IPL 2026: ಇಂದಿನ  ಪಂದ್ಯಕ್ಕೂ RCB ತಂಡದ ಸ್ಟಾರ್ ಆಟಗಾರ ಅಲಭ್ಯ!

Updated on: May 17, 2026 | 8:51 AM

IPL 2026 RCB vs PBKS: ಐಪಿಎಲ್ 2025ರ ಫೈನಲಿಸ್ಟ್​ಗಳ ಮುಖಾಮುಖಿಗೆ ವೇದಿಕೆ ಸಿದ್ಧವಾಗಿದೆ. ಅದು ಸಹ ದೂರದ ಧರ್ಮಶಾಲಾದಲ್ಲಿ. ಅಂದರೆ ಪಂಜಾಬ್ ಕಿಂಗ್ಸ್ ತಂಡವು ತನ್ನ ತವರು ಮೈದಾನದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯದಲ್ಲಿ ಆರ್​ಸಿಬಿ ತಂಡದ ಸ್ಟಾರ್ ಬ್ಯಾಟರ್ ಕಾಣಿಸಿಕೊಳ್ಳುವುದಿಲ್ಲ.

1 / 5
IPL 2026: ಧರ್ಮಶಾಲಾದಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS)​ ತಂಡಗಳು ಮುಖಾಮುಖಿಯಾಗಲಿದೆ. ಹೆ್ಚ್​ಪಿಸಿಎ ಮೈದಾನದಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೆ ಆರ್​ಸಿಬಿ ತಂಡದ ಸ್ಫೋಟಕ ದಾಂಡಿಗ ಅಲಭ್ಯರಾಗಲಿದ್ದಾರೆ.

IPL 2026: ಧರ್ಮಶಾಲಾದಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಪಂಜಾಬ್ ಕಿಂಗ್ಸ್ (PBKS)​ ತಂಡಗಳು ಮುಖಾಮುಖಿಯಾಗಲಿದೆ. ಹೆ್ಚ್​ಪಿಸಿಎ ಮೈದಾನದಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೆ ಆರ್​ಸಿಬಿ ತಂಡದ ಸ್ಫೋಟಕ ದಾಂಡಿಗ ಅಲಭ್ಯರಾಗಲಿದ್ದಾರೆ.

2 / 5

ಏಪ್ರಿಲ್ 18 ರಂದು ನಡೆದ  ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದ ಫಿಲ್ ಸಾಲ್ಟ್ ಇನ್ನೂ ಕೂಡ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಿಂದಲೂ ಅವರು ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

3 / 5

ಫಿಲ್ ಸಾಲ್ಟ್ ಅಲಭ್ಯತೆಯಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸುವುದನ್ನು ಮುಂದುವರೆಸಲಿದ್ದಾರೆ. ಅದರಂತೆ ಪಂಜಾಬ್ ಕಿಂಗ್ಸ್ ವಿರುದ್ಧ ವಿರಾಟ್ ಕೊಹ್ಲಿಯೊಂದಿಗೆ ಯುವ ಎಡಗೈ ದಾಂಡಿಗ ಆರಂಭಿಕನಾಗಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

4 / 5

ಇನ್ನು ಈ ಪಂದ್ಯವು ಆರ್​ಸಿಬಿ ತಂಡದ ಪಾಲಿಗೆ ತುಂಬಾ ಮಹತ್ವದ್ದು. ಏಕೆಂದರೆ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಧಿಕೃತವಾಗಿ ಪ್ಲೇಆಫ್​ಗೇರಲಿದೆ. ಅತ್ತ ಪಂಜಾಬ್ ಕಿಂಗ್ಸ್ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಆರ್​ಸಿಬಿ ವಿರುದ್ಧ ಗೆಲ್ಲುವುದು ಅನಿವಾರ್ಯ. ಹೀಗಾಗಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

5 / 5

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಭುವನೇಶ್ವರ್ ಕುಮಾರ್, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ರಿಚರ್ಡ್ ಗ್ಲೀಸನ್, ಯಶ್ ದಯಾಲ್ (ಅಲಭ್ಯ).

Loading...
Unable to load recommendations.
Follow Us