- Kannada News Photo gallery Cricket photos Its our personal matter Shoaib Malik breaks silence on divorce reports
‘ಇದು ನಮ್ಮ ವೈಯಕ್ತಿಕ ವಿಷಯ’: ವಿಚ್ಛೇದನದ ವದಂತಿಗಳಿಗೆ ಕೊನೆಗೂ ಪ್ರತಿಕ್ರಿಯಿಸಿದ ಶೋಯೆಬ್ ಮಲಿಕ್
Saniya Mirza- Shoaib Malik: ಇದು ನಮ್ಮ ವೈಯಕ್ತಿಕ ವಿಚಾರ. ಈ ಬಗ್ಗೆ ನಾನಾಗಲಿ, ನನ್ನ ಹೆಂಡತಿಯಾಗಲಿ ಇಲ್ಲಿಯವರೆಗೆ ಯಾವುದೇ ಹೇಳಿಕೆ ನೀಡಿಲ್ಲ. ಈ ವಿಚಾರವನ್ನು ಇಲ್ಲಿಯೇ ಬಿಟ್ಟುಬಿಡಿ ಎಂದು ಶೋಯೆಬ್ ಮಲಿಕ್ ಹೇಳಿದ್ದಾರೆ.
Updated on:Dec 09, 2022 | 6:47 PM

ಕಳೆದ ಕೆಲವು ತಿಂಗಳುಗಳಿಂದ ಭಾರತದ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರ ವೈಯಕ್ತಿಕ ಬದುಕಿನಲ್ಲಿ ಉಂಟಾಗಿರುವ ಬಿರುಕಿನ ಬಗ್ಗೆ ಸಾಕಷ್ಟು ವದಂತಿಗಳು ಹರಿದಾಡುತ್ತಿವೆ.

ಆದರೆ ಈ ಬಗ್ಗೆ ಈ ಜೋಡಿಗಳು ಇದುವರೆಗೂ ಯಾವುದೇ ಅಧಿಕೃತ ಹೇಳಿಕೆ ನೀಡಿರಲಿಲ್ಲ. ಆದರೀಗ ಈ ಬಗ್ಗೆ ಸಂದರ್ಶನವೊಂದರಲ್ಲಿ ಶೋಯೆಬ್ ಮಲಿಕ್ ರೆಬಲ್ ಪ್ರತಿಕ್ರಿಯೆ ನೀಡಿದ್ದಾರೆ.

ಇದು ನಮ್ಮ ವೈಯಕ್ತಿಕ ವಿಚಾರ. ಈ ಬಗ್ಗೆ ನಾನಾಗಲಿ, ನನ್ನ ಹೆಂಡತಿಯಾಗಲಿ ಇಲ್ಲಿಯವರೆಗೆ ಯಾವುದೇ ಹೇಳಿಕೆ ನೀಡಿಲ್ಲ. ಈ ವಿಚಾರವನ್ನು ಇಲ್ಲಿಯೇ ಬಿಟ್ಟುಬಿಡಿ ಎಂದು ಶೋಯೆಬ್ ಮಲಿಕ್ ಹೇಳಿದ್ದಾರೆ. ಅಲ್ಲದೆ ಈ ಬಗ್ಗೆ ಮಾತನಾಡುವುದಕ್ಕೆ ಮಲಿಕ್ ನಿರಾಕರಿಸಿದ್ದಾರೆ.

ವಾಸ್ತವವಾಗಿ, ಈ ಜೋಡಿಯ ನಡುವೆ ಬಿರುಕು ಮೂಡಲು ಶೋಯೆಬ್ ಅವರ ಅಕ್ರಮ ಸಂಬಂಧ ಕಾರಣವೆಂದು ಪಾಕ್ ಮೀಡಿಯಾಗಳು ವರದಿ ಮಾಡಿವೆ. ಕಳೆದ ವರ್ಷ ಶೋಯೆಬ್ ಮಲಿಕ್ ಪಾಕಿಸ್ತಾನಿ ನಟಿ ಆಯೇಶಾ ಒಮರ್ ಜೊತೆ ಹಾಟ್ ಫೋಟೋಶೂಟ್ ಮಾಡಿದ್ದರು. ಇದರಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ತೆಗೆದಿದ್ದ ಅವರಿಬ್ಬರ ಹಾಟ್ ಫೋಟೋಗಳೂ ಇದ್ದವು. ಈ ಫೋಟೋಗಳು ಆ ಸಮಯದಲ್ಲಿ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಆ ವೇಳೆ ಆಯೇಶಾ ಒಮರ್ ಬಳಿ ಈ ಇಬ್ಬರ ನಡುವಿನ ಸಂಬಂಧದ ಬಗ್ಗೆ ಕೇಳಲಾಗಿತ್ತು. ಆದರೆ ಆಯೇಶಾ ಈ ಎಲ್ಲಾ ವದಂತಿಗಳನ್ನು ಸಾರಾಸಗಟಾಗಿ ನಿರಾಕರಿಸಿದ್ದರು.

2010 ರಲ್ಲಿ ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ವಿವಾಹವಾಗುವುದಾಗಿ ಹೇಳಿಕೆ ನೀಡಿದಾಗ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಆದರೆ ಈ ಎಲ್ಲಾ ಟೀಕೆಗಳಿಗೆ ಸೊಪ್ಪು ಹಾಕದ ಈ ಜೋಡಿ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು.

12 ವರ್ಷಗಳ ಕಾಲ ಜೊತೆಗೆ ಜೀವನ ನಡೆಸಿದ್ದ ಈ ದಂಪತಿಗಳಿಗೆ 2018 ರಲ್ಲಿ ಗಂಡು ಮಗು ಕೂಡ ಜನಿಸಿತ್ತು. ಆದರೆ 12 ವರ್ಷಗಳ ವೈವಾಹಿಕ ಬದುಕಿಗೆ ವಿದಾಯ ಹೇಳಲು ಮುಂದಾಗಿವೆ ಎಂದು ಹಲವು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಬಗ್ಗೆ ಸಾನಿಯಾ ಆಗಲಿ, ಶೋಯೆಬ್ ಆಗಲಿ ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
Published On - 6:47 pm, Fri, 9 December 22



















