ವಿಶ್ವಕಪ್​ನಲ್ಲಿ ಸೆಮಿಫೈನಲ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಇರ್ಫಾನ್ ಪಠಾಣ್

| Updated By: ಝಾಹಿರ್ ಯೂಸುಫ್

Updated on: Sep 25, 2023 | 11:01 PM

ODI World Cup 2023: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

1 / 6
ಏಕದಿನ ವಿಶ್ವಕಪ್​ಗೆ ದಿನಗಣನೆ ಶುರುವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಕ್ರಿಕೆಟ್ ಮಹಾಸಮರದ ಕುರಿತಾದ ಚರ್ಚೆಗಳು ಜೋರಾಗಿದೆ. ಅದರಲ್ಲೂ ಈ ಬಾರಿ ಭಾರತದಲ್ಲಿ ಟೂರ್ನಿ ನಡೆಯುತ್ತಿರುವುದರಿಂದ ಟೀಮ್ ಇಂಡಿಯಾ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟಾಗಿದೆ.

2 / 6
ಅತ್ತ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಇರ್ಫಾನ್ ಪಠಾಣ್ ಕೂಡ ಈ ಸಲ ಭಾರತ ಮತ್ತೆ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಈ ಬಾರಿ ಸೆಮಿಫೈನಲ್ ಆಡಲಿರುವ 4 ತಂಡಗಳನ್ನೂ ಸಹ ಹೆಸರಿಸಿದ್ದಾರೆ.

3 / 6
ಇರ್ಫಾನ್ ಪಠಾಣ್ ಪ್ರಕಾರ, ಈ ಬಾರಿ ಟೀಮ್ ಇಂಡಿಯಾ ಸೆಮಿಫೈನಲ್ ಹಂತಕ್ಕೇರುವುದು ಖಚಿತ. ಏಕಂದರೆ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರುವ ಟೀಮ್ ಇಂಡಿಯಾದಿಂದ ತವರಿನಲ್ಲಿ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಹೀಗಾಗಿ ನಾಕೌಟ್ ಹಂತಕ್ಕೇರುವುದರಲ್ಲಿ  ಅನುಮಾನ ಬೇಡ ಎಂದಿದ್ದಾರೆ ಪಠಾಣ್.

4 / 6
ಇನ್ನು ಅತ್ಯುತ್ತಮ ಆಟಗಾರರನ್ನು ಒಳಗೊಂಡಿರುವ ಸೌತ್ ಆಫ್ರಿಕಾ ತಂಡದಿಂದ ಕೂಡ ಈ ಬಾರಿ ಉತ್ತಮ ಪ್ರದರ್ಶನವನ್ನು ನಿರೀಕ್ಷಿಸಬಹುದು. ಹೀಗಾಗಿ ದಕ್ಷಿಣ ಆಫ್ರಿಕಾ ಕೂಡ ಸೆಮೀಸ್​ನಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು ಎಂದಿದ್ದಾರೆ.

5 / 6
ಹಾಲಿ ಚಾಂಪಿಯನ್ ಇಂಗ್ಲೆಂಡ್ ಕೂಡ ಅತ್ಯುತ್ತಮ ಬಳಗವನ್ನು ಹೊಂದಿದ್ದು, ಹೀಗಾಗಿ ಜೋಸ್ ಬಟ್ಲರ್ ಪಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು. ಅಲ್ಲದೆ ಇಂಗ್ಲೆಂಡ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಲಿದೆ ಎಂದು ಇರ್ಫಾನ್ ಪಠಾಣ್ ತಿಳಿಸಿದ್ದಾರೆ.

6 / 6
ಹಾಗೆಯೇ ಆಸ್ಟ್ರೇಲಿಯಾ ತಂಡ ಕೂಡ ಸೆಮಿಫೈನಲ್​​ಗೆ ಪ್ರವೇಶಿಸಲಿದೆ. ಏಕೆಂದರೆ ಐಸಿಸಿ ಟೂರ್ನಿಗಳಲ್ಲಿ ಆಸೀಸ್ ಪಡೆ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಹೀಗಾಗಿ ಆಸ್ಟ್ರೇಲಿಯಾ ಕೂಡ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಇರ್ಫಾನ್ ಪಠಾಣ್ ತಿಳಿಸಿದ್ದಾರೆ.

Published On - 10:56 pm, Mon, 25 September 23