ಇಶಾನ್ ಕಿಶನ್ ಆರ್ಭಟಕ್ಕೆ ಪಾಕ್ ದಾಂಡಿಗನ ದಾಖಲೆ ಧೂಳೀಪಟ

Updated on: Oct 18, 2026 | 2:07 PM

ಮೈದಾನಕ್ಕಿಳಿದರೆ ಎದುರಾಳಿ ಬೌಲರ್‌ಗಳ ಮೇಲೆ ಮುಗಿಬೀಳುವ ಟೀಮ್ ಇಂಡಿಯಾದ 'ಪಾಕೆಟ್ ಡೈನಮೈಟ್' ಖ್ಯಾತಿಯ ಇಶಾನ್ ಕಿಶನ್, ತಮ್ಮ ಎಂದಿನ ಬಿರುಸಿನ ಬ್ಯಾಟಿಂಗ್ ಶೈಲಿಯಿಂದಲೇ ಟಿ20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ ಒಂದೇ ವರ್ಷದಲ್ಲಿ ಅತ್ಯಧಿಕ ಫೋರ್​ಗಳನ್ನು ಬಾರಿಸುವ ಮೂಲಕ..!

1 / 5
ಟೀಮ್ ಇಂಡಿಯಾದ ಸ್ಫೋಟಕ ದಾಂಡಿಗ ಇಶಾನ್ ಕಿಶನ್ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.  (PC: Gettyimages)

ಟೀಮ್ ಇಂಡಿಯಾದ ಸ್ಫೋಟಕ ದಾಂಡಿಗ ಇಶಾನ್ ಕಿಶನ್ ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.  (PC: Gettyimages)

2 / 5

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಇಶಾನ್ ಕಿಶನ್ ಕೇವಲ 10 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 3 ಫೋರ್​ಗಳೊಂದಿಗೆ 30 ರನ್ ಚಚ್ಚಿದ್ದರು. (PC: Gettyimages)

3 / 5

ಈ ವೇಳೆ ಬಾರಿಸಿದ ಮೂರು ಫೋರ್​ಗಳೊಂದಿಗೆ ಇಶಾನ್ ಕಿಶನ್, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ (ಪೂರ್ಣ ಸದಸ್ಯ ರಾಷ್ಟ್ರಗಳ) ಒಂದೇ ವರ್ಷ ಅತ್ಯಧಿಕ ಫೋರ್ ಬಾರಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಪ್ರಮುಖ ದಾಖಲೆ ಪಾಕ್ ತಂಡದ ಮೊಹಮ್ಮದ್ ರಿಝ್ವಾನ್ ಹೆಸರಿನಲ್ಲಿತ್ತು. (PC: Gettyimages)

4 / 5

ಪಾಕಿಸ್ತಾನದ ಮೊಹಮ್ಮದ್ ರಿಝ್ವಾನ್ ಅವರು 2021ರಲ್ಲಿ ಒಟ್ಟು 29 ಪಂದ್ಯಗಳ 26 ಇನ್ನಿಂಗ್ಸ್‌ಗಳಲ್ಲಿ ಬ್ಯಾಟಿಂಗ್ ಮಾಡಿ 119 ಫೋರ್ ಬಾರಿಸಿದ್ದರು. ಈ ಮೂಲಕ ಕ್ಯಾಲೆಂಡರ್ ವರ್ಷವೊಂದರಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಫೋರ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು. (PC: Gettyimages)

5 / 5

ಇದೀಗ ಈ ವಿಶ್ವ ದಾಖಲೆಯನ್ನು ಇಶಾನ್ ಕಿಶನ್ ತಮ್ಮದಾಗಿಸಿಕೊಂಡಿದ್ದಾರೆ. ಈ ವರ್ಷ ಈವರೆಗೆ 34 ಪಂದ್ಯಗಳನ್ನಾಡಿರುವ ಇಶಾನ್ ಒಟ್ಟು 122 ಫೋರ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ವರ್ಷವೊಂದರಲ್ಲಿ ಅತೀ ಹೆಚ್ಚು ಫೋರ್ ಬಾರಿಸಿದ ದಾಂಡಿಗ ಎನಿಸಿಕೊಂಡಿದ್ದಾರೆ. (PC: Gettyimages)

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us