AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾಕ್ಕೆ ಹಿನ್ನಡೆ: 2ನೇ ಟಿ20 ಪಂದ್ಯದಿಂದ ಇಶಾನ್ ಕಿಶನ್ ಔಟ್!

ನ್ಯೂಜಿಲೆಂಡ್ ವಿರುದ್ಧದ 2ನೇ T20 ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ಗಾಯದ ಸಮಸ್ಯೆಯಿಂದಾಗಿ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಮೊದಲ T20 ಪಂದ್ಯದಲ್ಲಿ ಬಲಗಾಲಿನಲ್ಲಿ ಸೆಳೆತ ಕಾಣಿಸಿಕೊಂಡಿದ್ದು, ಬಿಸಿಸಿಐ ವೈದ್ಯಕೀಯ ತಂಡದ ನಿಗಾದಲ್ಲಿದ್ದಾರೆ. ಕಿಶನ್ ಅನುಪಸ್ಥಿತಿ ತಂಡದ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆಗೆ ಕಾರಣವಾಗಿದ್ದು, ಬದಲಿ ಆಟಗಾರನ ಆಯ್ಕೆ ಸವಾಲಾಗಿದೆ.

ಪೃಥ್ವಿಶಂಕರ
|

Updated on: Oct 23, 2026 | 4:01 PM

Share
ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಶನಿವಾರ ನಡೆಯಲಿರುವ ಎರಡನೇ ಟಿ20 ಪಂದ್ಯವನ್ನೂ ಗೆದ್ದು ಸರಣಿಯಲ್ಲಿ ತನ್ನ ಮುನ್ನಡೆಯನ್ನು 2-0 ಗೇರಿಸುವ ತವಕದಲ್ಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ದೊಡ್ಡ ಹಿನ್ನಡೆಯಾಗಿದೆ. ಗಾಯದ ಸಮಸ್ಯೆಯಿಂದಾಗಿ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಎರಡನೇ ಪಂದ್ಯದಿಂದ ಹೊರಗುಳಿದಿದ್ದಾರೆ(PC-PTI).

1 / 5
ಕಿಶನ್ ಅಲಭ್ಯತೆಯ ಬಗ್ಗೆ ಬಿಸಿಸಿಐ ಅಧಿಕೃತ ಮಾಹಿತಿ ನೀಡಿದ್ದು, ‘ಮೊದಲ ಟಿ20 ಪಂದ್ಯದ ವೇಳೆ ಇಶಾನ್ ಕಿಶನ್ ಅವರ ಬಲಗಾಲಿನಲ್ಲಿ ಸೆಳೆತ ಉಂಟಾಗಿದೆ. ಸದ್ಯ ಅವರು ಬಿಸಿಸಿಐ ವೈದ್ಯಕೀಯ ತಂಡದ ನಿಗಾದಲ್ಲಿದ್ದಾರೆ. ಹೀಗಾಗಿ, ಎರಡನೇ ಪಂದ್ಯದಲ್ಲಿ ಕಿಶನ್ ಕಣಕ್ಕಿಳಿಯುವುದಿಲ್ಲ’ ಎಂದಿದೆ(PC-PTI).

2 / 5
ಗುರುವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತ್ತು. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 4 ವಿಕೆಟ್ ನಷ್ಟಕ್ಕೆ 225 ರನ್ ಗಳಿಸಿತ್ತು. ಬೃಹತ್ ಗುರಿಯನ್ನು ಬೆನ್ನಟ್ಟಿದ ಭಾರತ, 19.4 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 226 ರನ್ ಗಳಿಸುವ ಮೂಲಕ ಐತಿಹಾಸಿಕ ಗೆಲುವು ಸಾಧಿಸಿತು(PC-PTI).

3 / 5
ಸಾಮಾನ್ಯವಾಗಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಇಶಾನ್ ಕಿಶನ್, ಈ ಪಂದ್ಯದಲ್ಲಿ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ತಿಲಕ್ ವರ್ಮಾ ಮೂರನೇ ಕ್ರಮಾಂಕದಲ್ಲಿ ಆಡಿದ್ದರು. ಆದರೆ, ಇಶಾನ್ ಕೇವಲ 3 ಎಸೆತಗಳನ್ನು ಎದುರಿಸಿ 1 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಮಿಚೆಲ್ ಸ್ಯಾಂಟ್ನರ್ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಕೈಹಾಕಿದ ಅವರು ಪೆವಿಲಿಯನ್‌ಗೆ ಮರಳಿದರು(PC-PTI).

4 / 5
ಇದೀಗ ಇಶಾನ್ ಕಿಶನ್ ಗಾಯದ ಕಾರಣದಿಂದ ಹೊರಗುಳಿದಿರುವುದು ಭಾರತ ತಂಡದ ಆಯ್ಕೆ ಸಮಿತಿಗೆ ಸವಾಲಾಗಿದೆ. ಅವರ ಅನುಪಸ್ಥಿತಿಯಲ್ಲಿ ತಂಡದ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಆಗುವ ಸಾಧ್ಯತೆಯಿದೆ. ಕಿಶನ್ ಜಾಗದಲ್ಲಿ ವೈಭವ್ ಸೂರ್ಯವಂಶಿ ಆಡುವ ಸಾಧ್ಯತೆಗಳಿರುವುದರಿಂದ ಆರಂಭಕರಲ್ಲಿ ವೈಭವ್​ಗೆ ಯಾರು ತಮ್ಮ ಸ್ಥಾನವನ್ನು ಬಿಟ್ಟುಕೊಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಪ್ರೇಮದ ಊರಲಿ’ ಒಟಿಟಿ ರಿಲೀಸ್ ಇನ್ನೂ ಆಗಿಲ್ಲ ಯಾಕೆ? ಉತ್ತರಿಸಿದ ನಿರ್ದೇಶಕ

ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಕೌಂಟರ್

ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ

ಪಿತೃಕಾರ್ಯದಲ್ಲಿ ಭಾಗವಹಿಸಲು ಪ್ರದೋಷ್​ಗೆ ಸೀಮಿತ ಅನುಮತಿ ನೀಡಿದ ಕೋರ್ಟ್

ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​

ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ

ಕಿಚ್ಚ ಸುದೀಪ್ ಆಡಿಸಿದ ಆಟಕ್ಕೆ ಬಿಗ್ ಬಾಸ್ ಸ್ಪರ್ಧಿಗಳ ತಲೆ ಗಿರಗಿರ

ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್

ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ