
ಚೆನ್ನೈನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿ ಫೈನಲ್ ಪಂದ್ಯದಲ್ಲಿ ದಕ್ಷಿಣ ವಲಯ ತಂಡದ ವಿರುದ್ಧ ಪೂರ್ವ ವಲಯ ತಂಡ ಸಂಪೂರ್ಣ ಮೇಲುಗೈ ಸಾಧಿಸಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 372 ರನ್‌ಗಳ ಬೃಹತ್ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಪೂರ್ವ ವಲಯ ಪರ ಮತ್ತೊಮ್ಮ ನಾಯಕ ಇಶಾನ್ ಕಿಶನ್ ಸ್ಮರಣೀಯ ಇನ್ನಿಂಗ್ಸ್ ಆಡಿದ್ದಾರೆ(PC-PTI).
ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕದ ಇನ್ನಿಂಗ್ಸ್ ಆಡಿದ್ದ ಕಿಶನ್, ಎರಡನೇ ಇನ್ನಿಂಗ್ಸ್‌ನಲ್ಲಿ 80 ರನ್ ಬಾರಿಸಿದರು. ಇಶಾನ್ ಕಿಶನ್ ಎರಡನೇ ಇನ್ನಿಂಗ್ಸ್ನಲ್ಲೂ ಶತಕ ಬಾರಿಸಬಹುದಿತ್ತು. ಆದರೆ ಆಕ್ರಮಣಕಾರಿ ಆಟಕ್ಕೆ ಮುಂದಾಗಿದ್ದ 80 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಕಿಶನ್ ತನ್ನ ಇನ್ನಿಂಗ್ಸ್‌ನಲ್ಲಿ ಒಂಬತ್ತು ಬೌಂಡರಿಗಳು ಮತ್ತು ಮೂರು ಸಿಕ್ಸರ್‌ಗಳನ್ನು ಬಾರಿಸಿದರು(PC-PTI).
ಮೇಲೆ ಹೇಳಿದಂತೆ ಇಶಾನ್ ಕಿಶನ್ ಮೊದಲ ಇನ್ನಿಂಗ್ಸ್‌ನಲ್ಲಿ ದಾಖಲೆಯ 270 ರನ್ ಬಾರಿಸಿದ್ದರು. ತಮ್ಮ ಇನ್ನಿಂಗ್ಸ್‌ನಲ್ಲಿ 334 ಎಸೆತಗಳನ್ನು ಎದುರಿಸಿದ್ದ ಕಿಶನ್ 30 ಬೌಂಡರಿ ಮತ್ತು 7 ಸಿಕ್ಸರ್‌ಗಳನ್ನು ಬಾರಿಸಿದ್ದರು. ಅವರ ಈ ಅದ್ಭುತ ಇನ್ನಿಂಗ್ಸ್ನಿಂದಾಗಿ ಪೂರ್ವ ವಲಯ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 708 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು(PC-PTI).
ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಒಟ್ಟು ಎರಡು ಇನ್ನಿಂಗ್ಸ್ಗಳನ್ನು ಸೇರಿಸಿ 350 ರನ್ ಕಲೆ ಹಾಕಿದರು. ಇದರೊಂದಿಗೆ ಕಿಶನ್ ದುಲೀಪ್ ಟ್ರೋಫಿ ತಮ್ಮ ತಂಡವನ್ನು ಚಾಂಪಿಯನ್ ಆಗುವ ಸನಿಹಕ್ಕೆ ತಂದಿದ್ದಾರೆ. ಏಕೆಂದರೆ ಈ ಪಂದ್ಯ ಡ್ರಾ ಆಗುವ ಸಾಧ್ಯತೆಯಿದ್ದು, ಪೂರ್ವ ವಲಯವು ಮೊದಲ ಇನ್ನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಗೆಲ್ಲುವುದು ಖಚಿತವಾಗಿದೆ(PC-PTI).
ಇಶಾನ್ ಕಿಶನ್ ಬಗ್ಗೆ ಹೇಳುವುದಾದರೆ, ಅವರು ಮೂರು ಪ್ರಮುಖ ಫೈನಲ್ ಪಂದ್ಯಗಳಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನದೊಂದಿಗೆ ತಮ್ಮ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಫೈನಲ್‌ನಲ್ಲಿ ಶತಕ ಗಳಿಸುವ ಮೂಲಕ ತಮ್ಮ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದರು. ಟಿ20 ವಿಶ್ವಕಪ್ ಫೈನಲ್‌ನಲ್ಲಿ ಅರ್ಧಶತಕ ಬಾರಿಸುವ ಮೂಲಕ ತಂಡವನ್ನು ಚಾಂಪಿಯನ್ ಮಾಡಿದ್ದರು. ಈಗ, ದುಲೀಪ್ ಟ್ರೋಫಿಯಲ್ಲಿ 350 ರನ್ ಗಳಿಸುವ ಮೂಲಕ ತಮ್ಮ ತಂಡದ ಗೆಲುವನ್ನು ಬಹುತೇಕ ಖಚಿತಪಡಿಸಿದ್ದಾರೆ(PC-PTI).