ರಂಗು ರಂಗಿನ ಕ್ರಿಕೆಟ್ ಟೂರ್ನಿ ಐಪಿಎಲ್ನ ಮತ್ತೊಂದು ಸೀಸನ್ ರಂಗೇರಲು ಇನ್ನು ದಿನಗಳು ಮಾತ್ರ ಉಳಿದಿವೆ. ಈಗಾಗಲೇ 14 ಸೀಸನ್ ಮುಗಿದಿದ್ದು, ಇದೀಗ 15 ಸೀಸನ್ನಲ್ಲಿನ ಚಾಂಪಿಯನ್ ಪಟ್ಟಕ್ಕಾಗಿ 10 ಸೆಣಸಾಡಲಿದೆ. ಈ ಬಾರಿಯ ಲೀಗ್ ಹಂತದ ಪಂದ್ಯಗಳು ಮಹಾರಾಷ್ಟ್ರದಲ್ಲಿ ನಡೆಯಲಿದೆ. ಅದರಂತೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿನ 20 ಪಂದ್ಯಗಳು, ಬ್ರಬೋರ್ನ್ ಸ್ಟೇಡಿಯಂ (CCI)ನಲ್ಲಿ 15 ಪಂದ್ಯಗಳು, ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ 20 ಪಂದ್ಯಗಳು ಹಾಗೂ ಪುಣೆಯ ಎಂಸಿಎ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ 15 ಪಂದ್ಯಗಳು ನಡೆಯಲಿದೆ.