AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಗಾಬಾದಲ್ಲಿ ನಿರ್ಣಾಯಕ ಟೆಸ್ಟ್; ಈ ಮೈದಾನದಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನ ಹೇಗಿದೆ?

Virat Kohli: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯ ಗಾಬಾ ಮೈದಾನದಲ್ಲಿ ನಡೆಯಲಿದೆ. ಟೀಂ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಕನಸು ಈ ಪಂದ್ಯದ ಗೆಲುವಿನ ಮೇಲೆ ಅವಲಂಬಿತವಾಗಿದೆ. ಆದರೆ ಗಾಬಾ ಮೈದಾನದಲ್ಲಿ ವಿರಾಟ್ ಕೊಹ್ಲಿಯ ಕಳಪೆ ಅಂಕಿಅಂಶಗಳು ತಂಡದ ಚಿಂತೆಯನ್ನು ಮತ್ತಷ್ಟು ಹೆಚ್ಚಿಸಿವೆ.

ಪೃಥ್ವಿಶಂಕರ
|

Updated on: Dec 10, 2024 | 10:43 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯವು ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯವನ್ನು ಯಾವುದೇ ಬೆಲೆ ತೆತ್ತಾದರೂ ಟೀಂ ಇಂಡಿಯಾ ಗೆಲ್ಲಲೇಬೇಕು. ಏಕೆಂದರೆ ಈ ಪಂದ್ಯದಲ್ಲಿ  ಟೀಂ ಇಂಡಿಯಾ ಸೋತರೆ ಅದರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಕನಸು ಭಗ್ನವಾಗಲಿದೆ.

1 / 5
ಹೀಗಾಗಿ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದರೆ ಅದರ ಡಬ್ಲ್ಯುಟಿಸಿ ಫೈನಲ್ ಕನಸು ಜೀವಂತವಾಗಿರಲಿದೆ. ಇದಕ್ಕೆ ಪೂರಕವಾಗಿ ಕಳೆದ ಬಾರಿ ಗಾಬಾದಲ್ಲಿ ನಡೆದಿದ್ದ ಪಂದ್ಯವನ್ನು ಟೀಂ ಇಂಡಿಯಾ ಗೆದ್ದುಕೊಂಡಿತ್ತು. ಹೀಗಾಗಿ ಕಳೆದ ಬಾರಿಯ ಗೆಲುವಿನ ಪ್ರೇರಣೆಯೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿಯಬೇಕಾಗಿದೆ. ಆದರೆ ಅದಕ್ಕೂ ಮುನ್ನ ಈ ಗಾಬಾ ಮೈದಾನದಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್‌ ಜೀವಾಳವಾಗಿರುವ ವಿರಾಟ್ ಕೊಹ್ಲಿಯ ಪ್ರದರ್ಶನ ಹೇಗಿದೆ ಎಂಬುದನ್ನು ನೋಡೋಣ.

2 / 5
ವಾಸ್ತವವಾಗಿ ಆಸ್ಟ್ರೇಲಿಯಾ ವಿರುದ್ಧದ ಈ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಒಂದು ಇನ್ನಿಂಗ್ಸ್‌ನಲ್ಲಿ ಮಾತ್ರ ಶತಕದ ಇನ್ನಿಂಗ್ಸ್ ಆಡಿದನ್ನು ಬಿಟ್ಟರೆ ಉಳಿದ ಪಂದ್ಯಗಳಲ್ಲಿ ಅವರ ಪ್ರದರ್ಶನ ಕಳಪೆಯಾಗಿದೆ. ಪರ್ತ್ ಟೆಸ್ಟ್​ನ ಎರಡನೇ ಇನ್ನಿಂಗ್ಸ್​ನಲ್ಲಿ ಕೊಹ್ಲಿ ಶತಕ ಸಿಡಿಸಿದ್ದರು. ಉಳಿದಂತೆ ಮೂರು ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿಗೆ ಗಮನಾರ್ಹ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ.

3 / 5
ಇದೀಗ ಇದರ ಜೊತೆಗೆ ಗಾಬಾ ಮೈದಾನದಲ್ಲಿ ವಿರಾಟ್ ಕೊಹ್ಲಿಯ ಅಂಕಿಅಂಶಗಳು ಟೀಂ ಇಂಡಿಯಾವನ್ನು ಇನ್ನಷ್ಟು ಚಿಂತೆಗೀಡು ಮಾಡಿವೆ. ಗಾಬಾ ಮೈದಾನದಲ್ಲಿ ಇದುವರೆಗೆ ಒಂದೇ ಒಂದು ಪಂದ್ಯವನ್ನು ಆಡಿರುವ ಕೊಹ್ಲಿ ಕೇವಲ 20 ರನ್ ಮಾತ್ರ ಕಲೆಹಾಕಿದ್ದಾರೆ.

4 / 5
2014ರಲ್ಲಿ ನಡೆದಿದ್ದ ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 19 ರನ್ ಗಳಿಸಿದ್ದ ಕೊಹ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 1 ರನ್ ಗಳಿಸಿದ್ದರು. ಅಂದರೆ ಒಟ್ಟಾರೆ ಕೊಹ್ಲಿ ಗಾಬಾದಲ್ಲಿ ಇದುವರೆಗೆ ಕೇವಲ 20 ರನ್ ಗಳಿಸಿದ್ದಾರೆ. ಇದೀಗ ಸುದೀರ್ಘ ಸಮಯದ ನಂತರ ಕೊಹ್ಲಿ ಈ ಮೈದಾನದಲ್ಲಿ ಆಡಲು ಸಜ್ಜಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕೊಹ್ಲಿ ಇಲ್ಲಿ ದೊಡ್ಡ ಇನ್ನಿಂಗ್ಸ್ ಆಡಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

5 / 5
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್