IND vs AUS: ಗಾಬಾದಲ್ಲಿ ನಿರ್ಣಾಯಕ ಟೆಸ್ಟ್; ಈ ಮೈದಾನದಲ್ಲಿ ವಿರಾಟ್ ಕೊಹ್ಲಿ ಪ್ರದರ್ಶನ ಹೇಗಿದೆ?
Virat Kohli: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯ ಗಾಬಾ ಮೈದಾನದಲ್ಲಿ ನಡೆಯಲಿದೆ. ಟೀಂ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಕನಸು ಈ ಪಂದ್ಯದ ಗೆಲುವಿನ ಮೇಲೆ ಅವಲಂಬಿತವಾಗಿದೆ. ಆದರೆ ಗಾಬಾ ಮೈದಾನದಲ್ಲಿ ವಿರಾಟ್ ಕೊಹ್ಲಿಯ ಕಳಪೆ ಅಂಕಿಅಂಶಗಳು ತಂಡದ ಚಿಂತೆಯನ್ನು ಮತ್ತಷ್ಟು ಹೆಚ್ಚಿಸಿವೆ.
1 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯವು ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯವನ್ನು ಯಾವುದೇ ಬೆಲೆ ತೆತ್ತಾದರೂ ಟೀಂ ಇಂಡಿಯಾ ಗೆಲ್ಲಲೇಬೇಕು. ಏಕೆಂದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ಸೋತರೆ ಅದರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಕನಸು ಭಗ್ನವಾಗಲಿದೆ.
2 / 5
ಹೀಗಾಗಿ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದರೆ ಅದರ ಡಬ್ಲ್ಯುಟಿಸಿ ಫೈನಲ್ ಕನಸು ಜೀವಂತವಾಗಿರಲಿದೆ. ಇದಕ್ಕೆ ಪೂರಕವಾಗಿ ಕಳೆದ ಬಾರಿ ಗಾಬಾದಲ್ಲಿ ನಡೆದಿದ್ದ ಪಂದ್ಯವನ್ನು ಟೀಂ ಇಂಡಿಯಾ ಗೆದ್ದುಕೊಂಡಿತ್ತು. ಹೀಗಾಗಿ ಕಳೆದ ಬಾರಿಯ ಗೆಲುವಿನ ಪ್ರೇರಣೆಯೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿಯಬೇಕಾಗಿದೆ. ಆದರೆ ಅದಕ್ಕೂ ಮುನ್ನ ಈ ಗಾಬಾ ಮೈದಾನದಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ಜೀವಾಳವಾಗಿರುವ ವಿರಾಟ್ ಕೊಹ್ಲಿಯ ಪ್ರದರ್ಶನ ಹೇಗಿದೆ ಎಂಬುದನ್ನು ನೋಡೋಣ.
3 / 5
ವಾಸ್ತವವಾಗಿ ಆಸ್ಟ್ರೇಲಿಯಾ ವಿರುದ್ಧದ ಈ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಒಂದು ಇನ್ನಿಂಗ್ಸ್‌ನಲ್ಲಿ ಮಾತ್ರ ಶತಕದ ಇನ್ನಿಂಗ್ಸ್ ಆಡಿದನ್ನು ಬಿಟ್ಟರೆ ಉಳಿದ ಪಂದ್ಯಗಳಲ್ಲಿ ಅವರ ಪ್ರದರ್ಶನ ಕಳಪೆಯಾಗಿದೆ. ಪರ್ತ್ ಟೆಸ್ಟ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಕೊಹ್ಲಿ ಶತಕ ಸಿಡಿಸಿದ್ದರು. ಉಳಿದಂತೆ ಮೂರು ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿಗೆ ಗಮನಾರ್ಹ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ.
4 / 5
ಇದೀಗ ಇದರ ಜೊತೆಗೆ ಗಾಬಾ ಮೈದಾನದಲ್ಲಿ ವಿರಾಟ್ ಕೊಹ್ಲಿಯ ಅಂಕಿಅಂಶಗಳು ಟೀಂ ಇಂಡಿಯಾವನ್ನು ಇನ್ನಷ್ಟು ಚಿಂತೆಗೀಡು ಮಾಡಿವೆ. ಗಾಬಾ ಮೈದಾನದಲ್ಲಿ ಇದುವರೆಗೆ ಒಂದೇ ಒಂದು ಪಂದ್ಯವನ್ನು ಆಡಿರುವ ಕೊಹ್ಲಿ ಕೇವಲ 20 ರನ್ ಮಾತ್ರ ಕಲೆಹಾಕಿದ್ದಾರೆ.
5 / 5
2014ರಲ್ಲಿ ನಡೆದಿದ್ದ ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 19 ರನ್ ಗಳಿಸಿದ್ದ ಕೊಹ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 1 ರನ್ ಗಳಿಸಿದ್ದರು. ಅಂದರೆ ಒಟ್ಟಾರೆ ಕೊಹ್ಲಿ ಗಾಬಾದಲ್ಲಿ ಇದುವರೆಗೆ ಕೇವಲ 20 ರನ್ ಗಳಿಸಿದ್ದಾರೆ. ಇದೀಗ ಸುದೀರ್ಘ ಸಮಯದ ನಂತರ ಕೊಹ್ಲಿ ಈ ಮೈದಾನದಲ್ಲಿ ಆಡಲು ಸಜ್ಜಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕೊಹ್ಲಿ ಇಲ್ಲಿ ದೊಡ್ಡ ಇನ್ನಿಂಗ್ಸ್ ಆಡಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.