AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಇತಿಹಾಸ ನಿರ್ಮಿಸಿದ ಜೇಕಬ್ ಬೆಥೆಲ್

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಜೇಕಬ್ ಬೆಥೆಲ್ ಮಿಂಚಿದ್ದಾರೆ. ಈ ಅರ್ಧಶತಕದೊಂದಿಗೆ ಇಂಗ್ಲೆಂಡ್​ನ ಸ್ಟಾರ್ ಬ್ಯಾಟರ್​ ಜೋ ರೂಟ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಜೇಕಬ್ ಬೆಥೆಲ್ ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ತಮ್ಮ 21ನೇ ವಯಸ್ಸಿನಲ್ಲಿ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Feb 08, 2025 | 9:04 AM

Share
ಟೀಮ್ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಇಂಗ್ಲೆಂಡ್ ಬ್ಯಾಟರ್ ಜೇಕಬ್ ಬೆಥೆಲ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟ್ ಮಾಡಿತು.

1 / 6
ಅದರಂತೆ ಇಂಗ್ಲೆಂಡ್ ಪರ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೇಕಬ್ ಬೆಥೆಲ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಟೀಮ್ ಇಂಡಿಯಾ ಬೌಲರ್​ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಬೆಥೆಲ್ 64 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 51 ರನ್ ಬಾರಿಸಿದರು.

2 / 6
ಈ ಅರ್ಧಶತಕದೊಂದಿಗೆ ಭಾರತದಲ್ಲಿ ಏಕದಿಕ ಕ್ರಿಕೆಟ್​ನಲ್ಲಿ ಹಾಫ್ ಸೆಂಚುರಿ ಸಿಡಿಸಿದ ಇಂಗ್ಲೆಂಡ್​​ನ ಅತ್ಯಂತ ಕಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಜೇಕಬ್ ಬೆಥೆಲ್ ಪಾತ್ರರಾದರು. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್ ದಾಂಡಿಗ ಜೋ ರೂಟ್ ಹೆಸರಿನಲ್ಲಿತ್ತು.

3 / 6
2013 ರಲ್ಲಿ ಮೊಹಾಲಿಯಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಜೋ ರೂಟ್ ಅರ್ಧಶತಕ ಬಾರಿಸಿದ್ದರು. ಈ ವೇಳೆ ಅವರ ವಯಸ್ಸು 22 ವರ್ಷ, 24 ದಿನಗಳು. ಈ ಮೂಲಕ ಭಾರತದಲ್ಲಿ ಅರ್ಧಶತಕ ಸಿಡಿಸಿದ ಇಂಗ್ಲೆಂಡ್​ನ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದರು.

4 / 6
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಜೇಕಬ್ ಬೆಥೆಲ್ ಯಶಸ್ವಿಯಾಗಿದ್ದಾರೆ. ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವುದರೊಂದಿಗೆ 21 ವರ್ಷದ ಬೆಥೆಲ್ ಭಾರತೀಯ ಪಿಚ್​ನಲ್ಲಿ ಹಾಫ್ ಸೆಂಚುರಿ ಸಿಡಿಸಿದ ಇಂಗ್ಲೆಂಡ್​ನ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ಇದೀಗ ಅರ್ಧಶತಕದೊಂದಿಗೆ ಭಾರತೀಯ ಪಿಚ್​ನಲ್ಲಿ ಹಾಫ್ ಸೆಂಚುರಿ ಖಾತೆ ತೆರೆದಿರುವ ಜೇಕಬ್ ಬೆಥೆಲ್ ಮುಂಬರುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಯಲಿದ್ದಾರೆ. ಆರ್​ಸಿಬಿ ಫ್ರಾಂಚೈಸಿಯು ಈ ಬಾರಿಯ ಐಪಿಎಲ್​ಗಾಗಿ ಬೆಥೆಲ್ ಅವರನ್ನು ಬರೋಬ್ಬರಿ 2.6 ಕೋಟಿ ರೂ.ಗೆ ಖರೀದಿಸಿದ್ದು, ಈ ಮೂಲಕ ಯುವ ಆಲ್​ರೌಂಡರ್​ನನ್ನು ಕಣಕ್ಕಿಳಿಸಲು ಪ್ಲ್ಯಾನ್ ರೂಪಿಸಿದೆ.

6 / 6
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್

ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!

ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ

ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್

ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ

ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ

ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು