಾಕಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 18.1 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 133 ರನ್ ಬಾರಿಸಿ 7 ವಿಕೆಟ್ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಐಪಿಎಲ್ ಹಾರ್ದಿಕ್ ಪಾಂಡ್ಯ ಪಡೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದರು.
4 / 17
IPL 2021-ಚೆನ್ನೈ ಸೂಪರ್ ಕಿಂಗ್ಸ್: ಐಪಿಎಲ್ 2021 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ದ ಆಡಿದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡವು CSK 3 ವಿಕೆಟ್ ನಷ್ಟಕ್ಕೆ 192 ರನ್ ಕಲೆಹಾಕಿತು. ಈ ಬೃಹಯ್ ಮೊತ್ತವನ್ನು ಬೆನ್ನತ್ತಿ ಕೆಕೆಆರ್ 9 ವಿಕೆಟ್ ಕಳೆದುಕೊಂಡು 165 ರನ್ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಸಿಎಸ್ಕೆ 27 ರನ್‌ಗಳಿಂದ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.
5 / 17
IPL 2020-ಮುಂಬೈ ಇಂಡಿಯನ್ಸ್: 2020ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ 5 ವಿಕೆಟ್ಗಳ ಗೆಲುವು ದಾಖಲಿಸುವ ಮೂಲಕ ಮುಂಬೈ ಇಂಡಿಯನ್ಸ್ 5ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.
6 / 17
IPL 2019-ಮುಂಬೈ ಇಂಡಿಯನ್ಸ್: ಐಪಿಎಲ್ 12ನೇ ಸೀಸನ್ ಫೈನಲ್‌ನಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿದ್ದವು. ಫೈನಲ್ನ ಕೊನೆಯ ಎಸೆತದಲ್ಲಿ 1 ರನ್‌ಗಳಿಂದ ಜಯಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಇತಿಹಾಸ.
7 / 17
IPL 2018-ಚೆನ್ನೈ ಸೂಪರ್ ಕಿಂಗ್ಸ್: ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್‌ನಲ್ಲಿ ಎರಡಕ್ಕಿಂತ ಹೆಚ್ಚು ಟ್ರೋಫಿಗಳನ್ನು ಗೆದ್ದ ಎರಡನೇ ತಂಡವಾಗಿದೆ. 2018 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ಗೆಲ್ಲುವ ಮೂಲಕ ಸಿಎಸ್ಕೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
8 / 17
IPL 2017-ಮುಂಬೈ ಇಂಡಿಯನ್ಸ್: ಐಪಿಎಲ್ 2017 ರ ಫೈನಲ್‌ನಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಕೇವಲ ಒಂದು ರನ್‌ಗಳಿಂದ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
9 / 17
IPL 2016-ಸನ್‌ರೈಸರ್ಸ್ ಹೈದರಾಬಾದ್: ಸನ್‌ರೈಸರ್ಸ್ ಹೈದರಾಬಾದ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಫೈನಲ್ ಪಂದ್ಯದಲ್ಲಿ ಕೇವಲ 8 ರನ್‌ಗಳಿಂದ ಗೆದ್ದು ಎಸ್ಆರ್ಹೆಚ್ ಹೆಸರಿನಲ್ಲಿ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
10 / 17
IPL 2015-ಮುಂಬೈ ಇಂಡಿಯನ್ಸ್: 2015 ರ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ 41 ರನ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಮುಂಬೈ ಇಂಡಿಯನ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
11 / 17
IPL 2014-ಕೋಲ್ಕತ್ತಾ ನೈಟ್ ರೈಡರ್ಸ್: 2012ರ ಆವೃತ್ತಿಯ ಫೈನಲ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ನೀಡಿದ 199 ರನ್ಗಳ ಟಾರ್ಗೆಟ್ ಅನ್ನು ಬೆನ್ನತ್ತುವ ಮೂಲಕ ಕೆಕೆಆರ್ ತಂಡವು 3 ವಿಕೆಟ್ ರೋಚಕ ಜಯದೊಂದಿಗೆ ಚಾಂಪಿಯನ್ ಪಟ್ಟಕ್ಕೇರಿತು.
12 / 17
IPL 2013-ಮುಂಬೈ ಇಂಡಿಯನ್ಸ್: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದದ ಫೈನಲ್ ಪಂದ್ಯದಲ್ಲಿ 23 ರನ್ಗಳ ಜಯದೊಂದಿಗೆ ಮುಂಬೈ ಇಂಡಿಯನ್ಸ್ ತಂಡವು ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
13 / 17
IPL 2012-ಕೋಲ್ಕತ್ತಾ ನೈಟ್ ರೈಡರ್ಸ್:ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 5 ವಿಕೆಟ್ಗಳಿಂದ ಸೋಲಿಸುವ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಐಪಿಎಲ್‌ನಲ್ಲಿ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
14 / 17
IPL 2011-ಚೆನ್ನೈ ಸೂಪರ್ ಕಿಂಗ್ಸ್: ಚನ್ನೈ ಸೂಪರ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ ಬ್ಯಾಕ್ ಟು ಬ್ಯಾಕ್ ಫೈನಲ್ಸ್ ಗೆದ್ದ ಮೊದಲ ತಂಡವಾಗಿದೆ. ಫೈನಲ್ಲ್ಲಿ ಆರ್ಸಿಬಿ ವಿರುದ್ದ 58 ರನ್‌ಗಳಿಂದ ಜಯಗಳಿಸಿ ಟ್ರೋಫಿಯನ್ನು ಎತ್ತಿ ಹಿಡಿಯಿತು.
15 / 17
IPL 2010-ಚೆನ್ನೈ ಸೂಪರ್ ಕಿಂಗ್ಸ್: 2010ರ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 22 ರನ್‌ಗಳಿಂದ ಸೋಲಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
16 / 17
IPL 2009-ಡೆಕ್ಕನ್ ಚಾರ್ಜರ್ಸ್: ಐಪಿಎಲ್ನ 2ನೇ ಸೀಸನ್ನ ಫೈನಲ್ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು 6 ರನ್‌ಗಳಿಂದ ಸೋಲಿಸುವ ಮೂಲಕ ಡೆಕ್ಕನ್ ಚಾರ್ಜರ್ಸ್ (ಈಗಿನ ಎಸ್ಆರ್ಹೆಚ್) ತಂಡವು ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತ್ತು.
17 / 17
IPL 2008-ರಾಜಸ್ಥಾನ್ ರಾಯಲ್ಸ್: ಚೊಚ್ಚಲ ಐಪಿಎಲ್ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ 163 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಸವಾಲು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಕೊನೆಯ ಎಸೆತದಲ್ಲಿ ಗೆಲ್ಲುವ ಮೂಲಕ ರೋಚಕ ಜಯ ಸಾಧಿಸಿ ಮೊದಲ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.