RCB ಇಲ್ಲ, ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ ಇರ್ಫಾನ್ ಪಠಾಣ್
IPL 2026 Playoffs: ಈ ಬಾರಿಯ ಐಪಿಎಲ್ನಲ್ಲಿ ಪ್ಲೇಆಫ್ ಆಡಲಿರುವ 4 ತಂಡಗಳನ್ನು ಇರ್ಫಾನ್ ಪಠಾಣ್ ಹೆಸರಿಸಿದ್ದಾರೆ. ಈ ನಾಲ್ಕು ತಂಡಗಳಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಲ್ಲ ಎಂಬುದು ವಿಶೇಷ. ಅಂದರೆ ಇರ್ಫಾನ್ ಪಠಾಣ್ ಪ್ರಕಾರ, ಈ ಬಾರಿ ಆರ್ಸಿಬಿ ಪ್ಲೇಆಫ್ಗೇರುವುದಿಲ್ಲ.
Updated on: Apr 02, 2026 | 11:54 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭದ ಬೆನ್ನಲ್ಲೇ ಪ್ಲೇಆಫ್ ಪ್ರೆಡಿಕ್ಷನ್ಸ್ ಶುರುವಾಗಿದೆ. ಈಗಾಗಲೇ ಅಂಬಾಟಿ ರಾಯುಡು ಹಾಗೂ ಮೊಹಮ್ಮದ್ ಶಮಿ ಈ ಸಲ ಪ್ಲೇಆಫ್ಗೇರುವ ತಂಡಗಳನ್ನು ಹೆಸರಿಸಿದ್ದಾರೆ. ಇದೀಗ ಈ ಪಟ್ಟಿಗೆ ಟೀಮ್ ಇಂಡಿಯಾದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಕೂಡ ಸೇರಿದ್ದಾರೆ. ಇರ್ಫಾನ್ ಪಠಾಣ್ ಪ್ರಕಾರ ಈ ಸಲ ಪ್ಲೇಆಫ್ ಆಡಲಿರುವ ತಂಡಗಳು ಈ ಕೆಳಗಿನಂತಿವೆ...

ಮುಂಬೈ ಇಂಡಿಯನ್ಸ್ (MI): ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಪ್ಲೇಆಫ್ಗೇರಲಿದೆ ಎಂದು ಇರ್ಫಾನ್ ಪಠಾಣ್ ಭವಿಷ್ಯ ನುಡಿದಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರ ಪುನರಾಗಮನವು ತಂಡಕ್ಕೆ ದೊಡ್ಡ ಶಕ್ತಿ ಎಂದು ಅಭಿಪ್ರಾಯಪಟ್ಟಿರುವ ಪಠಾಣ್, ರೋಹಿತ್ ಶರ್ಮಾ ಅವರ ಅನುಭವ ಮತ್ತು ಮಾರ್ಗದರ್ಶನದೊಂದಿಗೆ ಮುಂಬೈ ಪಡೆ ಪ್ಲೇಆಫ್ಗೆ ಪ್ರವೇಶಿಸಲಿದೆ ಎಂದು ತಿಳಿಸಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ (DC): ದೇಶೀಯ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ಪೃಥ್ವಿ ಶಾ ಅವರು ಈ ಬಾರಿ ಏನನ್ನಾದರೂ ಸಾಧಿಸುವ ಛಲದಲ್ಲಿದ್ದಾರೆ, ಇದು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಬಹುದು. ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಅತ್ಯುತ್ತಮ ಆಟಗಾರರ ದಂಡೇ ಇದೆ. ಹೀಗಾಗಿ ಅಕ್ಷರ್ ಪಟೇಲ್ ಮುಂದಾಳತ್ವದ ಡಿಸಿ ಪಡೆ ಕೂಡ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ.

ಪಂಜಾಬ್ ಕಿಂಗ್ಸ್ (PBKS): ಶ್ರೇಯಸ್ ಅಯ್ಯರ್ ಕಳೆದ ಸೀಸನ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಈ ಬಾರಿ ಕೂಡ ಅಯ್ಯರ್ ಮುಂದಾಳತ್ವದಲ್ಲಿ ಪಂಜಾಬ್ ಪಡೆ ಉತ್ತಮ ಪ್ರದರ್ಶನ ನೀಡಲಿದೆ. ಈ ಮೂಲಕ ಪಂಜಾಬ್ ಕಿಂಗ್ಸ್ ಕೂಡ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಇರ್ಫಾನ್ ಪಠಾಣ್ ಭವಿಷ್ಯ ನುಡಿದಿದ್ದಾರೆ.

ರಾಜಸ್ಥಾನ್ ರಾಯಲ್ಸ್ (RR): ಆರ್ಆರ್ ತಂಡದ ಯುವ ಆರಂಭಿಕ ದಾಂಡಿಗ ವೈಭವ್ ಸೂರ್ಯವಂಶಿ ಅವರ ಪ್ರತಿಭೆಯ ಮೇಲೆ ಪಠಾಣ್ ಭರವಸೆ ವ್ಯಕ್ತಪಡಿಸಿದ್ದಾರೆ. ಈ ಯುವ ಆಟಗಾರ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಈ ಮೂಲಕ ರಾಜಸ್ಥಾನ್ ರಾಯಲ್ಸ್ ಕೂಡ ಈ ಬಾರಿ ಪ್ಲೇಆಫ್ಗೇರಲಿದೆ ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



