AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವರ್ಷದಲ್ಲಿ ಇತಿಹಾಸ ನಿರ್ಮಿಸಿದ ಜೇಕಬ್ ಡಫಿ

Jacob Duffy: ನ್ಯೂಝಿಲೆಂಡ್ ವೇಗಿ ಜೇಕಬ್ ಡಫಿ ಇಂಡಿಯನ್ ಪ್ರೀಮಿಯರ್ ಲೀಗ್ 2026 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯಲಿದ್ದಾರೆ. ಕಿವೀಸ್ ವೇಗಿಯನ್ನು ಆರ್​ಸಿಬಿ ಈ ಬಾರಿಯ ಮಿನಿ ಹರಾಜಿನ ಮೂಲಕ ಕೇವಲ 2 ಕೋಟಿ ರೂ.ಗೆ ಖರೀದಿಸಿದೆ. ಅದರಂತೆ ಮುಂದಿನ ಸೀಸನ್​ನಲ್ಲಿ ಡಫಿ ಆರ್​ಸಿಬಿ ತಂಡದ ಬೌಲಿಂಗ್ ಯುನಿಟ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 23, 2025 | 7:59 AM

Share
ನ್ಯೂಝಿಲೆಂಡ್ ವೇಗಿ ಜೇಕಬ್ ಡಫಿ (Jacob Duffy) ಟೆಸ್ಟ್​ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಒಂದೇ ವರ್ಷದೊಳಗೆ ಎಂಬುದು ವಿಶೇಷ. ಅಂದರೆ 2025 ರಲ್ಲಿ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಡಫಿ ವಿಕೆಟ್​ಗಳ ಬೇಟೆಯೊಂದಿಗೆ ಇದೀಗ ದಾಖಲೆ ಪುಟದಲ್ಲಿ ಸ್ಥಾನ ಪಡೆದಿದ್ದಾರೆ.

1 / 5
ಈ ವರ್ಷ 36 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಜೇಕಬ್ ಡಫಿ 325 ಓವರ್​ಗಳನ್ನು ಎಸೆದಿದ್ದಾರೆ. ಈ ವೇಳೆ ಪಡೆದಿರುವುದು ಬರೋಬ್ಬರಿ 81 ವಿಕೆಟ್​ಗಳು. ಅಂದರೆ 2025 ರಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎಂಬ ದಾಖಲೆ ಡಫಿ ಪಾಲಾಗಿದೆ.

2 / 5
ಅಷ್ಟೇ ಅಲ್ಲದೆ ನ್ಯೂಝಿಲೆಂಡ್ ಪರ ಒಂದೇ ವರ್ಷದೊಳಗೆ ಅತ್ಯಧಿಕ ವಿಕೆಟ್ ಕಬಳಿಸಿದ ದಾಖಲೆ ಕೂಡ ಡಫಿ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ರೆಕಾರ್ಡ್ ರಿಚರ್ಡ್ ಹ್ಯಾಡ್ಲಿ ಹೆಸರಿನಲ್ಲಿತ್ತು. 1985 ರಲ್ಲಿ 79 ವಿಕೆಟ್ ಕಬಳಿಸಿ ಹ್ಯಾಡ್ಲಿ ದಾಖಲೆ ಬರೆದಿದ್ದರು. ಇದೀಗ 81 ವಿಕೆಟ್​ಗಳೊಂದಿಗೆ ಜೇಕಬ್ ಡಫಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

3 / 5
ಹಾಗೆಯೇ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ನ್ಯೂಝಿಲೆಂಡ್ ಪರ ಒಂದೇ ಸರಣಿಯಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ಟ್ರೆಂಟ್ ಬೌಲ್ಟ್ ದಾಖಲೆಯನ್ನು ಕೂಡ ಡಫಿ ಮುರಿದಿದ್ದಾರೆ. ಬೌಲ್ಟ್ 2013 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ 20 ವಿಕೆಟ್ ಕಬಳಿಸಿ ತವರಿನಲ್ಲಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ತವರಿನ ಟೆಸ್ಟ್ ಸರಣಿಯಲ್ಲಿ ವಿಂಡೀಸ್ ವಿರುದ್ಧ 23 ವಿಕೆಟ್ ಉರುಳಿಸಿ ಜೇಕಬ್ ಡಫಿ ಕಿವೀಸ್ ಪರ ಹೊಸ ದಾಖಲೆ ಬರೆದಿದ್ದಾರೆ.

4 / 5
ಇಷ್ಟೇ ಅಲ್ಲದೆ ಒಂದೇ ವರ್ಷದೊಳಗೆ ಜೇಕಬ್ ಡಫಿ ಮೂರು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ವರ್ಷವೇ ಮೂರು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಇಂಟರ್​ನ್ಯಾಷನಲ್ ಕ್ರಿಕೆಟ್​ಗೆ ಎಂಟ್ರಿ ಕೊಟ್ಟ ವರ್ಷವೇ ಡಫಿ ಕಡೆಯಿಂದ ಭರ್ಜರಿ ಪ್ರದರ್ಶನ ಮೂಡಿಬಂದಿದ್ದು, ಈ ಅಮೋಘ ಪ್ರದರ್ಶನದೊಂದಿಗೆ ಕಿವೀಸ್ ವೇಗಿ ಕ್ರಿಕೆಟ್​ ಅಂಗಳದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.

5 / 5
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ

5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ