
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ವಲಯ ಹಾಗೂ ಪೂರ್ವ ವಲಯ ತಂಡಗಳ ನಡುವಿನ 2026 ರ ದುಲೀಪ್ ಟ್ರೋಫಿ ಫೈನಲ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಹೀಗಾಗಿ ಮೊದಲ ಇನ್ನಿಂಗ್ಸ್ನಲ್ಲಿ ಮುನ್ನಡೆ ಸಾಧಿಸಿದ ಪೂರ್ವ ವಲಯ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಈ ಗೆಲುವಿನೊಂದಿಗೆ ಪೂರ್ವ ವಲಯ ತಂಡದ ನಾಯಕ ಇಶಾನ್ ಕಿಶನ್ ಅವರ ಅಜೇಯ ಓಟವೂ ಮುಂದುವರೆದಿದೆ(PC-PTI).
ಸೆಪ್ಟೆಂಬರ್ 6 ರಂದು ಆರಂಭವಾದ ಈ ಫೈನಲ್ ಪಂದ್ಯದ ಮೊದಲ ದಿನದಿಂದಲೂ ದಕ್ಷಿಣ ವಲಯ ತಂಡದ ವಿರುದ್ಧ ಪೂರ್ವ ವಲಯ ತಂಡ ಸಂಪೂರ್ಣ ಮೇಲುಗೈ ಸಾಧಿಸಿತು. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದ ಇಶಾನ್ ಕಿಶನ್ ನಾಯಕತ್ವದ ಪೂರ್ವ ವಲಯ ತಂಡ 2013 ರ ನಂತರ ಮತ್ತೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ(PC-PTI).
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪೂರ್ವ ವಲಯ ತಂಡ ನಾಯಕ ಇಶಾನ್ ಕಿಶನ್ ಅವರ ಸ್ಮರಣೀಯ ದ್ವಿಶತಕದ ನೆರವಿನಿಂದ 270 ರನ್ ಕಲೆಹಾಕಿತು. ಇತ್ತ ದಕ್ಷಿಣ ವಲಯ ತಂಡ ತನ್ನ ಮೊದಲ ಇನ್ನಿಂಗ್ಸ್ನಲ್ಲಿ 336 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಹೀಗಾಗಿ ಪೂರ್ವ ವಲಯ ತಂಡಕ್ಕೆ ಮೊದಲ ಇನ್ನಿಂಗ್ಸ್ನಲ್ಲಿ 372 ರನ್ಗಳ ಬೃಹತ್ ಮುನ್ನಡೆ ಪಡೆದುಕೊಂಡಿತು(PC-PTI).
ಈ ಮುನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಪೂರ್ವ ವಲಯ ತಂಡ 5ನೇ ದಿನದಂದು 7 ವಿಕೆಟ್‌ಗಳನ್ನು ಕಳೆದುಕೊಂಡು 388 ರನ್ ಕಲೆಹಾಕಿತು. ಅಂತಿಮವಾಗಿ ಪಂದ್ಯವನ್ನು ಡ್ರಾದಲ್ಲಿ ಕೊನೆಗೊಳಿಸಲು ನಿರ್ಧರಿಸಲಾಯಿತು. ಈ ಗೆಲುವಿನೊಂದಿಗೆ ಇಶಾನ್ ಕಿಶನ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದ ಸರಣಿಯನ್ನು ಮುಂದವರೆಸಿದ್ದಾರೆ(PC-PTI).
ಇಶಾನ್ ಕಿಶನ್ ಕಳೆದ 8 ವರ್ಷಗಳಿಂದ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ತಂಡದ ನಾಯಕತ್ವದ ಜವಾಬ್ದಾರಿ ಹೊತ್ತಿದ್ದಾರೆ. ಅವರ ನಾಯಕತ್ವದಲ್ಲಿ ತಂಡ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಇಶಾನ್ ಕಿಶನ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಇದುವರೆಗೆ 16 ಪಂದ್ಯಗಳಲ್ಲಿ ತಂಡದ ನಾಯಕತ್ವವಹಿಸಿದ್ದಾರೆ. ಇದರಲ್ಲಿ ತಂಡವು 8 ಪಂದ್ಯಗಳನ್ನು ಗೆದ್ದಿದ್ದರೆ, 8 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ(PC-PTI).
Published On - 2:56 pm, Thu, 10 September 26