AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ishan Kishan: ಕ್ರಿಕೆಟ್ ಇತಿಹಾಸದಲ್ಲೇ ಯಾರು ಮಾಡದ ವಿಶೇಷ ದಾಖಲೆ ಬರೆದ ಇಶಾನ್ ಕಿಶನ್

Ishan Kishan: ಚೊಚ್ಚಲ ದ್ವಿಶತಕ ಬಾರಿಸಿದ ವಿಶ್ವದ ಅತ್ಯಂತ ಕಿರಿಯ ಬ್ಯಾಟ್ಸ್​ಮನ್ ಎಂಬ ವಿಶ್ವ ದಾಖಲೆ ಕೂಡ ಕಿಶನ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು.

TV9 Web
| Edited By: |

Updated on: Dec 11, 2022 | 6:10 AM

Share
ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೆ 9 ದ್ವಿಶತಕಗಳು ಮೂಡಿಬಂದಿವೆ. ಇವುಗಳಲ್ಲಿ ಮೊದಲ ಡಬಲ್ ಸೆಂಚುರಿ ಸಚಿನ್ ತೆಂಡೂಲ್ಕರ್ ಬ್ಯಾಟ್​ನಿಂದ ಮೂಡಿಬಂದರೆ, ಕೊನೆಯ ದ್ವಿಶತಕ ಸಿಡಿಸಿರುವುದು ಯುವ ದಾಂಡಿಗ ಇಶಾನ್ ಕಿಶನ್. ಈ ಡಬಲ್ ಸೆಂಚುರಿಯೊಂದಿಗೆ ಕಿಶನ್ ಹಲವು ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಆದರೆ ಅವುಗಳಲ್ಲಿ ಒಂದು ವಿಶೇಷ ವಿಶ್ವದಾಖಲೆ ಎಂಬುದೇ ಇಲ್ಲಿ ವಿಶೇಷ.

1 / 5
ಈ ದ್ವಿಶತಕದ ವಿಶೇಷ ಏನೆಂದರೆ...ಇದಕ್ಕೂ ಮುನ್ನ ಏಕದಿನ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿದ ಬ್ಯಾಟ್ಸ್​ಮನ್​ಗಳೆಲ್ಲರೂ, ಅದಕ್ಕೂ ಮೊದಲು ಶತಕ ಸಿಡಿಸಿ ಬ್ಯಾಟ್ ಮೇಲೆತ್ತಿದ್ದರು. ಆದರೆ ಇಶಾನ್ ಕಿಶನ್ ಮಾತ್ರ ಚೊಚ್ಚಲ ಶತಕದೊಂದಿಗೆ ದ್ವಿಶತಕ ಪೂರೈಸಿದ್ದರು.

2 / 5
ಅಂದರೆ ಚೊಚ್ಚಲ ಶತಕವನ್ನು ದ್ವಿಶತಕವನ್ನಾಗಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೆ ಇಶಾನ್ ಕಿಶನ್ ಪಾತ್ರರಾಗಿದ್ದಾರೆ. ಮೊದಲ ಶತಕ ಬಾರಿಸಿದ ಕೆಲವೇ ಕ್ಷಣದಲ್ಲೇ ಚೊಚ್ಚಲ ದ್ವಿಶತಕ ಸಿಡಿಸಿದ ಆಟಗಾರ ಎಂಬ ವಿಶ್ವ ದಾಖಲೆ ಇಶಾನ್ ಕಿಶನ್ ಪಾಲಾಗಿದೆ.

3 / 5
ಇನ್ನು 85 ಎಸೆತಗಳಲ್ಲಿ ಚೊಚ್ಚಲ ಶತಕ ಬಾರಿಸಿದ್ದ ಇಶಾನ್ ಕೇವಲ 126 ಎಸೆತಗಳಲ್ಲಿ 200 ರನ್​ಗಳ ಗಡಿದಾಟಿದ್ದರು. ಈ ಮೂಲಕ ಅತೀ ವೇಗವಾಗಿ ದ್ವಿಶತಕ ಬಾರಿಸಿದ ಬ್ಯಾಟ್ಸ್​ಮನ್ ಎಂಬ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

4 / 5
ಇದರ ಜೊತೆಗೆ ಚೊಚ್ಚಲ ದ್ವಿಶತಕ ಬಾರಿಸಿದ ವಿಶ್ವದ ಅತ್ಯಂತ ಕಿರಿಯ ಬ್ಯಾಟ್ಸ್​ಮನ್ ಎಂಬ ವಿಶ್ವ ದಾಖಲೆ ಕೂಡ ಕಿಶನ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಇದೀಗ 24ನೇ ವಯಸ್ಸಿನಲ್ಲೇ ಚೊಚ್ಚಲ ಶತಕದೊಂದಿಗೆ ದ್ವಿಶತಕ ಪೂರೈಸಿದ ಕ್ರಿಕೆಟ್​ ಇತಿಹಾಸದಲ್ಲಿ ಯಾರು ಮಾಡದ ಅಪರೂಪದ ವಿಶ್ವ ದಾಖಲೆ ನಿರ್ಮಿಸಿದ್ದಾರೆ ಪಾಕೆಟ್ ಡೈನಾಮೊ ಖ್ಯಾತಿಯ ಇಶಾನ್ ಕಿಶನ್.

5 / 5
TV9 Web
TV9 Web

TV9 Kannada

Read More
Follow Us
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್

ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು

ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್