IND vs ZIM: ಜಿಂಬಾಬ್ವೆ ವಿರುದ್ಧ ದಾಖಲೆಯ ಅರ್ಧಶತಕ ಬಾರಿಸಿದ ಇಶಾನ್ ಕಿಶನ್

Updated on: Jul 25, 2026 | 5:47 PM

Ishan Kishan's 12th T20I Fifty: ಜಿಂಬಾಬ್ವೆ ವಿರುದ್ಧದ ಎರಡನೇ ಟಿ20ಯಲ್ಲಿ ಇಶಾನ್ ಕಿಶನ್ ಸ್ಫೋಟಕ ಅರ್ಧಶತಕ ಸಿಡಿಸಿ, ತಮ್ಮ ರನ್ ಬರವನ್ನು ನೀಗಿಸಿಕೊಂಡರು. 31 ಎಸೆತಗಳಲ್ಲಿ 50 ರನ್ ಗಳಿಸಿದ ಕಿಶನ್, ಟೀಂ ಇಂಡಿಯಾಕ್ಕೆ ಶತಕದ ಗಡಿ ದಾಟಲು ನೆರವಾದರು. ಇದು ಅವರ 12ನೇ ಅಂತರರಾಷ್ಟ್ರೀಯ ಟಿ20 ಅರ್ಧಶತಕವಾಗಿದ್ದು, 1500 ರನ್ ಗಡಿ ದಾಟಿದ 11ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

1 / 5
ಜಿಂಬಾಬ್ವೆ ವಿರುದ್ಧ ಹರಾರೆಯಲ್ಲಿ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಕೇವಲ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಕಳೆದ ಕೆಲವು ಪಂದ್ಯಗಳಿಂದ ಎದುರಿಸುತ್ತಿದ್ದ ರನ್ ಬರವನ್ನು ನೀಗಿಸಿಕೊಂಡರು. ಕಿಶನ್ ಅವರ ಈ ಅರ್ಧಶತಕದಿಂದಾಗಿ ಟೀಂ ಇಂಡಿಯಾ ಕೂಡ ಶತಕದ ಗಡಿ ದಾಟಿತು(PC-BCCI).

2 / 5
ಈ ಪಂದ್ಯದಲ್ಲಿ ಇಶಾನ್ ಕಿಶನ್ ಬಹುಬೇಗನೇ ಬ್ಯಾಟಿಂಗ್​ಗೆ ಬರಬೇಕಾಯಿತು. ಆರಂಭಿಕ ಅಭಿಷೇಕ್ ಶರ್ಮಾ ಎರಡನೇ ಓವರ್​ನಲ್ಲೇ ವಿಕೆಟ್ ಒಪ್ಪಿಸಿದರು. ಅಲ್ಲದೆ ವೈಭವ್ ಸೂರ್ಯವಂಶಿ ಅವರ ಇನ್ನಿಂಗ್ಸ್ ಕೂಡ 3ನೇ ಓವರ್​ಗೆ ಅಂತ್ಯವಾಯಿತು. ಹೀಗಾಗಿ ಇಶಾನ್ ಕಿಶನ್ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಮೇಲೆ ತಂಡದ ಇನ್ನಿಂಗ್ಸ್ ನಿಭಾಯಿಸುವ ಜವಾಬ್ದಾರಿ ಬಿದ್ದಿತು(PC-PTI).

3 / 5
ತಾಳ್ಮೆಯಿಂದ ತಂಡದ ಇನ್ನಿಂಗ್ಸ್ ಕಟ್ಟಿದ ಇವರಿಬ್ಬರ ನಡುವೆ ಅರ್ಧಶತಕದ ಜೊತೆಯಾಟವೂ ಮೂಡಿಬಂತು. ಆದರೆ ನಾಯಕ ಶ್ರೇಯಸ್ 25 ರನ್​ಗಳಿಗೆ ಔಟಾಗುವ ಮೂಲಕ ಇವರಿಬ್ಬರ ಜೊತೆಯಾಟ ಮುರಿದುಬಿತ್ತು. ಆದಾಗ್ಯೂ ತನ್ನ ಎಂದಿನ ಆಟವನ್ನು ಮುಂದುವರೆಸಿದ ಕಿಶನ್ ತಮ್ಮ ಅಂತರರಾಷ್ಟ್ರೀಯ ಟಿ20 ವೃತ್ತಿಜೀವನದ 12ನೇ ಅರ್ಧಶತಕವನ್ನು ಪೂರೈಸಿದರು(PC-BCCI).

4 / 5
ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಕಿಶನ್ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 1500 ರನ್​​ಗಳ ಗಡಿ ಕೂಡ ದಾಟಿದರು. ಈ ಮೂಲಕ ಈ ಸಾಧನೆ ಮಾಡಿದ ಭಾರತದ 11ನೇ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಹಾಗೆಯೇ 2026 ರಲ್ಲಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕಿಶನ್ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ(PC-PTI).

5 / 5
ಕಿಶನ್ ಅವರ ಈ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ಟೀಂ ಇಂಡಿಯಾ 15 ಓವರ್​ಗಳಲ್ಲಿ 3 ವಿಕೆಟ್‌ಗಳನ್ನು ಕಳೆದುಕೊಂಡು 158ರನ್ ಕಲೆಹಾಕಿದೆ. ಈ ಸುದ್ದಿ ಬರೆಯುವ ಹೊತ್ತಿಗೆ ಕಿಶನ್ 38 ಎಸೆತಗಳಲ್ಲಿ 73 ರನ್ ಕಲೆಹಾಕಿದ್ದಾರೆ. ಇದರಲ್ಲಿ 8 ಬೌಂಡರಿ ಹಾಗೂ 2 ಸಿಕ್ಸರ್ ಕೂಡ ಸೇರಿವೆ(PC-BCCI).

Follow Us