ಇತಿಹಾಸವನ್ನೇ ಬದಲಿಸಿದ ಇಶಾನ್: ಟಿ20 ಕ್ರಿಕೆಟ್‌ನಲ್ಲಿ ಭರ್ಜರಿ ದಾಖಲೆ!
ಹ್ಯಾಮಿಲ್ಟನ್‌ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಇಶಾನ್ ಕಿಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್ ಕೇವಲ 32 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 61 ರನ್ ಸಿಡಿಸಿದ್ದಾರೆ. ಈ ಭರ್ಜರಿ ಅರ್ಧಶತಕದೊಂದಿಗೆ ವಿಶೇಷ ದಾಖಲೆಯನ್ನೂ ಕೂಡ ನಿರ್ಮಿಸಿದ್ದಾರೆ.
Updated on: Nov 01, 2026 | 1:42 PM

ಭಾರತ ತಂಡದ ವಿಕೆಟ್ ಕೀಪರ್-ಬ್ಯಾಟರ್ ಇಶಾನ್ ಕಿಶನ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ ಟೀಮ್ ಇಂಡಿಯಾದ ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ಅವರ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: Gettyimages)

ಹ್ಯಾಮಿಲ್ಟನ್‌ನಲ್ಲಿ ಭಾನುವಾರ (ನವೆಂಬರ್ 1, 2026) ನಡೆದ ನ್ಯೂಝಿಲೆಂಡ್ ವಿರುದ್ಧದ ಐದನೇ ಟಿ20 ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ 28 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಹಾಫ್ ಸೆಂಚುರಿಯೊಂದಿಗೆ ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಟಿ20 ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: Gettyimages)

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಟೀಮ್ ಇಂಡಿಯಾದ ಮಾಜಿ ನಾಯಕ ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿತ್ತು. 2022ರಲ್ಲಿ ಸೂರ್ಯಕುಮಾರ್ ಯಾದವ್ ಬರೋಬ್ಬರಿ 1,164 ರನ್ ಕಲೆಹಾಕುವ ಮೂಲಕ ಒಂದೇ ವರ್ಷದಲ್ಲಿ ಟಿ20 ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದರು. (PC: Gettyimages)

ಇದೀಗ ಈ ದಾಖಲೆಯನ್ನು ಇಶಾನ್ ಕಿಶನ್ ಅಳಿಸಿ ಹಾಕಿದ್ದಾರೆ. ಈ ವರ್ಷ 36 ಟಿ20 ಇನಿಂಗ್ಸ್ ಆಡಿರುವ ಇಶಾನ್ ಕಿಶನ್ 1,170* ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ವರ್ಷದೊಳಗೆ ಟೀಮ್ ಇಂಡಿಯಾ ಪರ ಅತ್ಯಧಿಕ ರನ್ ಬಾರಿಸಿದ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: Gettyimages)

ಇನ್ನು ಇಶಾನ್ ಕಿಶನ್ ಬರೆದ ಈ ದಾಖಲೆ ಮುರಿಯಲು ಮತ್ತೋರ್ವ ಟೀಮ್ ಇಂಡಿಯಾ ದಾಂಡಿಗ ಅಭಿಷೇಕ್ ಶರ್ಮಾಗೂ ಉತ್ತಮ ಅವಕಾಶವಿದೆ. ಏಕೆಂದರೆ ಈ ವರ್ಷ ಒಟ್ಟು 38 ಇನಿಂಗ್ಸ್ ಆಡಿರುವ 1,153 ರನ್ ಕಲೆಹಾಕಿದ್ದಾರೆ. ಹೀಗಾಗಿ ಮುಂಬರುವ ಪಂದ್ಯಗಳಲ್ಲಿ ಅಭಿಷೇಕ್ ಹಾಗೂ ಇಶಾನ್ ನಡುವೆ ಪೈಪೋಟಿ ಮುಂದುವರೆಯಲಿದೆ. (PC: Gettyimages)

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



