AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ತಂಡದಲ್ಲಿಲ್ಲ ಸ್ಥಾನ… ವಿದೇಶಿ ತಂಡದ ಪರ ಇಶಾನ್ ಕಿಶನ್ ಪಾದಾರ್ಪಣೆ

Ishan Kishan: ಟೀಮ್ ಇಂಡಿಯಾ ಪರ ಭರವಸೆ ಮೂಡಿಸಿದ ಯುವ ದಾಂಡಿಗರಲ್ಲಿ ಇಶಾನ್ ಕಿಶನ್ ಕೂಡ ಒಬ್ಬರು. ಅದರಲ್ಲೂ ಆರಂಭದಲ್ಲೇ ಸ್ಪೋಟಕ ಡಬಲ್ ಸೆಂಚುರಿ ಸಿಡಿಸುವ ಮೂಲಕ ಎಡಗೈ ಬ್ಯಾಟರ್ ವಿಶ್ವ ದಾಖಲೆ ನಿರ್ಮಿಸಿದ್ದರು. ಆದರೆ ಆ ಬಳಿಕ ಇಶಾನ್ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದು ವಿರಳ. ಅದರಲ್ಲೂ 2023ರ ಏಕದಿನ ವಿಶ್ವಕಪ್ ಬಳಿಕ ಅವರನ್ನು ಟೀಮ್ ಇಂಡಿಯಾದಿಂದ ಕೈ ಬಿಡಲಾಗಿದೆ.

ಝಾಹಿರ್ ಯೂಸುಫ್
|

Updated on: Jun 23, 2025 | 2:32 PM

Share
ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಭಾರತ ತಂಡದಿಂದ ಹೊರಬಿದ್ದು ವರ್ಷಗಳು ಕಳೆದಿವೆ. ಇದಾಗ್ಯೂ ಯುವ ದಾಂಡಿಗನ ಕಂಬ್ಯಾಕ್ ಪ್ರಯತ್ನ ಮುಂದುವರೆದಿದೆ. ಅದರ ಭಾಗವಾಗಿ ಇದೀಗ ಇಂಗ್ಲೆಂಡ್​ನ ಕೌಂಟಿ ಕ್ರಿಕೆಟ್​ನಲ್ಲಿ ಇಶಾನ್ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಅದು ಸಹ ಖ್ಯಾತ ಕ್ಲಬ್​ ನಾಟಿಂಗ್‌ಹ್ಯಾಮ್‌ಶೈರ್ ಪರ ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ.

1 / 5
ಕೌಂಟಿ ಚಾಂಪಿಯನ್‌ಶಿಪ್ ಡಿವಿಷನ್ ಒನ್ 2025 ರ 40ನೇ ಪಂದ್ಯದ ಮೂಲಕ ಇಶಾನ್ ಕಿಶನ್ ನಾಟಿಂಗ್‌ಹ್ಯಾಮ್‌ಶೈರ್ ಪರ ಪಾದಾರ್ಪಣೆ ಮಾಡಿದ್ದಾರೆ. ಯಾರ್ಕ್​ಶೈರ್​ ವಿರುದ್ಧದ ಈ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿರುವ ಇಶಾನ್ ಮೊದಲ ಇನಿಂಗ್ಸ್​ನಲ್ಲಿ 53 ಎಸೆತಗಳಲ್ಲಿ 6 ಫೋರ್​ಗಳೊಂದಿಗೆ ಅಜೇಯ 44 ರನ್​ ಕಲೆಹಾಕಿದ್ದಾರೆ.

2 / 5
ಇಶಾನ್ ಕಿಶನ್ ಅವರ ಈ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ನಾಟಿಂಗ್‌ಹ್ಯಾಮ್‌ಶೈರ್ ತಂಡವು ಮೊದಲ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 298 ರನ್​ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಇಶಾನ್ ಕಿಶನ್ ಹಾಗೂ ಲಿಯಾಮ್ ಪೀಟರ್ಸನ್ ಬ್ಯಾಟಿಂಗ್ ಕಾಯ್ದುಕೊಂಡಿದ್ದು, 2ನೇ ದಿನದಾಟಲ್ಲಿ ಬ್ಯಾಟಿಂಗ್ ಮುಂದುವರೆಸಲಿದ್ದಾರೆ.

3 / 5
ಇಶಾನ್ ಕಿಶನ್ ಟೀಮ್ ಇಂಡಿಯಾ ಪರ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದು 2023 ರಲ್ಲಿ. 2023ರ ಏಕದಿನ ವಿಶ್ವಕಪ್ ಬಳಿಕ ಅಶಿಸ್ತಿನ ಕಾರಣ ಭಾರತ ತಂಡದಿಂದ ಹೊರಬಿದ್ದಿದ್ದ ಯುವ ದಾಂಡಿಗನಿಗೆ ಮತ್ತೆ ಅವಕಾಶ ಸಿಕ್ಕಿಲ್ಲ. ಇದೀಗ ಇಂಗ್ಲೆಂಡ್​ನಲ್ಲಿ ಕೌಂಟಿ ಪಂದ್ಯಗಳನ್ನಾಡುವ ಮೂಲಕ ಮತ್ತೊಮ್ಮೆ ಟೀಮ್ ಇಂಡಿಯಾದ ಕದ ತಟ್ಟುವ ವಿಶ್ವಾಸದಲ್ಲಿದ್ದಾರೆ.

4 / 5
ಅಂದಹಾಗೆ ಇಶಾನ್ ಕಿಶನ್ ಈವರೆಗೆ ಭಾರತದ ಪರ 2 ಟೆಸ್ಟ್, 27 ಏಕದಿನ ಹಾಗೂ 32 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಟೆಸ್ಟ್​ನಲ್ಲಿ 78 ರನ್​ ಕಲೆಹಾಕಿದರೆ, ಏಕದಿನ ಕ್ರಿಕೆಟ್​ನಲ್ಲಿ 933 ರನ್ ಗಳಿಸಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ 796 ರನ್ ಬಾರಿಸಿದ್ದಾರೆ. ಇದೀಗ ಕೌಂಟಿ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿರುವ ಇಶಾನ್ ಕಿಶನ್ ವಿದೇಶಿ ನೆಲದಲ್ಲಿ ಮಿಂಚಿದರೆ, ಮುಂಬರುವ ದಿನಗಳಲ್ಲಿ ಭಾರತ ತಂಡಲ್ಲಿ ಎದುರು ನೋಡಬಹುದು.

5 / 5
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ