AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ರೋಹಿತ್ ದಾಖಲೆಯ ಜೊತೆಗೆ 19 ವರ್ಷಗಳ ಹಳೆಯ ದಾಖಲೆ ಮುರಿದ ಕಿಶನ್

Ishan Kishan T20 World Cup: ಸುಮಾರು ಎರಡೂವರೆ ವರ್ಷಗಳ ನಂತರ ಟೀಂ ಇಂಡಿಯಾಗೆ ಮರಳಿದ ಇಶಾನ್ ಕಿಶನ್, T20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸ್ಫೋಟಕ 39 ರನ್ ಗಳಿಸಿ ತಂಡಕ್ಕೆ ನೆರವಾದರು. ಈ ಮೂಲಕ ರೋಹಿತ್ ಶರ್ಮಾ ದಾಖಲೆ ಮುರಿದು, ಒಂದು ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಅಲ್ಲದೆ, ಸಂಜು ಸ್ಯಾಮ್ಸನ್ ಜೊತೆಗೂಡಿ ನಾಕೌಟ್ ಪಂದ್ಯದಲ್ಲಿ ಹೊಸ ಪಾಲುದಾರಿಕೆ ದಾಖಲೆ ನಿರ್ಮಿಸಿದರು.

ಪೃಥ್ವಿಶಂಕರ
|

Updated on: Mar 05, 2026 | 9:30 PM

Share
ಸುಮಾರು ಎರಡೂವರೆ ವರ್ಷಗಳ ನಂತರ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದ ಇಶಾನ್ ಕಿಶನ್, ಟಿ20 ವಿಶ್ವಕಪ್ ಆರಂಭಕ್ಕೆ ಸ್ವಲ್ಪ ದಿನಗಳ ಮೊದಲು ನ್ಯೂಜಿಲೆಂಡ್ ವಿರುದ್ಧ ನಡೆದಿದ್ದ ಟಿ20 ಸರಣಿಯಲ್ಲಿ ರನ್​ಗಳ ಮಳೆಹರಿಸಿದ್ದರು. ಕಿವೀಸ್ ವಿರುದ್ಧ ಕಿಶನ್ ಅವರ ಬ್ಯಾಟಿಂಗ್ ಪ್ರದರ್ಶನ ಹೇಗಿತ್ತೆಂದರೆ, ಬ್ಯಾಕಪ್ ಓಪನರ್ ಆಗಿ ಆಯ್ಕೆಯಾಗಿದ್ದರೂ, 2026 ರ ಟಿ20 ವಿಶ್ವಕಪ್‌ನಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದರು.

1 / 7
ಟಿ20 ವಿಶ್ವಕಪ್‌ನಲ್ಲಿಯೂ ಅದೇ ಫಾರ್ಮ್ ಕಾಯ್ದುಕೊಂಡ ಇಶಾನ್ ಕಿಶನ್ ಬಹುತೇಕ ಎಲ್ಲಾ ಪಂದ್ಯಗಳಲ್ಲಿ ರನ್ ಗಳಿಸಿದರು. ಇದೀಗ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿಯೂ ಸಹ, ತಂಡಕ್ಕೆ ಅವರ ಅಗತ್ಯವಿದ್ದಾಗ ನಿರಾಶೆಗೊಳಿಸದ ಇಶಾನ್ ಕಿಶನ್ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಟಿ20 ವಿಶ್ವಕಪ್​ನಲ್ಲಿ ಅಪರೂಪದ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

2 / 7
ಮಾರ್ಚ್ 5 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ, ಅಭಿಷೇಕ್ ಶರ್ಮಾ ಔಟಾದ ನಂತರ ಮೂರನೇ ಕ್ರಮಾಂಕದಲ್ಲಿ ಬಂದ ಇಶಾನ್ ಕಿಶನ್, ಅವರಿಂದ ನಿರೀಕ್ಷಿಸಿದ್ದನ್ನು ನಿಖರವಾಗಿ ನೀಡಿದರು. ಸಂಜು ಜೊತೆಗೂಡಿದ ಇಶಾನ್ ಇಂಗ್ಲೆಂಡ್ ಬೌಲರ್​ಗಳ ಬೆವರಿಳಿಸಿದರು. ಇವರಿಬ್ಬರ ಸ್ಫೋಟಕ ಬ್ಯಾಟಿಂಗ್​ನಿಂದ ಟೀಂ ಇಂಡಿಯಾ ಕೇವಲ ಒಂಬತ್ತು ಓವರ್‌ಗಳಲ್ಲಿ 100 ರನ್‌ಗಳ ಗಡಿ ದಾಟಿತು.

3 / 7
ಇಶಾನ್ ಕಿಶನ್ ಅಂತಿಮವಾಗಿ 10 ನೇ ಓವರ್‌ನಲ್ಲಿ ಔಟಾದರಾದರೂ ಆ ಹೊತ್ತಿಗೆ ತಂಡವನ್ನು ಬಲಿಷ್ಠ ಸ್ಥಿತಿಗೆ ಕೊಂಡೊಯ್ದಿದ್ದರು. ಮಾತ್ರವಲ್ಲದೆ ಕೇವಲ 18 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಿತ 39 ರನ್‌ಗಳ ಅಬ್ಬರದ ಇನ್ನಿಂಗ್ಸ್ ಕೂಡ ಆಡಿದರು. ಇದರೊಂದಿಗೆ, ಅವರು ಈ ವಿಶ್ವಕಪ್‌ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಪ್ರಸ್ತುತ ಕಿಶನ್ ಆಡಿದ ಎಂಟು ಇನ್ನಿಂಗ್ಸ್‌ಗಳಲ್ಲಿ 263 ರನ್‌ ಬಾರಿಸಿದ್ದಾರೆ.

4 / 7
ಈ 263 ರನ್‌ಗಳೊಂದಿಗೆ, ಇಶಾನ್ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದರು. ಕಳೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ 257 ರನ್‌ ಬಾರಿಸಿದ್ದರು. ಇದೀಗ ರೋಹಿತ್ ದಾಖಲೆ ಮುರಿದಿರುವ ಕಿಶನ್, ಒಂದು ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ರನ್ ಗಳಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇನ್ನು ಈ ಪಟ್ಟಿಯಲ್ಲಿ (3 ಆವೃತ್ತಿಗಳಲ್ಲಿ 319, 296, 273 ರನ್) ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ

5 / 7
ಇದಲ್ಲದೆ, ಇಶಾನ್ ಮತ್ತು ಸಂಜು 7.3 ಓವರ್‌ಗಳಲ್ಲಿ 97 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಳ್ಳುವ ಮೂಲಕ ಟಿ20 ವಿಶ್ವಕಪ್ ನಾಕೌಟ್ ಪಂದ್ಯದಲ್ಲಿ ಭಾರತದ ಪರ ಅತ್ಯಧಿಕ ಜೊತೆಯಾಟವನ್ನಾಡಿದ ಹೊಸ ದಾಖಲೆಯನ್ನು ನಿರ್ಮಿಸಿದರು.

6 / 7
ಈ ಮೂಲಕ ಈ ಹಿಂದೆ ಯುವರಾಜ್ ಸಿಂಗ್ ಮತ್ತು ರಾಬಿನ್ ಉತ್ತಪ್ಪ 19 ವರ್ಷಗಳ ಹಿಂದೆ ಸ್ಥಾಪಿಸಿದ್ದ ದಾಖಲೆಯನ್ನು ಮುರಿದರು. 2007 ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಇವರಿಬ್ಬರು 6.3 ಓವರ್‌ಗಳಲ್ಲಿ 84 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡಿದ್ದರು.

7 / 7
Follow Us
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು

ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್

ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್

ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ

ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್

ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್

ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ