AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IRE vs IND 2023: ಐರ್ಲೆಂಡ್ ಹಾಗೂ ಭಾರತ ನಡುವಿನ ಟಿ20 ಸರಣಿಯ ವೇಳಾಪಟ್ಟಿ ಪ್ರಕಟ

IRE vs IND 2023: ಸರಣಿಯಲ್ಲಿ ಒಟ್ಟು 3 ಪಂದ್ಯಗಳನ್ನಾಡಲಿದ್ದು, ಈ ಟಿ20 ಸರಣಿಯ ವೇಳಾಪಟ್ಟಿಯನ್ನು ಸಹ ಪ್ರಕಟವಾಗಿದೆ. ಈ ಬಗ್ಗೆ ಐಸಿಸಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಪೃಥ್ವಿಶಂಕರ
|

Updated on:Jun 28, 2023 | 7:26 AM

Share
ಬಹುನಿರೀಕ್ಷಿತ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಮಂಗಳವಾರ ಅಂದರೆ, ಜೂನ್ 27 ರಂದು ಪ್ರಕಟಿಸಲಾಗಿದೆ. ವೇಳಾಪಟ್ಟಿಯ ಪ್ರಕಾರ ಅಕ್ಟೋಬರ್ 5 ರಿಂದ ವಿಶ್ವಕಪ್ ಆರಂಭವಾಗಲಿದ್ದು, ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 8 ರಂದು ಆಡಲಿದೆ. ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾ ಎರಡು ದ್ವಿಪಕ್ಷೀಯ ಸರಣಿಯ ಅಂಗವಾಗಿ 2 ದೇಶಗಳ ಪ್ರವಾಸ ಮಾಡಲಿದೆ.

1 / 9
ಟೀಂ ಇಂಡಿಯಾ ತನ್ನ ಮೊದಲ ಪ್ರವಾಸವಾಗಿ ವೆಸ್ಟ್ ಇಂಡೀಸ್​ಗೆ ಕಾಲಿಡಲಿದೆ. ಅಲ್ಲಿ ಟೆಸ್ಟ್, ಏಕದಿನ, ಟಿ20 ಸರಣಿ ಸೇರಿದಂತೆ ಕ್ರಿಕೆಟ್​ನ ಎಲ್ಲಾ ಮಾದರಿಯ ಪಂದ್ಯಗಳನ್ನು ಆಡಲಿದೆ. ಈ ಪ್ರವಾಸವು ಟಿ20 ಸರಣಿಯೊಂದಿಗೆ ಮುಕ್ತಾಯಗೊಳ್ಳಲಿದೆ. ಈ ಸರಣಿಯ ಐದನೇ ಹಾಗೂ ಅಂತಿಮ ಪಂದ್ಯ ಆಗಸ್ಟ್ 13 ರಂದು ನಡೆಯಲಿದೆ. ಆ ಬಳಿಕ ತಂಡ ಐರ್ಲೆಂಡ್ ಪ್ರವಾಸಕ್ಕೆ ತೆರಳಲಿದೆ.

2 / 9
ಈ ಪ್ರವಾಸದಲ್ಲಿ ಐರ್ಲೆಂಡ್ ವಿರುದ್ಧ ಟಿ20 ಸರಣಿ ನಡೆಯಲಿದೆ. ಸರಣಿಯಲ್ಲಿ ಒಟ್ಟು 3 ಪಂದ್ಯಗಳನ್ನಾಡಲಿದ್ದು, ಈ ಟಿ20 ಸರಣಿಯ ವೇಳಾಪಟ್ಟಿಯನ್ನು ಸಹ ಪ್ರಕಟವಾಗಿದೆ. ಈ ಬಗ್ಗೆ ಐಸಿಸಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಈ ಐರ್ಲೆಂಡ್ ಪ್ರವಾಸದಲ್ಲಿ ಐಪಿಎಲ್​ನ ಸ್ಟಾರ್ ಆಟಗಾರರು ಟೀಂ ಇಂಡಿಯಾದಲ್ಲಿ ಪದಾರ್ಪಣೆ ಮಾಡುವ ಅವಕಾಶ ಗಿಟ್ಟಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

3 / 9
ಐರ್ಲೆಂಡ್ ವಿರುದ್ಧದ ಈ ಟಿ20 ಸರಣಿಯನ್ನು ಆಗಸ್ಟ್ 18 ರಿಂದ 23 ರವರೆಗೆ ಆಯೋಜಿಸಲಾಗಿದೆ. ಈ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಆಡಲಿದೆ. ರಿಂಕು ಸಿಂಗ್, ಯಶಸ್ವಿ ಜೈಸ್ವಾಲ್ ಮತ್ತು ಇತರ ಯುವ ಆಟಗಾರರನ್ನು ಟಿ20 ತಂಡಕ್ಕೆ ಮೊದಲ ಬಾರಿಗೆ ಆಯ್ಕೆ ಮಾಡುವ ಸಾಧ್ಯತೆ ಇದೆ. ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾದ ಬಿ ತಂಡ ಐರ್ಲೆಂಡ್ ಪ್ರವಾಸ ಮಾಡುವ ಸಾಧ್ಯತೆ ಹೆಚ್ಚಿದೆ.

4 / 9
ಐರ್ಲೆಂಡ್ vs ಟೀಂ ಇಂಡಿಯಾ, ಮೊದಲ ಟಿ20 ಪಂದ್ಯ, ಆಗಸ್ಟ್ 18, ಸಂಜೆ 7:30ಕ್ಕೆ ಪಂದ್ಯ ಆರಂಭ.

5 / 9
ಐರ್ಲೆಂಡ್ vs ಟೀಂ ಇಂಡಿಯಾ, 2 ನೇ ಟಿ20 ಪಂದ್ಯ, ಆಗಸ್ಟ್ 20, ಸಂಜೆ 7:30ಕ್ಕೆ ಪಂದ್ಯ ಆರಂಭ.

6 / 9
ಐರ್ಲೆಂಡ್ vs ಟೀಂ ಇಂಡಿಯಾ, 3 ನೇ ಟಿ20 ಪಂದ್ಯ, ಆಗಸ್ಟ್ 23, ಸಂಜೆ 7:30ಕ್ಕೆ ಪಂದ್ಯ ಆರಂಭ.

7 / 9
ಈ ಹಿಂದೆ ಟೀಂ ಇಂಡಿಯಾ ಜೂನ್ 2022 ರಲ್ಲಿ ಐರ್ಲೆಂಡ್ ಪ್ರವಾಸ ಕೈಗೊಂಡಿತು. ಆ ಸಮಯದಲ್ಲಿ, ಟೀಂ ಇಂಡಿಯಾ 2 ಪಂದ್ಯಗಳ ಟಿ20 ಸರಣಿಯಲ್ಲಿ ಐರ್ಲೆಂಡ್ ತಂಡವನ್ನು 2-0 ಅಂತರದಿಂದ ಏಕಪಕ್ಷೀಯವಾಗಿ ಸೋಲಿಸಿತು. ಹೀಗಾಗಿ ಇದೀಗ ಟೀಂ ಇಂಡಿಯಾದ ಯುವಸೇನೆ ಐರ್ಲೆಂಡ್ ವಿರುದ್ಧವೂ ಇದೇ ರೀತಿ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಲಿದೆ.

8 / 9
ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತದ ಸಂಭಾವ್ಯ ತಂಡ:  ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ಸೂರ್ಯಕುಮಾರ್ ಯಾದವ್, ಸಾಯಿ ಸುದರ್ಶನ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಶಾರ್ದೂಲ್ ಠಾಕೂರ್, ಆಕಾಶ್ ಮುಧ್ವಲ್, ಮುಖೇಶ್ ಕುಮಾರ್, ಅರ್ಷ್​ದೀಪ್ ಸಿಂಗ್ ಮತ್ತು ತುಷಾರ್ ದೇಶಪಾಂಡೆ.

9 / 9

Published On - 7:23 am, Wed, 28 June 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ