- Kannada News Photo gallery Cricket photos It's been 41 years since England last triumphed over India on their home
ಭಾರತದಲ್ಲಿ ಮುಂದುವರೆದ ಇಂಗ್ಲೆಂಡ್ ತಂಡದ 41 ವರ್ಷಗಳ ಗೆಲುವಿನ ಕನಸು
India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರು ಪಂದ್ಯಗಳ ಸರಣಿಯ ಮೊದಲೆರಡು ಮ್ಯಾಚ್ಗಳು ಮುಗಿದಿವೆ. ಈ ಸರಣಿಯ ಮೊದಲ ಪಂದ್ಯದಲ್ಲಿ 4 ವಿಕೆಟ್ಗಳ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ, ದ್ವಿತೀಯ ಪಂದ್ಯದಲ್ಲೂ 4 ವಿಕೆಟ್ಗಳ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ.
Updated on: Feb 10, 2025 | 10:54 AM

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ವಶಪಡಿಸಿಕೊಂಡಿದೆ. ಭಾರತ ತಂಡದ ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡದ 41 ವರ್ಷಗಳ ಸರಣಿ ಗೆಲ್ಲುವ ಕನಸು ಕನಸಾಗಿಯೇ ಮುಂದುವರೆದಿದೆ.

ಅಂದರೆ ಭಾರತದಲ್ಲಿ ಇಂಗ್ಲೆಂಡ್ ಏಕದಿನ ಸರಣಿ ಗೆದ್ದು ಬರೋಬ್ಬರಿ 41 ವರ್ಷಗಳಾಗಿವೆ. ಕೊನೆಯ ಬಾರಿ ಆಂಗ್ಲರು ಭಾರತದಲ್ಲಿ ಏಕದಿನ ಸರಣಿ ಗೆದ್ದಿದ್ದು 1984 ರಲ್ಲಿ. ಅಂದು 5 ಪಂದ್ಯಗಳ ಏಕದಿನ ಸರಣಿಯನ್ನು ಇಂಗ್ಲೆಂಡ್ 4-1 ಅಂತರದಿಂದ ಗೆದ್ದುಕೊಂಡಿತ್ತು.

ಇದಾದ ಬಳಿಕ ಒಮ್ಮೆಯೂ ಆಂಗ್ಲ ಪಡೆಗೆ ಭಾರತದಲ್ಲಿ ಏಕದಿನ ಸರಣಿಯನ್ನು ಗೆಲ್ಲಲು ಸಾಧ್ಯವಾಗಿಲ್ಲ. ಈ ಬಾರಿ ಬಲಿಷ್ಠ ಪಡೆಯೊಂದಿಗೆ ಆಗಮಿಸಿದ ಇಂಗ್ಲೆಂಡ್ 40 ವರ್ಷಗಳ ಕಾಯುವಿಕೆಯನ್ನು ಅಂತ್ಯಗೊಳಿಸುವ ವಿಶ್ವಾಸದಲ್ಲಿದ್ದರು. ಆದರೆ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ಆಂಗ್ಲರ ಆಸೆಗೆ ತಣ್ಣೀರೆರಚಿದೆ.

ಈ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ಗೆ 4 ವಿಕೆಟ್ಗಳ ಸೋಲುಣಿಸಿತು. ಇನ್ನು ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು ವಶಪಡಿಸಿಕೊಂಡಿದೆ.

ಇನ್ನು ಮೂರನೇ ಏಕದಿನ ಪಂದ್ಯವು ಫೆಬ್ರವರಿ 12 ರಂದು ನಡೆಯಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸರಣಿಯನ್ನು ವೈಟ್ ವಾಶ್ ಮಾಡಿಕೊಳ್ಳುವ ಇರಾದೆಯಲ್ಲಿದೆ. ಅತ್ತ ಕೊನೆಯ ಪಂದ್ಯದಲ್ಲಾದರೂ ಇಂಗ್ಲೆಂಡ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.
























