AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಮೂವರು ಶತಕ ವಂಚಿತರು..!

India vs England: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾರ ಅರ್ಧಶತಕಗಳ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 436 ರನ್ ಪೇರಿಸಿದೆ. ಈ ಮೂಲಕ ಮೊದಲ ಇನಿಂಗ್ಸ್​ನಲ್ಲಿ 190 ರನ್​ಗಳ ಬೃಹತ್ ಮುನ್ನಡೆ ಪಡೆದುಕೊಂಡಿದೆ.

TV9 Web
| Edited By: |

Updated on: Jan 27, 2024 | 12:32 PM

Share
ಹೈದರಾಬಾದ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 246 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಮೂವರು ಅರ್ಧಶತಕ ಬಾರಿಸಿ ಮಿಂಚಿದರು.

1 / 6
ಆದರೆ ಈ ಮೂವರು ದಾಂಡಿಗರು ಕೂಡ 90ರ ಅಸುಪಾಸಿನಲ್ಲಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಅಂದರೆ ಶತಕ ಪೂರೈಸಲು ಉತ್ತಮ ಅವಕಾಶವಿದ್ದರೂ ಟೀಮ್ ಇಂಡಿಯಾ ಬ್ಯಾಟರ್​ಗಳು ಆ ಚಾನ್ಸ್​ಗಳನ್ನು ಕೈಚೆಲ್ಲಿಕೊಂಡಿದ್ದಾರೆ.

2 / 6
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದರಲ್ಲೂ ಬಾಝ್​ಬಾಲ್​ಗೆ ಪರ್ಯಾಯವಾಗಿ ಜೈಸ್​ಬಾಲ್ ಆಟ ತೋರಿಸಿದ್ದ ಜೈಸ್ವಾಲ್ ಕೇವಲ 74 ಎಸೆತಗಳಲ್ಲಿ 3 ಸಿಕ್ಸ್ 80 ರನ್ ಬಾರಿಸಿದ್ದರು. ಆದರೆ 2ನೇ ದಿನದಾಟದ ಆರಂಭದಲ್ಲೇ ಜೋ ರೂಟ್​ಗೆ ಸುಲಭ ಕ್ಯಾಚ್ ನೀಡುವ ಮೂಲಕ ಜೈಸ್ವಾಲ್ ಶತಕ ಬಾರಿಸುವ ಅವಕಾಶವನ್ನು ಕೈಚೆಲ್ಲಿಕೊಂಡರು.

3 / 6
ಇದಾದ ಬಳಿಕ ನಾಲ್ಕನೇ ಕ್ರಮಾಂಕದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಕೆಎಲ್ ರಾಹುಲ್ ಕಡೆಯಿಂದ ಕೂಡ ಶತಕ ನಿರೀಕ್ಷಿಸಲಾಗಿತ್ತು. ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ರನ್ ಪೇರಿಸುತ್ತಾ ಸಾಗಿದ ರಾಹುಲ್ 86 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಕೇವಲ 14 ರನ್​ಗಳಿಂದ ಶತಕ ವಂಚಿತರಾದರು.

4 / 6
ಇನ್ನು ಆರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ರವೀಂದ್ರ ಜಡೇಜಾ 2ನೇ ದಿನದಾಟದ ಮುಕ್ತಾಯದ ವೇಳೆಗೆ ಅರ್ಧಶತಕ ಪೂರೈಸಿದ್ದರು. ಅಲ್ಲದೆ ಮೂರನೇ ದಿನದಾಟದಲ್ಲಿ ಶತಕ ಪೂರೈಸುವುದನ್ನು ನಿರೀಕ್ಷಿಸಲಾಗಿತ್ತು. ಆದರೆ 180 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 87 ರನ್ ಬಾರಿಸಿ ಜೋ ರೂಟ್ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆದರು. ಇದರೊಂದಿಗೆ ಕೇವಲ 13 ರನ್​ಗಳಿಂದ ಜಡೇಜಾ ಕೂಡ ಶತಕ ವಂಚಿತರಾಗಿ ನಿರಾಸೆ ಮೂಡಿಸಿದರು.

5 / 6
ಈ ಮೂವರ ಅರ್ಧಶತಕಗಳ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 436 ರನ್ ಪೇರಿಸಿದೆ. ಈ ಮೂಲಕ ಮೊದಲ ಇನಿಂಗ್ಸ್​ನಲ್ಲಿ 190 ರನ್​ಗಳ ಬೃಹತ್ ಮುನ್ನಡೆ ಪಡೆದುಕೊಂಡಿದೆ. ಸದ್ಯ ಇಂಗ್ಲೆಂಡ್ ದ್ವಿತೀಯ ಇನಿಂಗ್ಸ್ ಆಡುತ್ತಿದ್ದು, 19 ಓವರ್​ಗಳ ಮುಕ್ತಾಯದ ವೇಳೆ 2 ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಿದೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ