Ishan Kishan: ಧೋನಿಯ ವಿಶೇಷ ದಾಖಲೆ ಸರಿಗಟ್ಟಿದ ಇಶಾನ್ ಕಿಶನ್
TV9 Web | Updated By: ಝಾಹಿರ್ ಯೂಸುಫ್
Updated on:
Aug 01, 2023 | 9:25 PM
Ishan Kishan Record: ಕಣಕ್ಕಿಳಿದ ಇಶಾನ್ ಕಿಶನ್ 64 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 77 ರನ್ ಬಾರಿಸಿದ್ದರು. ಇದರೊಂದಿಗೆ ಏಕದಿನ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಬಾರಿಸಿದ ಭಾರತದ 6ನೇ ಬ್ಯಾಟರ್ ಎನಿಸಿಕೊಂಡರು.
1 / 6
India vs West Indies: ಟ್ರಿನಿಡಾಡ್ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ (Ishan Kishan) ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಅರ್ಧಶತಕದೊಂದಿಗೆ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಟ್ಟಿದ್ದಾರೆ.
2 / 6
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಇಶಾನ್ ಕಿಶನ್ 64 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 77 ರನ್ ಬಾರಿಸಿದ್ದರು. ಇದರೊಂದಿಗೆ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಬಾರಿಸಿದ ಭಾರತದ 6ನೇ ಬ್ಯಾಟರ್ ಎನಿಸಿಕೊಂಡರು.
3 / 6
ಅಲ್ಲದೆ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 2ನೇ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆಯನ್ನು ಮಾಜಿ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ನಿರ್ಮಿಸಿದ್ದರು.
4 / 6
2019 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ 3 ಪಂದ್ಯಗಳ ದ್ವಿಪಕ್ಷೀಯ ಸರಣಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಧೋನಿ ಹ್ಯಾಟ್ರಿಕ್ ಅರ್ಧಶತಕ ಬಾರಿಸಿದ್ದರು. ಇದೀಗ ಧೋನಿ ಹೆಸರಿನಲ್ಲಿದ್ದ ಈ ವಿಶೇಷ ದಾಖಲೆಯನ್ನು ಇಶಾನ್ ಕಿಶನ್ ಸರಿಗಟ್ಟಿದ್ದಾರೆ.
5 / 6
ಇದಕ್ಕೂ ಮುನ್ನ ಇಶಾನ್ ಕಿಶನ್ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 52 ಹಾಗೂ ಎರಡನೇ ಏಕದಿನ ಪಂದ್ಯದಲ್ಲಿ 55 ರನ್ ಬಾರಿಸಿದ್ದರು. ಇದೀಗ ಮೂರನೇ ಏಕದಿನ ಪಂದ್ಯದಲ್ಲಿ 77 ರನ್ ಸಿಡಿಸುವ ಮೂಲಕ 3 ಪಂದ್ಯಗಳ ಸರಣಿಯಲ್ಲಿ ಹ್ಯಾಟ್ರಿಕ್ ಅರ್ಧಶತಕ ಬಾರಿಸಿದ ಭಾರತದ 2ನೇ ವಿಕೆಟ್ ಕೀಪರ್ ಹಾಗೂ ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 6ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
6 / 6
ಈ ಹಿಂದೆ ಕ್ರಿಸ್ ಶ್ರೀಕಾಂತ್ (1982), ದಿಲೀಪ್ ವೆಂಗ್ಸರ್ಕಾರ್ (1985), ಮೊಹಮ್ಮದ್ ಅಝರುದ್ದೀನ್ (1993), ಎಂಎಸ್ ಧೋನಿ (2019), ಶ್ರೇಯಸ್ ಅಯ್ಯರ್ (2020) 3 ಪಂದ್ಯಗಳ ಸರಣಿಯಲ್ಲಿ ಹ್ಯಾಟ್ರಿಕ್ ಅರ್ಧಶತಕಗಳ ದಾಖಲೆ ಬರೆದಿದ್ದರು. ಇದೀಗ ಈ ಸಾಧನೆ ಮಾಡಿದ 6ನೇ ಭಾರತೀಯ ಆಟಗಾರನಾಗಿ ಇಶಾನ್ ಕಿಶನ್ ಹೊರಹೊಮ್ಮಿದ್ದಾರೆ.
Published On - 9:25 pm, Tue, 1 August 23