AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

42 ರನ್​ಗಳು… ಪಾಕ್ ವಿರುದ್ಧ ‘ಪವರ್’​ಫುಲ್ ದಾಖಲೆ ಬರೆದ ಇಶಾನ್ ಕಿಶನ್

India vs Pakistan: ಪಾಕಿಸ್ತಾನ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿರುವ ಇಶಾನ್ ಕಿಶನ್ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಸಹ ಪವರ್​ಪ್ಲೇನಲ್ಲೇ ಅತ್ಯಧಿಕ ರನ್ ಕಲೆಹಾಕುವ ಮೂಲ. ಅಂದರೆ ಪಾಕ್ ವಿರುದ್ಧ ಪವರ್​ಪ್ಲೇನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ದಾಖಲೆ ಇದೀಗ ಇಶಾನ್ ಕಿಶನ್ ಪಾಲಾಗಿದೆ.

ಝಾಹಿರ್ ಯೂಸುಫ್
|

Updated on: Feb 16, 2026 | 8:05 AM

Share
ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದ ಮೂಲಕ ಇಶಾನ್ ಕಿಶನ್ (Ishan Kishan) ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಶುಭ್​​ಮನ್ ಗಿಲ್ ಹೆಸರಿನಲ್ಲಿದ್ದ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ದಾಂಡಿಗ ಅಭಿಷೇಕ್ ಶರ್ಮಾ (0) ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಇದಾಗ್ಯೂ ಮತ್ತೊಂದೆಡೆ ಇಶಾನ್ ಕಿಶನ್ ಆರ್ಭಟಿಸಿದ್ದರು. ಪರಿಣಾಮ ಪವರ್​​ಪ್ಲೇನಲ್ಲೇ ರನ್​ಗಳ ಸುರಿಮಳೆಯಾಯಿತು.

2 / 5
ಇಶಾನ್ ಕಿಶನ್​ರ ಈ ಅಬ್ಬರದೊಂದಿಗೆ ಟೀಮ್ ಇಂಡಿಯಾ ಪವರ್​ಪ್ಲೇನಲ್ಲಿ 52 ರನ್​ಗಳಿಸಲು ಸಾಧ್ಯವಾಯಿತು. ವಿಶೇಷ ಎಂದರೆ ಈ 52 ರನ್​ಗಳಲ್ಲಿ 42 ರನ್​ ಚಚ್ಚಿದ್ದು ಇಶಾನ್. ಈ ಮೂಲಕ ಪಾಕಿಸ್ತಾನ್ ವಿರುದ್ಧ ಪವರ್​ಪ್ಲೇನಲ್ಲಿ ಅತ್ಯಧಿಕ ರನ್​ ಚಚ್ಚಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಇಶಾನ್ ಕಿಶನ್ ತಮ್ಮದಾಗಿಸಿಕೊಂಡರು.

3 / 5
ಇದಕ್ಕೂ ಮುನ್ನ ಈ ದಾಖಲೆ ಶುಭ್​​ಮನ್ ಗಿಲ್ ಹೆಸರಿನಲ್ಲಿತ್ತು. 2025ರ ಏಷ್ಯಾಕಪ್​ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಶುಭ್​​ಮನ್ ಗಿಲ್ ಪವರ್​ಪ್ಲೇನಲ್ಲಿ 35 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಪಾಕ್ ವಿರುದ್ಧ ಪವರ್​ಪ್ಲೇನಲ್ಲೇ 42 ರನ್​ ಸಿಡಿಸುವ ಇಶಾನ್ ಕಿಶನ್ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 5
ಇನ್ನು ಈ ಪಂದ್ಯದಲ್ಲಿ 40 ಎಸೆತಗಳನ್ನು ಎದುರಿಸಿದ ಇಶಾನ್ ಕಿಶನ್ 10 ಫೋರ್ ಹಾಗೂ 3 ಸಿಕ್ಸರ್​ನೊಂದಿಗೆ 77 ರನ್ ಬಾರಿಸಿದ್ದರು. ಈ ಮೂಲಕ ಪಾಕ್ ವಿರುದ್ಧದ ಟಿ20 ಪಂದ್ಯದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಟೀಮ್ ಇಂಡಿಯಾ ಆರಂಭಿಕ ದಾಂಡಿಗ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಗೌತಮ್ ಗಂಭೀರ್ ಹೆಸರಿನಲ್ಲಿತ್ತು. ಗಂಭೀರ್ 2007 ರ ಟಿ20 ವಿಶ್ವಕಪ್​ ಪಂದ್ಯದಲ್ಲಿ ಪಾಕ್ ವಿರುದ್ಧ 75 ರನ್ ಬಾರಿಸಿದ್ದರು. ಇದೀಗ ಈ ದಾಖಲೆಯನ್ನು ಸಹ ಮುರಿಯುವಲ್ಲಿ ಇಶಾನ್ ಕಿಶನ್ ಯಶಸ್ವಿಯಾಗಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ