- TV9 Kannada Kannada News Photos Cricket Photos Ishan Kishan Injured: Out of 3rd T20I vs NZ; Team India Faces Setback
ಸರಣಿ ಗೆಲುವಿನ ಹೊಸ್ತಿಲಲ್ಲಿ ಭಾರತಕ್ಕೆ ಹಿನ್ನಡೆ; ಇಶಾನ್ ಕಿಶನ್ ಮತ್ತೆ ತಂಡದಿಂದ ಔಟ್!
ಇಶಾನ್ ಕಿಶನ್ ತೊಡೆಯ ಸ್ನಾಯು ಸೆಳೆತದಿಂದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಿಂದ ಹೊರಗುಳಿದಿದ್ದಾರೆ. ಮೊದಲ ಟಿ20 ಪಂದ್ಯದಲ್ಲಿ ಗಾಯಗೊಂಡಿದ್ದ ಕಿಶನ್, ಎರಡನೇ ಪಂದ್ಯಕ್ಕೂ ಅಲಭ್ಯರಾಗಿದ್ದರು. ಅವರ ಬದಲಿಗೆ ಕುಮಾರ್ ಕುಶಾಗ್ರ ತಂಡದಲ್ಲಿ ಮುಂದುವರಿಯಲಿದ್ದಾರೆ. ಈ ಗಾಯವು ಟೀಂ ಇಂಡಿಯಾದ ತಂಡ ಸಂಯೋಜನೆಯ ಮೇಲೆ ಪರಿಣಾಮ ಬೀರಲಿದ್ದು, ಬಿಸಿಸಿಐ ಅಧಿಕೃತವಾಗಿ ಮಾಹಿತಿ ನೀಡಿದೆ.
Updated on:Oct 26, 2026 | 5:39 PM

ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯಕ್ಕೆ ತಯಾರಿ ನಡೆಸುತ್ತಿರುವ ಟೀಂ ಇಂಡಿಯಾಗೆ ಮತ್ತೊಂದು ಹಿನ್ನಡೆಯಾಗಿದೆ. ತೊಡೆಯ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿರುವ ವಿಕೆಟ್‌ಕೀಪರ್-ಬ್ಯಾಟರ್ ಇಶಾನ್ ಕಿಶನ್, ಮೂರನೇ ಟಿ20 ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಈ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸೋಮವಾರ ಅಧಿಕೃತ ಮಾಹಿತಿ ನೀಡಿದೆ(PC-PTI).

ಕಳೆದ ವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ ಅವರ ಬಲ ತೊಡೆಯ ಸ್ನಾಯುವಿಗೆ ಸೆಳೆತ ಉಂಟಾಗಿತ್ತು. ಹೀಗಾಗಿ ಅವರು ಎರಡನೇ ಟಿ20 ಪಂದ್ಯದಿಂದಲೂ ಹೊರಗುಳಿದಿದ್ದರು. ಇದೀಗ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದರೂ, ಪಂದ್ಯದಲ್ಲಿ ಆಡುವಷ್ಟು ಸಂಪೂರ್ಣ ಫಿಟ್‌ನೆಸ್ ಇನ್ನೂ ಪಡೆದುಕೊಂಡಿಲ್ಲ(PC-PTI).

ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ ಅವರ ಬಲ ತೊಡೆಯ ಸ್ನಾಯುವಿನಲ್ಲಿ ಸಣ್ಣ ಪ್ರಮಾಣದ ಸೆಳೆತ ಉಂಟಾಗಿತ್ತು. ಅವರು ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ, ಅಕ್ಟೋಬರ್ 27ರಂದು ವೆಲ್ಲಿಂಗ್ಟನ್‌ನಲ್ಲಿ ನಡೆಯಲಿರುವ ಮೂರನೇ ಟಿ20 ಪಂದ್ಯಕ್ಕೆ ಅವರು ಅಲಭ್ಯರಾಗಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡ ಅವರ ಚೇತರಿಕೆಯ ಮೇಲೆ ನಿಗಾ ಇರಿಸಿದೆ ಎಂದು ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ(PC-PTI).

ಇಶಾನ್ ಕಿಶನ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿರುವ ಯುವ ವಿಕೆಟ್‌ಕೀಪರ್-ಬ್ಯಾಟರ್ ಕುಮಾರ್ ಕುಶಾಗ್ರ ಮೂರನೇ ಟಿ20 ಪಂದ್ಯಕ್ಕೂ ತಂಡದೊಂದಿಗೆ ಮುಂದುವರಿಯಲಿದ್ದಾರೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಆದಾಗ್ಯೂ ಕುಮಾರ್ ಕುಶಾಗ್ರಗೆ ಈ ಪಂದ್ಯದಲ್ಲೂ ಆಡುವ ಅವಕಾಶ ಸಿಗುವ ಸಾಧ್ಯತೆಗಳಿಲ್ಲ(PC-PTI).

ಏಕೆಂದರೆ ಇಶಾನ್ ಕಿಶನ್ ಗಾಯದ ಸಮಸ್ಯೆಯಿಂದಾಗಿ ಎರಡನೇ ಟಿ20 ಪಂದ್ಯದಲ್ಲಿ ಯುವ ಬ್ಯಾಟರ್ ವೈಭವ್ ಸೂರ್ಯವಂಶಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕಿತ್ತು. ಇದೀಗ ಮೂರನೇ ಪಂದ್ಯದಲ್ಲೂ ಇಶಾನ್ ಕಣಕ್ಕಿಳಿಯದ ಕಾರಣ, ತಂಡದ ಸಂಯೋಜನೆಯಲ್ಲಿ ಯಾವ ಬದಲಾವಣೆಗಳಾಗಲಿವೆ ಎಂಬ ಕುತೂಹಲ ಹೆಚ್ಚಾಗಿದೆ(PC-PTI).
Published On - 5:38 pm, Mon, 26 October 26

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More



